ಎಲೆಕ್ಟ್ರಿಕ್ ವಾಹನವನ್ನು ಪೆಟ್ರೋಲ್ ತುಂಬಿಸುದಕ್ಕಿಂತ ವೇಗವಾಗಿ ಚಾರ್ಜ್ ಮಾಡಬಹುದು

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ಬಳಸಲಾಗುತ್ತಿದ್ದು, ಆದರೆ ಚೀನಾದ ಈ ಕಂಪನಿಯು ತನ್ನ ವಾಹನದಲ್ಲಿ ಸ್ಕೇಲೆಬಲ್ ಗ್ರ್ಯಾಫೀನ್ ಬ್ಯಾಟರಿಯನ್ನು ಬಳಸಿದೆ.

ಎಲೆಕ್ಟ್ರಿಕ್ ವಾಹನವನ್ನು ಪೆಟ್ರೋಲ್ ತುಂಬಿಸುದಕ್ಕಿಂತ ವೇಗವಾಗಿ ಚಾರ್ಜ್ ಮಾಡಬಹುದು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 31, 2021 | 4:30 PM

ಭಾರತದಲ್ಲಿ ಎಲೆಕ್ಟ್ರಿಕ್ ವಾಹನವು ನಿಧಾನವಾಗಿ ತನ್ನ ಛಾಪನ್ನು ಮೂಡಿಸುತ್ತಿದೆ. ಈಗಾಗಲೇ ಹಲವು ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹಾಗೆಯೇ ದ್ವಿಚಕ್ರ ವಾಹನಗಳ ಕ್ಷೇತ್ರದಲ್ಲೂ ಎಲೆಕ್ಟ್ರಿಕ್ ವಾಹನಗಳು ಹೊಸ ಸಂಚಲನ ಸೃಷ್ಟಿಸುತ್ತಿದೆ. ಓಲಾ, ಬಜಾಜ್, ಹೋಂಡಾ ಸೇರಿದಂತೆ ಪ್ರಮುಖ ಕಂಪೆನಿಗಳು ಎಲೆಕ್ಟ್ರಿಕ್​ ಸ್ಕೂಟರ್​ ನಿರ್ಮಾಣದತ್ತ ಮುಖ ಮಾಡಿದೆ. ಇದಾಗ್ಯೂ ಸಾಮಾನ್ಯ ಜನರಲ್ಲಿ ಮೂಡಿದ ಪ್ರಶ್ನೆಯೆಂದರೆ ಚಾರ್ಜ್​ ಮಾಡಿಕೊಳ್ಳೋದು ಹೇಗೆ ಎಂಬುದು.

ಹೌದು, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗಾಗಿ ಪ್ರಮುಖ ನಗರಗಳಲ್ಲೇ ಸ್ಟೇಷನ್​ಗಳ ಕೊರತೆಯಿದೆ. ಇನ್ನು ಮನೆಯಲ್ಲಿಯೇ ಚಾರ್ಜ್ ಮಾಡಬೇಕಿದ್ದರೂ 3 ರಿಂದ 4 ಗಂಟೆ ತೆಗೆದುಕೊಳ್ಳುತ್ತದೆ. ಹೀಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ನಂಬೋದು ಹೇಗೆ ಎಂಬುದು ಅನೇಕರ ಪ್ರಶ್ನೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲು ಚೀನಾದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪೆನಿ ಜಿಎಸಿ ಅಯಾನ್ ಮುಂದಾಗಿದೆ.

ಈ ಕಂಪೆನಿಯು ತಯಾರಿಸಿದ ಎಲೆಕ್ಟ್ರಿಕ್ ವಾಹನವನ್ನು ಮಿಂಚಿನ ವೇಗದಲ್ಲಿ ಚಾರ್ಜ್ ಮಾಡಬಹುದು. ಅದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ತುಂಬುವುದಕ್ಕಿಂತ ವೇಗವಾಗಿ ಎಂದರೆ ನಂಬಲೇಬೇಕು. ಈ ವಾಹನದಲ್ಲಿ ವೇಗದ ಚಾರ್ಜಿಂಗ್ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಅದರಂತೆ ಅತೀ ಕಡಿಮೆ ಸಮಯದಲ್ಲಿ ಚಾರ್ಜ್ ಮಾಡಿಕೊಳ್ಳಬಹುದು.

ಅಯಾನ್ ಕಂಪನಿ ಬಿಡುಗಡೆ ಮಾಡಲಿರುವ ಎಲೆಕ್ಟ್ರಿಕ್ ವಾಹನ ಅಯಾನ್ ವಿ ಈ ಹೊಸ ತಂತ್ರಜ್ಞಾನದೊಂದಿಗೆ ಬರಲಿದ್ದು, ಈ ವಾಹನವನ್ನು ಕೇವಲ 10 ನಿಮಿಷಗಳಲ್ಲಿ 30-80 ಪ್ರತಿಶತದವರೆಗೆ ಚಾರ್ಜ್ ಮಾಡಬಹುದು. ಹಾಗೆಯೇ 16 ನಿಮಿಷದಲ್ಲಿ 0 ದಿಂದ 80 ಶೇಕಡ ಚಾರ್ಜ್​ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ಬಳಸಲಾಗುತ್ತಿದ್ದು, ಆದರೆ ಚೀನಾದ ಈ ಕಂಪನಿಯು ತನ್ನ ವಾಹನದಲ್ಲಿ ಸ್ಕೇಲೆಬಲ್ ಗ್ರ್ಯಾಫೀನ್ ಬ್ಯಾಟರಿಯನ್ನು ಬಳಸಿದೆ. ಈ ಬ್ಯಾಟರಿಯು ಲಿಥಿಯಂ-ಐಯಾನ್ ಬ್ಯಾಟರಿಗಿಂತ ಹೆಚ್ಚು ವೇಗವಾಗಿ ಚಾರ್ಜ್ ಆಗುತ್ತದೆ. ಕಂಪನಿಯ ಪ್ರಕಾರ, ಈ ಸ್ಕೇಲೆಬಲ್ ಗ್ರ್ಯಾಫೀನ್ ಬ್ಯಾಟರಿಯನ್ನು ಒಮ್ಮೆ ಸಂಪೂರ್ಣ ಚಾರ್ಜ್​ ಮಾಡಿದ್ರೆ 1,000 ಕಿ.ಮೀ.ವರೆಗೆ ಚಲಿಸಬಹುದು.

ಆದಾಗ್ಯೂ ತಜ್ಞರ ಪ್ರಕಾರ, ಸ್ಕೇಲೆಬಲ್ ಗ್ರ್ಯಾಫೀನ್ ಬ್ಯಾಟರಿಗಳ ತಂತ್ರಜ್ಞಾನವು ಇನ್ನು ಅಭಿವೃದ್ಧಿಯಲ್ಲಿದ್ದು, ಹೀಗಾಗಿ ಇದು ಮಾರುಕಟ್ಟೆಗೆ ಬರಲು ಬಹಳ ಸಮಯ ತೆಗೆದುಕೊಳ್ಳಲಿದೆ. ಅಯಾನ್ ಕಂಪನಿಯು ಇದುವರೆಗೆ ತನ್ನ 4 ಎಲೆಕ್ಟ್ರಿಕ್ ವಾಹನಗಳನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಕಂಪೆನಿಯು ಸ್ಕೇಲೆಬಲ್ ಗ್ರ್ಯಾಫೀನ್ ಬ್ಯಾಟರಿ ಮಾರಾಟಕ್ಕೆ ಹೆಚ್ಚು ಒತ್ತು ನೀಡುವುದರಿಂದ ಭಾರತ ಸೇರಿ ವಿಶ್ವದೆಲ್ಲೆಡೆ ಈ ತಂತ್ರಜ್ಞಾನದ ಎಲೆಕ್ಟ್ರಿಕ್ ವಾಹನಗಳು ಲಭ್ಯವಾಗಲಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

( Electric car will charge faster by filling petrol )

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ