It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ

ಐಟಿ ಕಂಪನಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇವುಗಳೆಲ್ಲದರ ಹೊರತಾಗಿಯೂ ಉದ್ಯಮವು ಉತ್ತಮವಾಗಿ ಬೆಳವಣಿಗೆ ಹೊಂದುತ್ತಿವೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ತಿಳಿಸಿದ್ದಾರೆ

It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ
ಸಾಂದರ್ಭಿಕ ಚಿತ್ರImage Credit source: PTI
Follow us
| Updated By: ಗಣಪತಿ ಶರ್ಮ

Updated on:Nov 21, 2022 | 10:20 AM

ಬೆಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ (Global recession), ಐಟಿ ಉದ್ಯಮಗಳ (IT Companies) ವಹಿವಾಟಿನಲ್ಲಿ ಕುಸಿತ, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗದಿಂದ ಬೇಸತ್ತಿರುವ ಯುವಕರಿಗೆ, ಅದರಲ್ಲೂ ಐಟಿ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಸದ್ಯದಲ್ಲೇ ಐಟಿ ಉದ್ದಿಮೆಗಳು (IT industry) ಸುಮಾರು 2 ಲಕ್ಷದಷ್ಟು ನೇಮಕಾತಿ ಮಾಡಿಕೊಳ್ಳಲಿವೆ ಎಂದು ಇನ್ಫೋಸಿಸ್ (Infosys) ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಇತ್ತೀಚೆಗೆ ತಿಳಿಸಿದ್ದಾರೆ. ನಗರದಲ್ಲಿ ನಡೆದ ತಂತ್ರಜ್ಞಾನ ಶೃಂಗಸಭೆಯಲ್ಲಿ ಮಾತನಾಡುತ್ತಿರುವಾಗ ಅವರು ಈ ಸುಳಿವು ನೀಡಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಡಿಜಿಟಲೈಸೇಷನ್​ಗೆ ಮತ್ತಷ್ಟು ವೇಗ ದೊರೆತಿದ್ದು ಭಾರತದ ಐಟಿ ಸೇವಾ ಕಂಪನಿಗಳಿಗೆ ನೆರವಾಗಿದೆ. ದೇಶದಲ್ಲಿರುವ ಜಾಗತಿಕ ಅಭಿವೃದ್ಧಿ ಕೇಂದ್ರಗಳು ಯಾವುದೇ ಹೊಡೆತವನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ ಎಂಬುದು ಸಾಂಕ್ರಾಮಿಕದ ವೇಳೆ ಸಾಬೀತಾಗಿದೆ. ಇದು ಜಾಗತಿಕ ಉದ್ದಿಮೆಗಳು ಭಾರತದ ಐಟಿ ಸೇವಾ ಕಂಪನಿಗಳತ್ತ ತಿರುಗಿ ನೋಡುವಂತೆ ಮಾಡಿದೆ ಎಂದು ಗೋಪಾಲಕೃಷ್ಣನ್ ಹೇಳಿದ್ದಾರೆ.

ಸವಾಲುಗಳ ನಡುವೆಯೂ ಬೆಳವಣಿಗೆ

ಐಟಿ ಕಂಪನಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಆರ್ಥಿಕ ಸಂಘರ್ಷಗಳು, ಮೂನ್​ಲೈಟಿಂಗ್ ಹಾಗೂ ಉದ್ಯೋಗಿಗಳನ್ನು ಕಚೇರಿಗೆ ವಾಪಸ್ ಕರೆಸಿಕೊಳ್ಳುವುದೂ ಸೇರಿದಂತೆ ಹಲವು ಸವಾಲುಗಳು ಐಟಿ ಉದ್ದಿಮೆ ಮುಂದಿವೆ. ಇವುಗಳೆಲ್ಲದರ ಹೊರತಾಗಿಯೂ ಉದ್ಯಮವು ಉತ್ತಮವಾಗಿ ಬೆಳವಣಿಗೆ ಹೊಂದುತ್ತಿವೆ ಎಂದು ಅವರು ಹೇಳಿದ್ದಾರೆ.

ಐಟಿ ಉದ್ಯಮವು ಶೀಘ್ರದಲ್ಲೇ ಕನಿಷ್ಠ 2 ಲಕ್ಷ ನೇಮಕಾತಿ ಮಾಡಿಕೊಳ್ಳಲಿದೆ ಎಂದು ಭಾವಿಸಿದ್ದೇನೆ. ಐಟಿ ಉದ್ಯಮದ ಮೇಲಿನ ಹೂಡಿಕೆ, ಡಿಜಿಟಲೈಸೇಷನ್ ಪ್ರಕ್ರಿಯೆ ಮುಂದಿನ ಕೆಲವು ವರ್ಷಗಳವರೆಗೆ ಮುಂದುವರಿಯಲಿವೆ. ಉದ್ಯಮದ ಏರಿಳಿತಗಳು ಸಹಜ. ಆದರೆ ಇವೆಲ್ಲ ತಾತ್ಕಾಲಿಕವಷ್ಟೇ ಎಂದು ಅವರು ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅನೇಕ ಐಟಿ ಉದ್ದಿಮೆಗಳು ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲೇ ಇನ್ಫೋಸಿಸ್ ಸಹ-ಸಂಸ್ಥಾಪಕರು ಈ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ. ಮೈಕ್ರೋಸಾಫ್ಟ್, ಫಿಲಿಪ್ಸ್, ಟ್ವಿಟರ್, ಮೆಟಾ ಸೇರಿದಂತೆ ಅನೇಕ ಕಂಪನಿಗಳು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿವೆ. ಅಮೆಜಾನ್ ಸಹ ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದೆ. ಈ ಮಧ್ಯೆ, ಭಾರತದಲ್ಲಿಯೂ ವಿಪ್ರೋ, ಇನ್ಫೋಸಿಸ್​ನಂಥ ಕಂಪನಿಗಳು ನೇಮಕಾತಿ ಪ್ರಕ್ರಿಯೆ ಮುಂದೂಡಿಕೆ, ಸ್ಥಗಿತ ಇತ್ಯಾದಿ ಕ್ರಮಗಳನ್ನು ಅನುಸರಿಸುತ್ತಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಮತ್ತೆ ಐಟಿ ಕಂಪನಿಗಳು ನೇಮಕಾತಿ ಮುಂದುವರಿಸುವ ಸುಳಿವನ್ನು ಗೋಪಾಲಕೃಷ್ಣನ್ ಅವರು ನೀಡಿರುವುದು ಐಟಿ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ತುಸು ನಿರಾಳತೆ ಒದಗಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 21 November 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ