ವಿಸ್ಟ್ರಾನ್​ ಕಂಪನಿಗೆ ಕೊಡಲ್ಲ ಹೊಸ ಉತ್ಪಾದನಾ ಗುತ್ತಿಗೆಗಳು: ಆ್ಯಪಲ್ ಕಟು ನುಡಿ

ವಿಸ್ತ್ರಾನ್ ಕಂಪನಿಯು ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ಹೊಸ ಕೆಲಸಗಳನ್ನು ನೀಡುವುದಿಲ್ಲ ಎಂದು ಆ್ಯಪಲ್ ಕಂಪನಿ ತಿಳಿಸಿದೆ.

ವಿಸ್ಟ್ರಾನ್​ ಕಂಪನಿಗೆ ಕೊಡಲ್ಲ ಹೊಸ ಉತ್ಪಾದನಾ ಗುತ್ತಿಗೆಗಳು: ಆ್ಯಪಲ್ ಕಟು ನುಡಿ
ವಿಸ್ಟ್ರಾನ್​ ಕಂಪನಿಯಲ್ಲಿ ನಡೆದ ಗಲಾಟೆಯ ಪರಿಣಾಮದ ದೃಶ್ಯ
Follow us
guruganesh bhat
|

Updated on:Dec 21, 2020 | 11:52 AM

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಕಂಪನಿಯು ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ಹೊಸ ಉತ್ಪಾದನಾ ಯೋಜನೆಗಳನ್ನು ನೀಡುವುದಿಲ್ಲ. ಅಲ್ಲದೇ, ಈಗಾಗಲೇ ನೀಡಿರುವ ಉತ್ಪಾದನಾ ಯೋಜನೆಗಳನ್ನು ತಡೆಹಿಡಿಯಲಾಗುವುದು ಎಂದು ಅ್ಯಪಲ್ ಸ್ಪಷ್ಟಪಡಿಸಿದೆ. ವಿಸ್ಟ್ರಾನ್ ಕಂಪನಿಯು ಆ್ಯಪಲ್ ಕಂಪನಿಯ  iphone ಮತ್ತಿತರ ಉತ್ಪನ್ನಗಳ ಬಿಡಿಭಾಗಗಳ ತಯಾರಿಕೆ ಗುತ್ತಿಗೆ ಪಡೆದುಕೊಂಡಿದೆ.

ಭಾರತದ ಮೊದಲ ಆ್ಯಪಲ್ ಉತ್ಪನ್ನ ತಯಾರಕ ಕಂಪನಿಯೆಂಬ ಅಭಿದಾನಕ್ಕೂ ಪಾತ್ರವಾಗಿದ್ದ ಕೋಲಾರದಲ್ಲಿರುವ ವಿಸ್ಟ್ರಾನ್ ಘಟಕ, ಶಿಸ್ತುಕ್ರಮದ ಹೆಸರಲ್ಲಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು. ಆದರೆ, ಇದೀಗ ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ವಿಸ್ಟ್ರಾನ್​ಗೆ ಹೊಸ ಯೋಜನೆಗಳನ್ನು ನೀಡುವುದಿಲ್ಲ ಎಂದು ಆ್ಯಪಲ್ ಸ್ಪಷ್ಟಪಡಿಸಿದೆ.

ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಂಡ ನಂತರವೇ ವಿಸ್ಟ್ರಾನ್​ಗೆ ಹೊಸ ಯೋಜನೆಗಳನ್ನು ನೀಡಲಾಗುವುದು ಎಂದು ಆ್ಯಪಲ್ ತಿಳಿಸಿದೆ. ಕಳೆದ ಕೆಲವು ದಿನಗಳ ಹಿಂದೆ ಸರಿಯಾಗಿ ಸಂಬಳ ನೀಡಿಲ್ಲವೆಂದು ಜಿಲ್ಲೆಯ ನರಸಾಪುರದಲ್ಲಿರುವ ಆ್ಯಪಲ್ ಉತ್ಪನ್ನ ತಯಾರಕ ಕಂಪನಿಯಲ್ಲಿ ಕಾರ್ಮಿಕರು ದಾಂಧಲೆ ನಡೆಸಿದ್ದರು.

ಈ ವೇಳೆ, ಕಂಪನಿಯ ಆಸ್ತಿಪಾಸ್ತಿಗೆ ಬಹಳಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಅಟೆಂಡೆನ್ಸ್​ ಮೆಷಿನ್​ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದರಿಂದ ಕಾರ್ಮಿಕರ ಸಂಬಳವನ್ನು ಕಡಿತ ಮಾಡಲಾಗುತ್ತಿತ್ತು. ಜೊತೆಗೆ, ಕಾರ್ಮಿಕರ ಕೆಲಸದ ವೇಳೆಯನ್ನು 8 ಗಂಟೆಗಳಿಂದ 12 ಗಂಟೆಗೆ ಹೆಚ್ಚಿಸಲಾಗಿತ್ತು. ಆದ್ದರಿಂದ, ಕಾರ್ಮಿಕರು ಮನನೊಂದು ದಾಂಧಲೆ ನಡೆಸಿದ್ದರು ಎಂದು ರಾಜ್ಯ ಸರ್ಕಾರವು ಕೇಂದ್ರ ಕಾರ್ಮಿಕ ಇಲಾಖೆಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ.

ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ: ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ತಲೆದಂಡ

Published On - 3:47 pm, Sun, 20 December 20

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ