
ಬೆಂಗಳೂರು, ಮಾರ್ಚ್ 07: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:45 – 11:14, ಯಮಘಂಡ ಕಾಲ 14:13 – 15:42, ಗುಳಿಕ ಕಾಲ 06:46 – 08:15.
ಮೇಷ ರಾಶಿ: ಇಂದಿನ ಕಾರ್ಯವನ್ನು ಕರ್ತವ್ಯ ಪರತೆಯಿಂದ ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡರೂ ಮಿತಿಯಲ್ಲಿ ಎಲ್ಲವೂ ಇರಲಿ. ದೇಹಾಯಾಸದ ಕಡೆಗೆ ಅಧಿಕ ಗಮನ ಅಗತ್ಯ. ಹೋರಾಟದ ಮನೋಭಾವವು ಇಂದು ಎದ್ದು ತೋರಬಹುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಒಪ್ಪಂದವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಸ್ಥಿರತೆಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಬಹುದು.
ವೃಷಭ ರಾಶಿ: ಇಂದು ಅನಿವಾರ್ಯತೆಯನ್ನು ಅವಶ್ಯಕತೆಯನ್ನಾಗಿಸಿ ಮಾಡಿಕೊಳ್ಳುವಿರಿ. ನಿಮ್ಮವರ ಮೇಲೆ ಕಾಳಜಿಯು ಅಧಿಕಾದೀತು. ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಬಹುದಿನಗಳಿಂದ ಇದ್ದ ಚಿಂತೆ ದೂರವಾಗಲಿದೆ. ದಾನ ಕಾರ್ಯಗಳಲ್ಲಿ ಭಾಗಿಯಾಗಿ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಯಾರನ್ನೋ ಹಿಂದಿಕ್ಕಿ ಮುಂಬರುವ ಯೋಚನೆ ಸಾಧುವಾಗದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ಅನಪೇಕ್ಷಿತ ವಿಚಾರದಲ್ಲಿ ಮೂಗುತೂರಿಸುವುದು ಬೇಡ. ನಿಮ್ಮ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ.
ಮಿಥುನ ರಾಶಿ: ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಏಕಾಂಗಿಯಾಗಬಹುದು. ಕ್ರೀಡೆಯ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವು ಉಂಟಾಗಬಹುದು. ನಿಮಗೆ ಹೊಸ ಸ್ಥಳಕ್ಕೆ ಹೋಗಲು ಅವಕಾಶ ಸಿಗುತ್ತದೆ. ಅದು ನಿಮಗೆ ಪ್ರಗತಿಯ ಹೊಸ ಮಾರ್ಗಗಳನ್ನು ನೀಡುತ್ತದೆ. ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ವೃತ್ತಿಯನ್ನು ಬಿಟ್ಟು ಹೆಚ್ಚಿನ ಆದಾಯದ ಕಡೆಗೆ ಗಮನಹರಿಸುವಿರಿ. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಯಾವುದರೂ ರೀತಿಯಲ್ಲಿ ಮರಣದ ಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ.
ಕರ್ಕಾಟಕ ರಾಶಿ: ನಿಮ್ಮ ಮೇಲೆ ನಿಮಗೆ ನಂಬಿಕೆಯು ಕಡಿಮೆ ಆದಂತೆ ತೋರುವುದು. ನಿಮ್ಮ ತಾಯಿ ಆರೋಗ್ಯಕ್ಕಾಗಿ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು. ದುಂದುವೆಚ್ಚದ ಕಡೆ ಗಮನವಿರಲಿ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಮನಸ್ಸು ಚಂಚಲವಾಗಿ ಇರಬಹುದು. ಕುಟುಂಬ ಜೀವನದಲ್ಲಿ ಒತ್ತಡ ಹೆಚ್ಚಾಗಲಿದೆ. ಕೆಲಸದ ಸ್ಥಳದಲ್ಲಿ ಕಾರಣವಿಲ್ಲದೆ ಯಾರೊಂದಿಗೂ ಜಗಳವಾಡಬೇಡಿ. ಆಸ್ತಿಯ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭೌತಿಕ ವಸ್ತುಗಳು ನಿಮಗೆ ಅಲ್ಪಸಂತೋಷವನ್ನು ಕೊಟ್ಟೀತು. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಬೇಡವೆಂದು ಯಾವುದನ್ನಾದರೂ ಕೊಡುವ ಮೊದಲು ಯೋಚಿಸಿ.
ಸಿಂಹ ರಾಶಿ: ನಿಮ್ಮ ಮೃದುಸ್ವಭಾವವು ಕೆಲವು ಕಡೆಗಳಲ್ಲಿ ಪ್ರಯೋಜನಕ್ಕೆ ಬಾರದು. ಪ್ರತ್ಯಕ್ಷವಾದ ವಿಚಾರವಾದರೂ ಪೂರ್ಣವಾಗಿ ನಂಬಬೇಕಿಲ್ಲ. ನಿಮ್ಮ ಕಠಿಣ ಪರಿಶ್ರಮಕ್ಕೆ ಪೂರ್ಣ ಪ್ರತಿಫಲ ಸಿಗಲಿದೆ. ಜನರು ನಿಮ್ಮನ್ನು ಮೆಚ್ಚುತ್ತಾರೆ. ಕೆಲವು ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಪೂರಕವಾಗಿಯೇ ಇರುತ್ತದೆ. ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಪಾಲುದಾರಿಕೆಯಲ್ಲಿ ಅಸಹಜ ಮಾತುಕತೆಗಳು ಬರಬಹುದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ಕೆಲವು ವಿಚಾರದಲ್ಲಿ ನಿಮ್ಮ ಊಹೆಯು ತಪ್ಪಾದೀತು. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳಬಹುದು.
ಕನ್ಯಾ ರಾಶಿ: ನಿಮ್ಮ ಹದಗೆಟ್ಟ ಆರೋಗ್ಯವು ಉತ್ತಮವಾಗಲು ಸ್ಥಳ ಪರಿವರ್ತನೆ ಅಗತ್ಯವಾಗಬಹುದು. ಕುಟುಂಬದ ಜೊತೆ ಮಾತುಕತೆಗಳನ್ನು ನಡೆಸುವಿರಿ. ಆರ್ಥಿಕ ಪ್ರಯತ್ನಗಳು ಫಲ ನೀಡುತ್ತವೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಸಂಬಂಧಗಳಲ್ಲಿ ಆತ್ಮೀಯತೆ ಇರುತ್ತದೆ. ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಬೇಕಾದಷ್ಟು ಅನುಕೂಲತೆಗಳಿದ್ದರೂ ಬೇಕೆಂಬ ಆಸೆಯು ನಿಮ್ಮನ್ನು ಬಿಡದು. ಸಂಗಾರಿಯ ಮೇಲಿನ ಪ್ರೀತಿಯು ಕಡಿಮೆಯಾದಂತೆ ತೋರುವುದು. ಕಛೇರಿಯ ಕಾರ್ಯದ ನಿಮಿತ್ತ
ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ವಿತಂಡ ವಾದವನ್ನು ಮಾಡಿ ಎಲ್ಲರಿಂದ ದೂರಾಗುವಿರಿ. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು.
ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು.