Daily Horoscope: ಈ ರಾಶಿಯವರು ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ಇರಲಾರಿರಿ
19 ಡಿಸೆಂಬರ್ 2024: ಗುರುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಹಾಗಾದರೆ ಡಿಸೆಂಬರ್ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವೈಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:54 ರಿಂದ 03:18ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:53 ರಿಂದ 08:17 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:42 ರಿಂದ 11:06 ರವರೆಗೆ.
ಮೇಷ ರಾಶಿ: ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ ಉಂಟಾದ ನೋವಿನಿಂದ ನಿಧಾನವಾಗಿ ಆಚೆ ಬರಬಹುದು. ದುಃಖ ಶಮನಕ್ಕೆ ಏನಾದರೂ ಮಾರ್ಗವನ್ನು ಕಂಡುಕೊಳ್ಳುವುದು ಸೂಕ್ತ. ಯಾರದ್ದಾದರೂ ಸಣ್ಣ ಸಹಾಯವನ್ನೂ ನೀವು ನಿರೀಕ್ಷಿಸುವಿರಿ. ಸಕಾಲಕ್ಕೆ ಸಿಕ್ಕ ಸೌಕರ್ಯದಿಂದ ನಿಮ್ಮ ಕಾರ್ಯವು ಸುಲಲಿತವಾಗುವುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು.
ವೃಷಭ ರಾಶಿ: ಇಷ್ಟದ ವಸ್ತುವಿನ ಪ್ರಾಪ್ತಿಯ ಸಂತೋಷವಿದ್ದರೂ ಖರ್ಚಿನ ನೋವು ನಿಮ್ಮನ್ನು ಕಾಡಬಹುದು. ಮಾತಿಗೆ ಮಾತು ಬೆಳೆಯಬಹುದು. ಅದನ್ನು ನಿಭಾಯಿಸುವ ಕಲೆ ಗೊತ್ತಿರಲಿ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಇಂದು ನಿಮಗೆ ಸಣ್ಣ ವಿಚಾರಗಳೂ ಬಹಳ ಮುಖ್ಯವಾಗುತ್ತವೆ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಕುಟುಂಬದ ಪೋಷಣೆಯಲ್ಲಿ ಇಂದು ಸಹಭಾಗಿತ್ವ ಇರುವುದು. ವೃತ್ತಿಯ ಸ್ಥಳದಲ್ಲಿ ತೇಜೋವಧೆಯಾಗುವ ಸಂದರ್ಭವು ಬರಬಹುದು. ಬೇಕೆಂದೇ ನಿಮ್ಮ ಮೇಲೆ ಒತ್ತಡ ತರಬಹುದು. ಸ್ನೇಹಿತರು ನಿಮ್ಮನ್ನು ದೂರವಿಟ್ಟಾರು. ಸಂಗಾತಿಯ ಅನಾದರವು ನಿಮ್ಮನ್ನು ಬಹಳ ಕಾಡಬಹುದು. ವೈಫಲ್ಯವನ್ನು ಸಕಾರಾತ್ಮಕ ದೃಷ್ಟಿಯಿಂದ ನೋಡಿ. ಮಕ್ಕಳಿಗೆ ಕಡಿವಾಣ ಹಾಕಲು ಹೋಗುವುದು ಬೇಡ. ಅವರ ಮೇಲೆ ನಿಮ್ಮ ನಿಗಾ ಇರಲಿ. ನೀವು ಯಾರಿಗೂ ಭಾರವಾಗದಂತೆ ಇರಬೇಕೆನಿಸುವುದು.
ಮಿಥುನ ರಾಶಿ: ಹೊಸ ಬಾಂಧವ್ಯವನ್ನು ಬೆಳೆಸುವ ಪ್ರಯತ್ನ ಮಾಡುವಿರಿ. ಇಂದು ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ಪ್ರಯಾಣದಲ್ಲಿ ತೊಂದರೆ ಬರಬಹುದು. ತಪ್ಪನ್ನು ಸರಿಮಾಡಿಕೊಳ್ಳುವ ಮಾರ್ಗದಲ್ಲಿ ಯೋಚನೆ ಇರಲಿ. ನಿಮಗೆ ಕಾರ್ಯದಲ್ಲಿ ನಿಷ್ಠೆ ಇಲ್ಲ ಎಂದು ಸಾಬೀತಾಗಬಹುದು. ವ್ಯವಹಾರದಲ್ಲಿ ಮುಗ್ಗರಿಸುವ ಸಂದರ್ಭವು ಬರಬಹುದು. ಸಾಲವನ್ನು ಕೊಡುವ ಸಂದರ್ಭವು ಬರಬಹುದು. ಏನಾದರೂ ಹೇಳಿ ತಪ್ಪಿಸಿಕೊಳ್ಳುವುದು ಸೂಕ್ತ. ನಿಮ್ಮ ನೌಕರರ ತಪ್ಪಿಗೆ ನೀವು ಉತ್ತರಿಸಬೇಕಾದೀತು. ತಂದೆಯ ವ್ಯವಹಾರದಲ್ಲಿ ಮಧ್ಯ ಪ್ರವೇಶ ಮಾಡುವುದು ಬೇಡ. ದ್ವಿಚಕ್ರ ವಾಹನದ ಮೇಲೆ ಜಿಗುಪ್ಸೆ ಬಂದೀತು. ಇಂದಿನ ಒತ್ತಡವನ್ನು ಸಹಿಸಿಕೊಂಡು ಇರುವುದು ಕಷ್ಟವಾದೀತು. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು.
ಕರ್ಕಾಟಕ ರಾಶಿ; ಉದ್ಯೋಗದಲ್ಲಿ ಹೇಗಾದರೂ ಪ್ರಗತಿಯನ್ನು ಕಾಣುವ ಮನಸ್ಸಾಗುವುದು. ಯಾರದೋ ಯೋಜನೆಯನ್ನು ನೀವು ಬಳಸಿಕೊಳ್ಳಬಹುದು. ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಸಿಗಲಿದೆ. ನಿಮ್ಮ ಶ್ರಮವು ದುರುಪಯೋಗವಾಗುವುದು. ಅಪರಿಚಿತ ವ್ಯಕ್ತಿಗಳ ಜೊತೆ ವ್ಯಾಪರ ಸಂಬಂಧವು ಬರುವುದು. ದೂರಪ್ರಯಾಣದಿಂದ ನಿಮಗೆ ಖರ್ಚಾಗುವುದು ಗೊತ್ತಾಗದೇ ಹೋಗಬಹುದು. ನ್ಯಾಯಸಮ್ಮತ ಮಾರ್ಗದಲ್ಲಿ ನೀವು ಇರುವುದು ಸೂಕ್ತ. ಹಿರಿಯರ ಜೊತೆ ಔಚಿತ್ಯ ರೀತಿಯಿಂದ ವ್ಯವಸ್ಥೆ ವ್ಯವಹರಿಸಿ. ಸ್ತ್ರೀಯರಿಂದ ಅಪಮಾನವಾಗುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಆಶ್ಚರ್ಯ ಉಂಟಾಗಬಹುದು. ಸಂಗಾತಿಯ ಜೊತೆ ಆರಾಮಾಗಿ ಮಾತನಾಡುವಿರಿ. ಕುಟುಂಬದ ಜೊತೆ ಕಳೆಯುವ ಕಾಲವು ನಿಮಗೆ ನೆನಪಿನಲ್ಲಿ ಉಳಿಯುವಂತೆ ಆಗುವುದು. ಕಾರ್ಯದಲ್ಲಿ ಶ್ರದ್ಧೆಯನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು.
ಸಿಂಹ ರಾಶಿ: ಎಂದೋ ಮಾಡಿದ ಅಲ್ಪ ಶುಭಕಾರ್ಯವೂ ನಿಮಗೆ ಇಂದು ಫಲ ಕೊಡುವುದು. ಅನಪೇಕ್ಷಿತ ಮಾತನ್ನು ಬಿಡುವುದು ಒಳ್ಳೆಯದು. ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ಕೃಷಿಯಲ್ಲಿ ಲಾಭವನ್ನು ಪಡೆಯಲು ಹೆಚ್ಚಿನ ಓಡಾಟ ಮಾಡಬೇಕಾಗುವುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು. ಸಂಗಾತಿಯು ನಿಮ್ಮ ನಡೆಯನ್ನು ಅನುಮಾನಸಿಬಹುದು. ಯಾರದೋ ಬಲವಂತಕ್ಕೆ ಸಿಕ್ಕಿಕೊಳ್ಳುವಿರಿ. ಉದ್ಯೋಗವನ್ನು ಬದಲಾಯಿಸಲು ಇರುವ ಉದ್ಯೋಗವನ್ನು ಬಿಟ್ಟುಬಿಡುವಿರಿ. ಸ್ಪರ್ಧಾತ್ಮಕ ಪರೀಕ್ಷೆಗೆ ನಿಮ್ಮ ಪ್ರಯತ್ನ ಸಾಲದು. ಹುಡುಗಾಟದ ಮನೋಭಾವವು ಇರಲಿದೆ. ಸ್ನೇಹಿತರ ಕೆಲವು ಸಂಗತಿಗಳು ನಿಮಗೆ ಇಷ್ಟವಾಗದು. ನಿಮ್ಮನ್ನು ಪ್ರಶಂಸಿಸಿದಂತೆ ಕಂಡರೂ ಅದು ತೆಗಳಿಕೆಯಾಗಿರಲಿದೆ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.
ಕನ್ಯಾ ರಾಶಿ: ತೊಂದರೆಗಳನ್ನು ನಿವಾರಿಸುತ್ತಲೇ ಸಮಯ ಕಳೆದುಹೋಗುವುದು. ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ಅವಿಶ್ರಾಂತ ಕಾರ್ಯದಿಂದ ಮನಸ್ಸಿಗೆ ತೊಂದರೆ ಸಾಧ್ಯ. ಅಪರಿಚಿತ ಕರೆಗಳು ನಿಮಗೆ ಹಿಂಸೆಯನ್ನು ಕೊಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಪೂರ್ಣ ಸಮಾಧಾನ ಇರದು. ವಿವಾಹವಾದರೂ ಭವಿಷ್ಯದ ಬಗ್ಗೆ ನಕಾರಾತ್ಮಕ ಆಲೋಚನೆಯು ಇರಲಿದೆ. ನಿಮಗೆ ಅಭದ್ರತೆಯು ಕಾಡಬಹುದು. ಮಕ್ಕಳ ಸಂತೋಷದಲ್ಲಿ ನೆಮ್ಮದಿ ಇರಲಿದೆ. ನಿಮ್ಮ ಗೌಪ್ಯ ಸಂಗತಿಗಳನ್ನು ಯಾರ ಜೊತೆಗಾದರೂ ಗೊತ್ತಿಲ್ಲದೇ ಹಂಚಿಕೊಳ್ಳುವಿರಿ. ದೇವಾಲಯಕ್ಕೆ ಹೋಗಿ ಸ್ವಲ್ಪ ಕಾಲ ಇದ್ದು ಬರುವುದು ಉತ್ತಮ. ನಿಮ್ಮ ಬಗ್ಗೆ ಬಂಧುಗಳು ಮಾತಾನಾಡಿಕೊಳ್ಳುವುದು ಗೊತ್ತಾದೀತು. ಒಳ್ಳೆಯ ಮಾತುಗಳು ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವುದು.