Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿನ 65 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ sevasindhuservices.karnataka.gov.in ಗೆ ಭೇಟಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿದ್ಯಾಲಯದಿಂದ ಹತ್ತನೇ ತರಗತಿ/ದ್ವಿತೀಯ ಪಿಯುಸಿ/ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 35 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೆಯೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ- ಅಕ್ಟೋಬರ್ 20, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.