AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bill Gates at India G20: ಜಿ20 ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಜೊತೆ ಬಿಲ್ ಗೇಟ್ಸ್

Digital Public Infrastructure Programme: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಸಭೆಯ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮಾರ್ಚ್ 1ರಂದು ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಮೈಕ್ರೋಸಾಫ್ಟ್ ಮುಖ್ಯಸ್ಥ ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿದ್ದಾರೆ.

Bill Gates at India G20: ಜಿ20 ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಜೊತೆ ಬಿಲ್ ಗೇಟ್ಸ್
ಜಿ20 ಶೃಂಗಸಭೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 28, 2023 | 12:29 PM

Share

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಬಾರಿಯ ಜಿ20 ಶೃಂಗಸಭೆಯ (G20 Summit) ನಿಮಿತ್ತ ನವದೆಹಲಿಯಲ್ಲಿ ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ (Digital Public Infrastructure) ಕಾರ್ಯಕ್ರಮ ಮಾರ್ಚ್ 1, ಬುಧವಾರ ನಡೆಯಲಿದೆ. ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ (Bill Gates) ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮುಖ್ಯ ಅತಿಥಿ ಮತ್ತು ಮುಖ್ಯ ಭಾಷಣಕಾರರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿರುವ ಸುಷ್ಮಾ ಸ್ವರಾಜ್ ಭವನ್​ನಲ್ಲಿ ಬುಧವಾರ ಈ ಕಾರ್ಯಕ್ರಮದಲ್ಲಿ ವಿಶ್ವದ ಪ್ರಮುಖ ಟೆಕ್ ಕಂಪನಿಗಳ ಮುಖ್ಯಸ್ಥರು ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಸಾರ್ವಜನಿಕ ಡಿಜಿಟಲ್ ಸೌಕರ್ಯದ ಭರವಸೆ ಎಂದು ಕರೆಯಲಾಗುವ ಈ ಕಾರ್ಯಕ್ರಮದಲ್ಲಿ, ಡಿಜಿಟಲ್ ತಂತ್ರಜ್ಞಾನ ಅಳವಡಿಕೆಯಿಂದ ಆರ್ಥಿಕತೆಯನ್ನು ಸುದೃಢಗೊಳಿಸುವ ಬಗ್ಗೆ ವಿಚಾರ ಮಂಡನೆ, ಚರ್ಚೆಗಳು ನಡೆಯಲಿವೆ. ಬಿಲ್ ಗೇಟ್ಸ್ ಅವರು ಮೈಕ್ರೋಸಾಫ್ಟ್ ಮುಖ್ಯಸ್ಥರು ಮಾತ್ರವಲ್ಲದೇ, ತಮ್ಮ ಫೌಂಡೇಶನ್ ಮೂಲಕ ವಿಶ್ವಾದ್ಯಂತ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಭಾರತ ಸೇರಿ ವಿಶ್ವದ ಕೆಲ ಉದಯೋನ್ಮುಖ ಆರ್ಥಿಕತೆಯ ದೇಶಗಳಿಗೆ ತಂತ್ರಜ್ಞಾನ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ.

ವುಮೆನ್20 ಕಾರ್ಯಕ್ರಮ

ಬೆಂಗಳೂರಿನಲ್ಲಿ ಕಳೆದ ವಾರ ಜಿ20 ಸಭೆಗಳು ನಡೆದಿದ್ದವು. ನಿನ್ನೆ ಸೋಮವಾರದಿಂದ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಎರಡು ದಿನಗಳ ಮಹಿಳಾ20 (W20) ನಡೆಯುತ್ತಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಿನ್ನೆ ಈ ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದರು.

ಇದನ್ನೂ ಓದಿHyundai ಮತ್ತು KIA ಕಾರುಗಳಿಂದ ಭಾರತಕ್ಕೆ ಭಾರೀ ನಷ್ಟ? ಕೊರಿಯನ್ ಕಂಪನಿಗಳ ಬಗ್ಗೆ ಸಚಿವ ಗೋಯಲ್ ಅಸಮಾಧಾನ

ಜಿ20 ಸಭೆಯ ಚರ್ಚೆಗಳಲ್ಲಿ ಲಿಂಗ ವಿಚಾರಗಳು ಪರಿಗಣಿತವಾಗುವಂತೆ ಮತ್ತು ಸ್ಪಷ್ಟ ನೀತಿ ರೂಪುಗೊಳ್ಳುವಂತೆ ಮಾಡುವುದು ಡಬ್ಲ್ಯೂ20 ಸಭೆಯ ಮುಖ್ಯ ಉದ್ದೇಶ. ಲಿಂಗ ಸಮಾನತೆ ಬೆಳೆಸುವುದು, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪುಷ್ಟಿ ನೀಡುವುದು ಇವೇ ಮುಂತಾದ ವಿಚಾರಗಳಿಗೆ ಜಿ20 ಸಭೆಗಳಲ್ಲಿ ಆದ್ಯತೆ ಕೊಡುವುದು ಗುರಿ.

ಜಿ20 ಭಾರತದ ಅಧ್ಯಕ್ಷತೆ

ಜಿ20 ಎಂಬುದು ಭಾರತ, ಅಮೆರಿಕ, ಚೀನಾ, ರಷ್ಯಾ ಇತ್ಯಾದಿ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯ 20 ದೇಶಗಳ ಗುಂಪಾಗಿದೆ. ಪ್ರತೀ ವರ್ಷವೂ ಈ ದೇಶಗಳು ಸಭೆ ನಡೆಸಿ ಜಾಗತಿಕ ಸಮಸ್ಯೆ, ಸವಾಲುಗಳ ಬಗ್ಗೆ ಚರ್ಚೆ ನಡೆಸುತ್ತವೆ. ಈ ಬಾರಿಯ ಜಿ20 ಶೃಂಗಸಭೆಗೆ ಭಾರತ ಅಧ್ಯಕ್ಷತೆ ವಹಿಸಿದೆ. ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆ ಆಯೋಜನೆಯಾಗಲಿದೆ. ಅದಕ್ಕೆ ಮುನ್ನ ಈ ಸಮಿಟ್​ಗೆ ಪೂರಕವಾಗಿ ಭಾರತದ ವಿವಿಧೆಡೆ ಬೇರೆ ಬೇರೆ ವಿಚಾರಗಳನ್ನಿಟ್ಟುಕೊಂಡು ಸಭೆಗಳು ನಡೆಯುತ್ತಿವೆ.

ಇನ್ನಷ್ಟು ಉದ್ಯಮ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Tue, 28 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?