Daily Horoscope: ಈ ರಾಶಿಯವರಿಗೆ ಆಭರಣ ಖರೀದಿಗೆ ಇಂದು ಉತ್ತಮ ದಿನ
21 ಡಿಸೆಂಬರ್ 2024: ಶನಿವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನ್ಯಾಯ ನಿರ್ಣಯವನ್ನು ಕೊಡುವ ಸಂದರ್ಭ ಬರಬಹುದು. ಅರಿವಿಗೆ ಬಾರದೇ ಕೆಲವು ತಪ್ಪುಗಳು ನಡೆಯುವುದು. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಹಾಗಾದರೆ ಡಿಸೆಂಬರ್ 21ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಪ್ರೀತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:43 ರಿಂದ 11:07ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:55 ರಿಂದ 03:19 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 06:54 ರಿಂದ 08:18 ರವರೆಗೆ.
ಮೇಷ ರಾಶಿ: ಇಂದು ನಿಮ್ಮ ಒರಟು ಮಾತಿನಿಂದ ಸಂಗಾತಿಗೆ ಬೇಸರವಾಗುವುದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ನಿಮ್ಮ ವ್ಯಾಪಾರದ ತಂತ್ರವು ಫಲಿಸಬಹುದು. ವ್ಯಾಪಾರದಲ್ಲಿ ಲಾಭವನ್ನು ತಂದೀತು. ಸನ್ನಿವೇಶಕ್ಕೆ ತಕ್ಕುದಾದ ಮಾತನ್ನು ಆಡಿ. ಎಲ್ಲ ಕಾರ್ಯಕ್ಕೂ ಲಾಭವನ್ನು ನಿರೀಕ್ಷಿಸುವುದು ಬೇಡ. ಅನುವಾದಕರಿಗೆ ಹೆಚ್ಚು ಕಾರ್ಯಗಳು ಬರಬಹುದು. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.
ವೃಷಭ ರಾಶಿ; ನ್ಯಾಯ ನಿರ್ಣಯವನ್ನು ಕೊಡುವ ಸಂದರ್ಭ ಬರಬಹುದು. ಅರಿವಿಗೆ ಬಾರದೇ ಕೆಲವು ತಪ್ಪುಗಳು ನಡೆಯುವುದು. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಬರಬೇಕಾದ ಹಣವು ಆಕಸ್ಮಿಕವಾಗಿ ಬಂದಿದ್ದು ಖುಷಿ ಕೊಡುವುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ಇಂದಿನ ನಿಮ್ಮ ಪ್ರಯಾಣದ ವಿಚಾರದಲ್ಲಿ ಬಹಳ ಗೊಂದಲ ಉಂಟಾಗಬಹುದು. ನಿಮ್ಮ ತಪ್ಪಿಗೂ ಇನ್ನೊಬ್ಬರನ್ನು ಕೈ ಮಾಡಿ ತೋರಿಸುವುದು ಬೇಡ. ಮಾತಿನಿಂದಲೇ ಸಂಕಟವನ್ನು ತಂದುಕೊಳ್ಳುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ.
ಮಿಥುನ ರಾಶಿ: ಬೆಟ್ಟದಷ್ಟು ಕಾರ್ಯಗಳಿದ್ದು ಕಲ್ಲಿನಂತೆ ಬಿದ್ದಿದ್ದರೆ ಯಾರೂ ಏನೂ ಮಾಡಲಾಗದು. ಇರುವ ಚೈತನ್ಯವನ್ನು ಬೆಳೆಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳಬಡೆಕು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನೀವು ತಳ್ಳಿಹಾಕುವಿರಿ. ವ್ಯವಹಾರದಲ್ಲಿ ಇರಬೇಕಾದ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕಾಗುವುದು. ಪ್ರೀತಿಯ ಮಾತುಗಳಿಂದ ನಿಮ್ಮತ್ತ ಜನರು ಆಕರ್ಷಿತರಾಗುವುದು. ವಿದ್ಯಾರ್ಥಿಗಳಿಗೆ ಅನ್ಯರ ಸಹವಾಸ ಸಿಗಬಹುದು. ಬಿಡುಗಡೆಗಾಗಿ ದಾರಿಯನ್ನು ನೀವೇ ಹುಡುಕಿಕೊಳ್ಳುವಿರಿ.
ಕರ್ಕಾಟಕ ರಾಶಿ: ಇಂದು ಮನೆಯಲ್ಲಿ ಕೊರತೆಗಳಿದ್ದರೂ ಅದನ್ನು ತೋರಿಸದಂತೆ ನಡೆದುಕೊಳ್ಳುವಿರಿ. ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ. ಕಾರ್ಯದ ಒತ್ತಡದಿಂದ ಶಿರೋವೇದನೆ ಕಾಣಿಸಿಕೊಳ್ಳುವುದು. ಇಂದು ನೀವು ಮಾಡಿದ ಕೆಲಸವು ನಿಷ್ಪ್ರಯೋಜಕವಾಗಲಿದೆ. ಬೇಸರವನ್ನು ಕಳೆಯಲು ಎಲ್ಲಿಗಾದರೂ ಹೋಗುವಿರಿ. ಸಹಾಯವನ್ನು ಕೇಳಿ ಬಂದವರಿಗೆ ಇಲ್ಲ ಎನ್ನುವುದು ಬೇಡ. ನಿಮಗಾಗಿ ಬೇರೆಯವರು ತಮ್ಮ ಯೋಜನೆಯನ್ನು ಬದಲಾಯಿಸುವರು.
ಸಿಂಹ ರಾಶಿ: ವ್ಯಾಪಾರ ವಿಸ್ತರಣೆಗೆ ಯೋಚಜನೆಯು ತೀರ್ಮಾನವಾಗುವುದು. ಉತ್ತಮ ಹೂಡಿಕೆ ಅವಕಾಶಗಳು ದೊರೆಯಲಿವೆ. ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸುವುದು ಬೇಡ. ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು. ನಿಮ್ಮ ಕಾರ್ಯಕ್ಕೆ ಇನ್ಯಾರೋ ಯಶಸ್ಸು ಪಡೆವರು. ಸಂಗಾತಿಯ ಬಗ್ಗೆ ಇದ್ದ ಪೂರ್ವಾಗ್ರಹವು ಬದಲಾಗಿ ಅವರ ಜೊತೆ ಅನ್ಯೋನ್ಯವಾಗಿ ಇರುವಿರಿ. ಒಂದೇ ಕಾರ್ಯವನ್ನು ಎರಡು ರೀತಿಯ ಲಾಭವಾಗುವಂತೆ ನೋಡಿಕೊಳ್ಳುವಿರಿ.
ಕನ್ಯಾ ರಾಶಿ: ಇಂದು ಉದ್ಯೋಗ ಬದಲಾವಣೆಗೆ ಒತ್ತಡ ಬರಲಿದೆ. ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ಇಲ್ಲವಾದರೆ ನಿಮಗೇ ತೊಂದರೆ. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ. ಅನ್ಯರನ್ನು ಪೀಡಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಕಾನೂನಿನ ಕೆಲಸವನ್ನು ಯಾರ ಸಲಹೆಯನ್ನು ಪಡೆಯದೇ ಮಾಡುವಿರಿ. ಕ್ರೀಡೆಯಲ್ಲಿ ನಿಮಗೆ ಸೋಲಾಗುವುದು. ಯಾವುದೇ ಸ್ಪರ್ಧೆಯಲ್ಲಿ ಭಾಗಹಿಸುವುದು ಬೇಡ. ಭವಿಷ್ಯದ ಭದ್ರೆತೆಗೆ ಬೇಕಾದ ಬುನಾದಿಯನ್ನು ಹಾಕಿಕೊಳ್ಳುವಿರಿ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು.