ಗುಜರಿ ನೀತಿ ಜಾರಿ: ಈ ನಗರದಲ್ಲಿ 10-15 ವರ್ಷದ ಹಳೇ ವಾಹನ ರಸ್ತೆಗಿಳಿಯುವಂತಿಲ್ಲ

ಗುಜರಿ ನೀತಿಗೆ ಸರ್ಕಾರ ಅಧಿಕೃತ ಚಾಲನೆ ನೀಡಿದ್ದು, ಇದಕ್ಕಾಗಿ ದೆಹಲಿ ಸಾರಿಗೆ ಇಲಾಖೆಯು ಅನರ್ಹ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಅಧಿಕೃತ ಸ್ಕ್ರ್ಯಾಪ್ ಏಜೆನ್ಸಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

ಗುಜರಿ ನೀತಿ ಜಾರಿ: ಈ ನಗರದಲ್ಲಿ 10-15 ವರ್ಷದ ಹಳೇ ವಾಹನ ರಸ್ತೆಗಿಳಿಯುವಂತಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 26, 2021 | 10:36 PM

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಗುಜರಿ ನೀತಿಯಡಿ ಹಳೆಯ ವಾಹನಗಳ ಮೇಲೆ ದೆಹಲಿ ಸರ್ಕಾರ ನಿಷೇಧ ಹೇರಿದೆ. ಅದರಂತೆ 10 ವರ್ಷ ಹಳೆಯ ಡೀಸೆಲ್ ಮತ್ತು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳನ್ನು ದೆಹಲಿ-ಎನ್​ಸಿಆರ್ ಪ್ರದೇಶಗಳಲ್ಲಿ​ ಓಡಿಸುವಂತಿಲ್ಲ ಎಂದು ದೆಹಲಿ ಸರ್ಕಾರ  ಆದೇಶವನ್ನು ಹೊರಡಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT), ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್  ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಹಲವು ಬಾರಿ ಛೀಮಾರಿ ಹಾಕಿದೆ. ಇದರೊಂದಿಗೆ, ವಾಯು ಮಾಲಿನ್ಯವನ್ನು ಎದುರಿಸಲು ಸರ್ಕಾರಗಳು ರೂಪಿಸಿರುವ ವ್ಯವಸ್ಥೆಗಳ ವರದಿಯನ್ನು ಸಲ್ಲಿಸುವಂತೆ ಉಚ್ಛ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ದೆಹಲಿ ಗುಜರಿ ನೀತಿಯಡಿ ಹಳೆಯ ವಾಹನಗಳ ಮೇಲೆ ನಿಷೇಧವನ್ನು ಹೇರಿದೆ.

ಹಳೆಯ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳು ದೆಹಲಿಯ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು, 10 ವರ್ಷ ಹಳೆಯ ಡೀಸೆಲ್ ಮತ್ತು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ದೆಹಲಿ ಸರ್ಕಾರದ ಸಾರಿಗೆ ಇಲಾಖೆಯು ನೀಡಿರುವ ಸಾರ್ವಜನಿಕ ಪ್ರಕಟಣೆಯಲ್ಲಿ, 7 ನೇ ಏಪ್ರಿಲ್, 2015 ರಂದು ಹಳೆಯ ವಾಹನಗಳ ಕಾರ್ಯಾಚರಣೆಯನ್ನು ಸ್ಪಷ್ಟವಾಗಿ ತಿಳಿಸಿದೆ. ಈ ಕುರಿತು ಇದೀಗ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಕೂಡ ಅಕ್ಟೋಬರ್ 29, 2018 ರಂದು ಆದೇಶ ನೀಡಿತ್ತು. ಈ ಎರಡು ಆದೇಶಗಳನ್ನು ಗಮನದಲ್ಲಿಟ್ಟುಕೊಂಡು, ಸಾರಿಗೆ ಇಲಾಖೆ ಈಗ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ 10 ವರ್ಷ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳ ಓಡಾಟವನ್ನು ನಿಷೇಧಿಸಿದೆ ಎಂದು ತಿಳಿಸಿದೆ.

ಈ ಸೂಚನೆಗಳನ್ನು ಉಲ್ಲಂಘಿಸಿದರೆ, ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಸ್ಪಷ್ಟಪಡಿಸಲಾಗಿದೆ. ಕೇಂದ್ರ ಸರ್ಕಾರ ಹೊರಡಿಸಿದ ಹೊಸ ಸ್ಕ್ರ್ಯಾಪ್ ನೀತಿಯ ಅಡಿಯಲ್ಲಿ, ಈ ಹಳೆಯ ವಾಹನಗಳನ್ನು ರಸ್ತೆಗಳಿಂದ ತೆರವುಗೊಳಿಸಲು ನಿರ್ಧರಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ವಾಹನಗಳು ಜಪ್ತಿಯಾಗಲಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಇನ್ನು ಗುಜರಿ ನೀತಿಯಡಿ 20 ವರ್ಷಗಳ ನಂತರ ಖಾಸಗಿ ವಾಹನ ಮತ್ತು 15 ವರ್ಷಗಳ ನಂತರ ವಾಣಿಜ್ಯ  (ಕಮರ್ಷಿಯಲ್)  ವಾಹನವು ವೆಹಿಕಲ್ ಫಿಟ್ನೆಸ್ ಟೆಸ್ಟ್​​ಗೆ ಒಳಗಾಗಬೇಕಾಗುತ್ತದೆ. ಈ ಪರೀಕ್ಷೆಯಲ್ಲಿ ಫೇಲ್ ಆದ ಅನರ್ಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಹಾಗೆಯೇ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಾಹನಗಳನ್ನು ಓಡಿಸಲು ಅನುಮತಿಸಲಾಗುತ್ತದೆ. ಆದರೆ ಇಂತಹ ವಾಹನಗಳನ್ನು ಮರು ನೋಂದಾಣಿ ಮಾಡಿಕೊಳ್ಳಲು ಈಗ ಇರುವುದಕ್ಕಿಂತ 10 ಪಟ್ಟು ಹೆಚ್ಚು ಮೊತ್ತ ಪಾವತಿಸಬೇಕಾಗುತ್ತದೆ.

ಇನ್ನು ಅನರ್ಹಗೊಂಡ ವಾಹನಗಳಿಗಾಗಿ ಗುಜರಿ ಕೇಂದ್ರಗಳನ್ನು ತೆರೆಯಲಿದೆ. ಹಳೇ ವಾಹನಗಳಿಗೆ ಗುಜರಿ ಮೌಲ್ಯದ ಲೆಕ್ಕಾಚಾರದಲ್ಲಿ ಪ್ರೋತ್ಸಾಹಧನ ಎಂದು ನೀಡಲಾಗುತ್ತದೆ. ಅದು ಹೊಸ ವಾಹನದ ಬೆಲೆಯ ಶೇಕಡಾ 4ರಿಂದ 6ರಷ್ಟಾಗಿರುತ್ತದೆ. ಇನ್ನು ರಸ್ತೆ ತೆರಿಗೆ ಮೇಲೆ ವೈಯಕ್ತಿಕ ವಾಹನಗಳಿಗೆ ಶೇಕಡಾ 25ರ ತನಕ ಹಾಗೂ ವಾಣಿಜ್ಯ ವಾಹನಗಳಿಗೆ ಶೇ 15ರಷ್ಟು ವಿನಾಯಿತಿ ಮತ್ತು ಗುಜರಿ ಪ್ರಮಾಣಪತ್ರದ ಮೇಲೆ ಶೇ 5ರಷ್ಟು ರಿಯಾಯಿತಿ ಸಿಗಲಿದೆ.

ಇದೀಗ ಗುಜರಿ ನೀತಿಗೆ ದೆಹಲಿ ಸರ್ಕಾರ ಅಧಿಕೃತ ಚಾಲನೆ ನೀಡಿದ್ದು, ಇದಕ್ಕಾಗಿ ದೆಹಲಿ ಸಾರಿಗೆ ಇಲಾಖೆಯು ಅನರ್ಹ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಅಧಿಕೃತ ಸ್ಕ್ರ್ಯಾಪ್ ಏಜೆನ್ಸಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಅಷ್ಟೇ ಅಲ್ಲದೆ ದೇಶದ ಇತರೆ ಪ್ರಮುಖ ನಗರಗಳಲ್ಲಿ ಶೀಘ್ರದಲ್ಲೇ ಗುಜರಿ ನೀತಿ ಜಾರಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2021: ಮಾಜಿ RCB ಆಟಗಾರ, ವಿಶ್ವದ ನಂಬರ್ 1 ಬೌಲರ್ ರಾಜಸ್ಥಾನ್ ರಾಯಲ್ಸ್ ಪಾಲು

ಇದನ್ನೂ ಓದಿ: George Garton: RCB ತಂಡಕ್ಕೆ ಎಂಟ್ರಿ ಕೊಟ್ಟಿರುವ ಜಾರ್ಜ್ ಗಾರ್ಟನ್ ಯಾರು..?

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Delhi Govt To Ban Plying Of 10-15-Year-Old Diesel,Petrol Vehicles In Delhi-NCR)

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್