Weekly Horoscope ವಾರ ಭವಿಷ್ಯ: ಕಟಕ ರಾಶಿಯವರಿಗೆ ಈ ವಾರ ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾಗಲಿವೆ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Weekly Horoscope ವಾರ ಭವಿಷ್ಯ: ಕಟಕ ರಾಶಿಯವರಿಗೆ ಈ ವಾರ ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾಗಲಿವೆ
ರಾಶಿ
Follow us
TV9 Web
| Updated By: ಆಯೇಷಾ ಬಾನು

Updated on: Aug 08, 2022 | 6:30 AM

ವಾರಭವಿಷ್ಯ: ತಾ.07-08-2022 ರಿಂದ ತಾ.13-08-2022 ರ ತನಕ ರಾಶಿಭವಿಷ್ಯ.

  1. ಮೇಷ ರಾಶಿ: ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಶುಭ ಸಂಖ್ಯೆ: 9 ಶುಭ ಬಣ್ಣ: ಕೆಂಪು ಬಣ್ಣ
  2. ವೃಷಭ ರಾಶಿ: ಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ. ಶುಭ ಸಂಖ್ಯೆ: 5 ಶುಭ ಬಣ್ಣ: ಬಿಳಿ ಬಣ್ಣ
  3. ಮಿಥುನ ರಾಶಿ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 8 ಶುಭ ಬಣ್ಣ: ಹಸಿರು
  4. ಕರ್ಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾದೀತು. ಆದರೆ ಸಹನೆಯಿಂದ ಎದುರಿಸುವಿರಿ. ಮಾತಿನಲ್ಲಿ ಸಂಯಮವಿದ್ದರೆ ನಿಮ್ಮನ್ನು ಯಾರೂ ಸೋಲಿಸಲಾಗದು. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಶುಭ ಸಂಖ್ಯೆ: 4 ಶುಭ ಬಣ್ಣ: ಹಳದಿ
  5. ಸಿಂಹ ರಾಶಿ: ಮಾನಸಿಕವಾಗಿ ಸಂತಸವಿದ್ದರೂ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 1 ಶುಭ ಬಣ್ಣ: ಕೇಸರಿ
  6. ಕನ್ಯಾ ರಾಶಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಏಕಾಗ್ರತೆಗೆ ಭಂಗ ತರುವ ವಿಚಾರಗಳು ಎದುರಾಗಲಿವೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 7 ಶುಭ ಬಣ್ಣ: ಕಂದು
  7. ತುಲಾ ರಾಶಿ: ಆರ್ಥಿಕವಾಗಿ ಚೇತರಿಕೆ ಕಂಡು ಬಂದು ಮುನ್ನಡೆ ಅನುಭವಕ್ಕೆ ಬರುವುದು. ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಶುಭ ಸಂಖ್ಯೆ: 4 ಶುಭ ಬಣ್ಣ: ನೀಲಿ
  8. ವೃಶ್ಚಿಕ ರಾಶಿ: ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುವುದು. ಸಂಗಾತಿಯ ಪ್ರೀತಿ ಸಿಗಲಿದೆ. ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ. ಶುಭ ಸಂಖ್ಯೆ: 6 ಶುಭ ಬಣ್ಣ: ಆರೆಂಜ್
  9. ಧನಸ್ಸು ರಾಶಿ: ತೀರ್ಥಕ್ಷೇತ್ರಗಳ ಸಂದರ್ಶನ ನಡೆಸುವಿರಿ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮದ ಅಗತ್ಯವಿದೆ. ವಾಸ ಸ್ಥಳದ ಬದಲಾವಣೆಗೆ ಸಿದ್ಧತೆ ನಡೆಸುತ್ತೀರಿ. ಕಾರ್ಯಕ್ಷೇತ್ರದಲ್ಲಿ ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ. ಶುಭ ಸಂಖ್ಯೆ: 3 ಶುಭ ಬಣ್ಣ: ಹಳದಿ
  10. ಮಕರ ರಾಶಿ: ಮಕ್ಕಳಿಂದ ಶುಭ ಫಲ ನಿರೀಕ್ಷಿಸಬಹುದು. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಕೈ ಹಿಡಿದ ಕೆಲಸಗಳು ಫಲಗೂಡುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಶುಭ ಸಂಖ್ಯೆ: 8 ಶುಭ ಬಣ್ಣ: ಕಪ್ಪು
  11. ಕುಂಭ ರಾಶಿ: ಶುಭ ಮಂಗಲ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಾನಸಿಕವಾಗಿ ಗೊಂದಲಗಳು, ಖಿನ್ನತೆ ಕಾಡಲಿದೆ. ತಾಳ್ಮೆ, ಸಮಾಧಾನ ಅಗತ್ಯ. ಸಂಗಾತಿಯ ಸಲಹೆಗೆ ಕಿವಿಗೊಡಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಆರ್ಥಿಕ ಪರಿಸ್ಥಿತಿ ಬಗ್ಗೆ ಎಚ್ಚರ. ಶುಭ ಸಂಖ್ಯೆ: 2 ಶುಭ ಬಣ್ಣ: ತಿಳಿ ನೀಲಿ
  12. ಮೀನ ರಾಶಿ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಸಂತಾನ ಸೂಚಕ ಫಲ ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರುವುದು. ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ಬೇಸರವಾಗಬಹುದು. ಶುಭ ಸಂಖ್ಯೆ: 6 ಶುಭ ಬಣ್ಣ: ಬಿಳಿಪು

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937,9972548937

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ