ಟ್ವಿಟರ್, ಮೆಟಾ ಆಯ್ತು ಈಗ ಅಮೆಜಾನ್ ಸರದಿ; ಉದ್ಯೋಗಿಗಳ ವಜಾ ಆರಂಭ

ಕಂಪನಿಗೆ ಲಾಭದಾಯಕವಾಗಿರದ ಉಪಕ್ರಮಗಳನ್ನು ತಡೆಹಿಡಿಯಬೇಕಾದ ಅನಿವಾರ್ಯತೆ ಇದೆ ಎಂದು ಅಮೆಜಾನ್ ಹೇಳಿದೆ. ನೇಮಕಾತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿ ಕಳೆದ ವಾರವಷ್ಟೇ ಅಮೆಜಾನ್ ಘೋಷಿಸಿತ್ತು.

ಟ್ವಿಟರ್, ಮೆಟಾ ಆಯ್ತು ಈಗ ಅಮೆಜಾನ್ ಸರದಿ; ಉದ್ಯೋಗಿಗಳ ವಜಾ ಆರಂಭ
ಅಮೆಜಾನ್
Follow us
| Updated By: ಗಣಪತಿ ಶರ್ಮ

Updated on:Nov 11, 2022 | 11:04 AM

ನವದೆಹಲಿ: ಸಾಮಾಜಿಕ ಜಾಲತಾಣ ಕಂಪನಿಗಳಾದ ಮೆಟಾ (Meta) ಹಾಗೂ ಟ್ವಿಟರ್ (Twitter) ಬೆನ್ನಲ್ಲೇ ಇದೀಗ ಅಮೆರಿಕದ ಟೆಕ್ ಮತ್ತು ಇ-ಕಾಮರ್ಸ್ ಕಂಪನಿ ಅಮೆಜಾನ್ (Amazon) ಕೂಡ ಉದ್ಯೋಗಿಗಳನ್ನು ವಜಾಗೊಳಿಸಲು ಆರಂಭಿಸಿದೆ ಎಂದು ವರದಿಯಾಗಿದೆ. ಆರ್ಥಿಕ ಕುಸಿತದ ಈ ಸಂದರ್ಭದಲ್ಲಿ ಕಂಪನಿಗೆ ಲಾಭದಾಯಕವಾಗಿರದ ಉಪಕ್ರಮಗಳನ್ನು ತಡೆಹಿಡಿಯಬೇಕಾದ ಅನಿವಾರ್ಯತೆ ಇದೆ ಎಂದು ಅಮೆಜಾನ್ ಹೇಳಿದೆ. ನೇಮಕಾತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿ ಕಳೆದ ವಾರವಷ್ಟೇ ಅಮೆಜಾನ್ ಘೋಷಿಸಿತ್ತು.

ತಮ್ಮನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ ಎಂದು ಅಮೆಜಾನ್ ಉದ್ಯೋಗಿ, ಸಾಫ್ಟ್​ವೇರ್ ಎಂಜಿನಿಯರ್ ಜೇಮಿ ಝಾಂಗ್ ಎಂಬವರು ಲಿಂಕ್ಡ್​ಇನ್​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಅಮೆಜಾನ್ ರೋಬೊಟಿಕ್ಸ್ ಎಐನಲ್ಲಿ ನನ್ನ ಒಂದೂವರೆ ವರ್ಷದ ಉದ್ಯೋಗ ಮುಕ್ತಾಯಗೊಂಡಿದೆ. ಅಚ್ಚರಿಯ ವಜಾದೊಂದಿಗೆ ಉದ್ಯೋಗ ಕೊನೆಗೊಂಡಿದೆ. ನಮ್ಮ ಇಡೀ ರೋಬೊಟಿಕ್ಸ್​ ತಂಡವನ್ನೇ ವಜಾಗೊಳಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಲಿಂಕ್ಡ್​ಇನ್ ಮಾಹಿತಿ ಪ್ರಕಾರ ಅಮೆಜಾನ್​ನ ರೋಬೊಟಿಕ್ಸ್​ ತಂಡದಲ್ಲಿ 3,766 ಉದ್ಯೋಗಿಗಳಿದ್ದಾರೆ. ವಾಸ್ತವದಲ್ಲಿ ಎಷ್ಟು ಉದ್ಯೋಗಿಗಳು ಇದ್ದಾರೆ ಎಂಬುದನ್ನು ಇನ್ನಷ್ಟೇ ದೃಢಪಡಿಸಿಕೊಳ್ಳಬೇಕಿದೆ ಎಂದು ‘ಬ್ಯುಸಿನೆಸ್ ಟುಡೇ’ ವರದಿ ಮಾಡಿದೆ.

ಇದನ್ನೂ ಓದಿ: Global Recssion: ಆರ್ಥಿಕ ಹಿಂಜರಿತದ ಆತಂಕದಲ್ಲಿ ಟೆಕ್ ಕಂಪನಿಗಳು, ವಿಶ್ವದಾದ್ಯಂತ ಆವರಿಸಿಕೊಂಡಿದೆ ಉದ್ಯೋಗ ಕಡಿತದ ಭೀತಿ

ಇದನ್ನೂ ಓದಿ
Image
Rs 2000 Currency Notes: ಚಲಾವಣೆಗೆ ಸಿಗುತ್ತಿಲ್ಲ 2,000 ರೂ. ನೋಟು! ಕಾರಣ ಇಲ್ಲಿದೆ ನೋಡಿ
Image
ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು; ಇಲ್ಲಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ವಿವರವಾದ ಮಾಹಿತಿ
Image
ರಿಸೆಷನ್ ಪ್ರೂಫ್ ಜಾಬ್ ಇದೆಯೇ? ಆರ್ಥಿಕ ಹಿಂಜರಿತದ ವೇಳೆ ಉದ್ಯೋಗ ಉಳಿಸಿಕೊಳ್ಳಲು ಇಲ್ಲಿದೆ ಟಿಪ್ಸ್
Image
Online Financial Frauds: ಆನ್​ಲೈನ್ ಹಣಕಾಸು ವಂಚನೆಗಳಿಂದ ರಕ್ಷಣೆಗೆ ಈ ವಿಚಾರಗಳನ್ನು ಗಮನಿಸಿ…

ಉದ್ಯೋಗಿಗಳ ವಜಾ ಕುರಿತಾಗಿ ಅಮೆಜಾನ್​ನಿಂದ ಅಧಿಕೃತ ಪ್ರತಿಕ್ರಿಯೆಗಾಗಿ ಕಾಯಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಲಾಭದಾಯಕವಲ್ಲದ ಘಟಕಗಳಲ್ಲಿ ಕೆಲಸ ಮಾಡುವವರು ಬೇರೆ ಉದ್ಯೋಗ ಹುಡುಕಿಕೊಳ್ಳುವಂತೆ ಅಮೆಜಾನ್ ಸೂಚಿಸಿತ್ತು. ಯಾಕೆಂದರೆ ಯಾವುದೇ ಕ್ಷಣದಲ್ಲಿ ಅವರ ಪ್ರಾಜೆಕ್ಟ್​ಗಳು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ‘ವಾಲ್​​ಸ್ಟ್ರೀಟ್ ಜರ್ನಲ್​’ ಕಳೆದ ವಾರ ವರದಿ ಮಾಡಿತ್ತು.

ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಇನ್​ಸ್ಟಾಗ್ರಾಂ, ವಾಟ್ಸ್​ಆ್ಯಪ್ ಒಡೆತನ ಹೊಂದಿರುವ ಮೆಟಾ ಕಂಪನಿ ಕೆಲವ ದಿನಗಳ ಹಿಂದಷ್ಟೇ 11,000 ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿದೆ. ಅದಕ್ಕೂ ಮುನ್ನ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್​ನಿಂದ 3,500ಕ್ಕೂ ಹೆಚ್ಚು ಮಂದಿಯನ್ನು ವಜಾಗೊಳಿಸಲಾಗಿತ್ತು. ಅದಕ್ಕೂ ಮುನ್ನ ಟೆಕ್ ದೈತ್ಯ ಮೈಕ್ರೋಸಾಫ್ಟ್ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು.

ಬಹುರಾಷ್ಟ್ರೀಯ ಕಂಪನಿಗಳಲ್ಲಿರುವ ತಾಂತ್ರಿಕ ಮತ್ತು ನೆರವು​ ವಿಭಾಗಗಳ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ಆರ್ಥಿಕ ಹಿಂಜರಿತ, ಆರ್ಥಿಕ ಕುಸಿತ, ಆರ್ಥಿಕ ಸ್ಥಗಿತದ ಭೀತಿ ಎಲ್ಲೆಡೆ ವ್ಯಕ್ತವಾಗುತ್ತಿದ್ದು, ಆದಾಯ ಕುಂಠಿತಗೊಳ್ಳಬಹುದು ಎಂಬ ಭೀತಿಯಲ್ಲಿರುವ ಟೆಕ್ ಕಂಪನಿಗಳು ಎಚ್ಚರಿಕೆಯ ಹೆಜ್ಜೆ ಇಡುತ್ತಿವೆ ಎಂದು ಮೂಲಗಳು ಹೇಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Fri, 11 November 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ