AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ

ಕೆಲವು ರಾಶಿಯವರು ಚಿನ್ನ ಧರಿಸಿದರೆ ಅದೃಷ್ಟ ಸದಾ ಅವರ ಜೊತೆಗಿರುತ್ತದೆಯಂತೆ. ಹಾಗಿದ್ದರೆ ಯಾವ ರಾಶಿಯವರಿಗೆ ಚಿನ್ನ ಅದೃಷ್ಟ ತಂದುಕೊಡುತ್ತೆ ನೋಡೋಣ.

ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ
ಚಿನ್ನImage Credit source: Live Mint
TV9 Web
| Edited By: |

Updated on: Jun 07, 2022 | 6:30 AM

Share

ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಕೂಡಾ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅದೃಷ್ಟ ಪಡೆಯಬೇಕಾದರೆ ಏನು ಮಾಡಬೇಕು ಎನ್ನುವುದನ್ನು ಸೂಚಿಸಲಾಗಿದೆ. ಅವರವರ ರಾಶಿಗೆ ಅನುಗುಣವಾಗಿ (Zodiac sign) ಯಾರು ಏನು ಧರಿಸಿದರೆ ಅದೃಷ್ಟ ಎನ್ನುವುದನ್ನು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೆಲವು ರಾಶಿಯವರು ಚಿನ್ನ ಧರಿಸಿದರೆ ಅದೃಷ್ಟ ಸದಾ ಅವರ ಜೊತೆಗಿರುತ್ತದೆಯಂತೆ. ಹಾಗಿದ್ದರೆ ಯಾವ ರಾಶಿಯವರಿಗೆ ಚಿನ್ನ ಅದೃಷ್ಟ ತಂದುಕೊಡುತ್ತೆ ನೋಡೋಣ.

  1. ಮೇಷ(Aries): ಮೇಷ ರಾಶಿಯವರಿಗೆ ಚಿನ್ನವನ್ನು ಧರಿಸುವುದು ಶುಭ. ವಿಶೇಷವಾಗಿ ಚಿನ್ನದ ಉಂಗುರವನ್ನು ಧರಿಸುವುದರಿಂದ ಅವರ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ಅದೃಷ್ಟ ಹೆಚ್ಚಾಗುತ್ತದೆ. ಸಂಬಂಧಗಳು ಬಲವಾಗಿರುತ್ತವೆ. ಸಾಲವಿದ್ದರೂ ಕೂಡಾ ಕೆಲವೇ ದಿನಗಳಲ್ಲಿ ಸಾಲದ ಸಮಸ್ಯೆ ಪರಿಹಾರವಾಗುತ್ತದೆಯಂತೆ.
  2. ಸಿಂಹ(Leo): ಸಿಂಹ ರಾಶಿಯವರಿಗೆ ಚಿನ್ನವು ಅದೃಷ್ಟವನ್ನು ತರುತ್ತದೆ. ಈ ರಾಶಿಯವರು ಚಿನ್ನದ ಆಭರಣಗಳನ್ನು ಅದರಲ್ಲೂ ವಿಶೇಷವಾಗಿ ಚಿನ್ನದ ಉಂಗುರಗಳನ್ನು ಧರಿಸಬೇಕು. ಇದು ಅವರಿಗೆ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿಯನ್ನು ನೀಡುತ್ತದೆ. ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ಹೆಚ್ಚಿನ ಪರಿಶ್ರಮವಿಲ್ಲದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ.
  3. ಕನ್ಯಾ ರಾಶಿ(Virgo): ಬುಧ ಅಧಿಪತಿ, ಚಿನ್ನದ ಉಂಗುರವಲ್ಲದೆ ಕನ್ಯಾ ರಾಶಿಯವರಿಗೆ ಚಿನ್ನದ ಸರ ಅಥವಾ ಬಳೆ ಧರಿಸುವುದು ತುಂಬಾ ಒಳ್ಳೆಯದು. ಇದರೊಂದಿಗೆ, ಜೀವನದ ಸಮಸ್ಯೆಗಳು ಒಂದೊಂದಾಗಿ ಕೊನೆಗೊಳ್ಳುತ್ತವೆ ಮತ್ತು ಪ್ರತಿ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಜೀವನದಲ್ಲಿ ಸಂಪತ್ತು ಮತ್ತು ಐಶ್ವರ್ಯ ಹೆಚ್ಚಾಗುತ್ತದೆ.
  4. ಧನು ರಾಶಿ(Sagittarius):ಇವರ ರಾಶ್ಯಾಧಿಪತಿ ಗುರು ಇವರ ಧಾತು ಬಂಗಾತ ಚಿನ್ನವನ್ನು ಧರಿಸುವುದು, ತುಂಬಾ ಮಂಗಳಕರ. ಇದು ಅವರಿಗೆ ಎಲ್ಲದರಲ್ಲೂ ಯಶಸ್ಸನ್ನು ನೀಡುತ್ತದೆ. ಗುರು ಗ್ರಹವು ಶುಭ ಫಲಿತಾಂಶಗಳನ್ನು ನೀಡುತ್ತದೆ. ಇದರಿಂದಾಗಿ ಅವರು ಸಾಕಷ್ಟು ಹೆಸರು-ಪ್ರಸಿದ್ಧಿಯನ್ನು ಗಳಿಸುತ್ತಾರೆ. ಅಪಾರ ಸಂಪತ್ತಿನ ಒಡೆಯನಾಗುತ್ತಾರೆ. ಜೀವನದಲ್ಲಿ ಉನ್ನತ ಸ್ಥಾನಮಾನ ಮತ್ತು ಸಂತೋಷದ ಜೀವನವನ್ನು ಪಡೆಯುತ್ತಾರೆ. ಜೀವನದಲ್ಲಿ ಯಾವುದಕ್ಕೂ ಕೊರತೆ ಎದುರಾಗುವುದಿಲ್ಲ. ಸದಾ ಸುಖಿಗಳಾಗಿರುತ್ತೀರ.
  5. ಮೀನ ರಾಶಿ(Pisces): ಮೀನ ರಾಶಿಯವರು, ಸಾಧ್ಯವಾದಷ್ಟರ ಮಟ್ಟಿಗೆ ಚಿನ್ನ ಧಾರಣೆ ಮಾಡಿದ್ದರೆ ಶುಭ. ನಿಮ್ಮ ಅರ್ಧಕ್ಕೆ ನಿಂತ ಕೆಲಸಕಾರ್ಯಗಳು ಪೂರ್ಣಗೊಳ್ಳುವವು. ಕೋಪ ಕಡಿಮೆಯಾಗುತ್ತದೆ, ಆಲೋಚನಾ ಲಹರಿ ಉತ್ತಮವಾಗಿರುತ್ತದೆ.
Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937,9972548937

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ