ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ: 5 ದಿನ ಆರೆಂಜ್-ರೆಡ್ ಅಲರ್ಟ್ ಘೊಷಣೆ

  • TV9 Web Team
  • Published On - 14:10 PM, 10 Sep 2020

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಹಾಗೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಸೆ11 ರಂದು ರೆಡ್ ಅಲರ್ಟ್ ಎಚ್ಚರಿಕೆ‌‌ ಕೊಟ್ಟಿದೆ. ಜೊತೆಗೆ ಈ ಅವಧಿಯಲ್ಲಿ 20 ಸೆಂ. ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ. ಸೆ 10, 12, 13 ಹಾಗೂ 14ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 20 ಸೆಂ.ಮೀ. ಮಳೆ‌ಯಾಗುವ ಅಂದಾಜಿದೆ. ಪ್ರತೀ ತಾಸಿಗೆ 45-50 ಕಿ.ಮೀ. ವೇಗದ ಗಾಳಿಯೂ ಬೀಸುವುದರಿಂದ ಮೀನುಗಾರರಿಗೆ ಕಡಿಲಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮಂಗಳೂರು ವರದಿ:
ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯೆತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆ, ನಾಡಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.

ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮನವಿ ಮಾಡಿದ್ದಾರೆ. ವಿದ್ಯುತ್ ಕಂಬಗಳು, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಸೂಚಿಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ಡಿ.ಸಿ. ಆದೇಶಿಸಿದ್ದಾರೆ.