ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ, ಬಾಲಕ ಸಾವು

ಮನೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಚಾರ್ಜ್ ಮಾಡುತ್ತಿದ್ದ ವೇಳೆ ಬ್ಯಾಟರಿ ಸ್ಫೋಟಗೊಂಡು 7 ವರ್ಷದ ಬಾಲಕ ಸಾವನ್ನಪ್ಪಿರುವ ಪ್ರಕರಣ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ. ಘಟನೆ ಸಂಬಂಧ ತನಿಖೆ ಆರಂಭಗೊಂಡಿದೆ.

ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ, ಬಾಲಕ ಸಾವು
ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟಗೊಂಡು ಬಾಲಕ ಸಾವು
Follow us
TV9 Web
| Updated By: Rakesh Nayak Manchi

Updated on:Oct 03, 2022 | 2:52 PM

ಮನೆಯಲ್ಲಿ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ (Electric scooter battery explodes)ಗೊಂಡ ಘಟನೆ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಶೇ 70ರಷ್ಟು ಗಂಭೀರವಾಗಿ ಗಾಯಗಂಡಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಎಎನ್‌ಐ ಪ್ರಕಾರ, ಪಾಲ್ಘರ್‌ನ ವಸಾಯ್‌ನಲ್ಲಿ ಚಾರ್ಜ್ ಆಗುತ್ತಿರುವಾಗ ಸಂಭವಿಸಿದ ಇ-ಸ್ಕೂಟರ್ (E-Scooter) ಬ್ಯಾಟರಿ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕ ಚಿಕಿತ್ಸೆಯ ಸಮಯದಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿದ ಮಾಣಿಕಪುರ ಠಾಣಾ ಪೊಲೀಸರು, ಘಟೆನೆ ಸಂಬಂಧ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಶಬ್ಬೀರ್ ಅನ್ಸಾರಿ ತನ್ನ ಮನೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು ಶೇಕಡಾ 70 ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಸೆ.23ರ ಮುಂಜಾನೆ ಅನ್ಸಾರಿ ತಂದೆ ಸ್ಕೂಟರ್​ನ ಬ್ಯಾಟರಿಯನ್ನು ಮನೆಯ ಹಾಲ್​ನಲ್ಲಿ ಜಾರ್ಜ್​ಗೆ ಇಟ್ಟಿದ್ದರು. ಆದರೆ ಮುಂಜಾನೆ 4.30ರ ಸುಮಾರಿಗೆ ಬ್ಯಾಟರಿ ಸ್ಫೋಟಗೊಂಡಿದ್ದು, ಈ ವೇಳೆ ಹಾಲ್​ನಲ್ಲಿ ಮಲಗಿದ್ದ ಬಾಲಕ ಅನ್ಸಾರಿ ಮತ್ತು ಆತನ ಅಜ್ಜಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅಜ್ಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ ಅನ್ಸಾರಿಗೆ ಶೇಕಡಾ 70 ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತೀವ್ರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅನ್ಸಾರಿ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಇದು ಡಿಟ್ಯಾಚೇಬಲ್ 24 ಎಎಚ್ ಲಿಥಿಯಂ ಫೆರೋ ಫಾಸ್ಫೇಟ್ (ಎಲ್‌ಎಫ್‌ಪಿ) ಬ್ಯಾಟರಿ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಈ ಬ್ಯಾಟರಿ ಅತಿಯಾಗಿ ಬಿಸಿಯಾದ ಹಿನ್ನೆಲೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಆದಾಗ್ಯೂ ‘ದೋಷಪೂರಿತ’ ಬ್ಯಾಟರಿಗೆ ಇ-ಸ್ಕೂಟರ್ ತಯಾರಕರನ್ನು ಅನ್ಸಾರಿ ಕುಟುಂಬ ದೂಷಿಸಿದೆ.

2022ರ ಆರಂಭದಿಂದಲೂ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಗಳು ಅಲ್ಲೊಂದು ಇಲ್ಲೊಂದು ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ನಡೆದಿವೆ. ಕೆಲವು ತಿಂಗಳ ಹಿಂದೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಎಲೆಕ್ಟ್ರಿಕ್ ವೆಹಿಕಲ್​ಗೆ ಬೆಂಕಿ ಹತ್ತಿಕೊಂಡಿತ್ತು. ದ್ವಿಚಕ್ರ ವಾಹನದ ಬ್ಯಾಟರಿ ಮನೆಯಲ್ಲಿ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು. ವಾಹನದ ಡಿಟ್ಯಾಚೇಬಲ್ ಬ್ಯಾಟರಿಯನ್ನು ಮಲಗುವ ಕೋಣೆಯಲ್ಲಿ ಚಾರ್ಜ್‌ನಲ್ಲಿ ಇರಿಸಲಾಗಿತ್ತು. ಆದರೆ ಎಲ್ಲರೂ ಗಾಢ ನಿದ್ದೆಯಲ್ಲಿದ್ದಾಗ ಮುಂಜಾನೆ ವೇಳೆ ಸ್ಫೋಟಗೊಂಡು ದುರಂತ ಸಂಭವಿಸಿತ್ತು.

ಮತ್ತಷ್ಟು ಉದ್ಯಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 3 October 22

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ