BH ಸಿರೀಸ್ ವಾಹನ ನೋಂದಣಿ ಪರಿಚಯಿಸಿದ ಕೇಂದ್ರ ಸರ್ಕಾರ

ಈ ಸಮಸ್ಯೆಗಳನ್ನು ತಪ್ಪಿಸುವ ಸಲುವಾಗಿ ರಾಜ್ಯದಿಂದ ರಾಜ್ಯಕ್ಕೆ ತಡೆರಹಿತವಾಗಿ ವಾಹನಗಳನ್ನು ವರ್ಗಾಯಿಸಲು ಅನುಕೂಲವಾಗುವಂತೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ವಾಹನಗಳಿಗೆ ಹೊಸ ನೋಂದಣಿ ಗುರುತು ಪರಿಚಯಿಸಿದೆ.

BH ಸಿರೀಸ್ ವಾಹನ ನೋಂದಣಿ ಪರಿಚಯಿಸಿದ ಕೇಂದ್ರ ಸರ್ಕಾರ
BH number series
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 28, 2021 | 10:40 PM

ಭಾರತದಲ್ಲಿನ ವಾಹನ ವರ್ಗಾವಣೆಯನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಪರಿಚಯಿಸಿದೆ. ಈ ನಿಯಮದಡಿ ಇನ್ಮುಂದೆ ವಾಹನಗಳಿಗೆ ಹೊಸ ನೋಂದಣಿ ಗುರುತು ಸಿಗಲಿದೆ. ಅಂದರೆ ಹೊಸ ರಿಜಿಸ್ಟರೇಷನ್ ‘ಭಾರತ್ ಸರಣಿ’ ಅಥವಾ ‘BH ಸಿರೀಸ್’ ಆಗಿರಲಿದೆ. ಅದರಂತೆ ಈ ನೋಂದಣಿ ನಂಬರ್ ಪ್ಲೇಟ್​ YY BH 4144 XX ಸ್ವರೂಪದಲ್ಲಿರಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಶುಕ್ರವಾರ ಭಾರತ್ ಸರಣಿಯ ವಾಹನಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹೊಸ ಬಿಎಚ್ ಸರಣಿಯ ವಾಹನಗಳಿಗೆ ಯಾವುದೇ ನೋಂದಣಿಯ ವರ್ಗಾವಣೆ ಅಗತ್ಯವಿಲ್ಲ. ಇದು ದೇಶಾದ್ಯಂತ ಮಾನ್ಯವಾಗಿರುತ್ತದೆ. ಈ ಸೌಲಭ್ಯವು ರಕ್ಷಣಾ ಸಿಬ್ಬಂದಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ಲಭ್ಯವಿರುತ್ತದೆ. ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕಚೇರಿ ಹೊಂದಿರುವ ಖಾಸಗಿ ಕಂಪನಿಗಳ ಉದ್ಯೋಗಿಗಳು ಕೂಡ ಈ ಸೌಲಭ್ಯದ ಲಾಭವನ್ನು ಪಡೆಯಬಹುದು.

ಈ ನಿಯಮದ ಅತೀ ದೊಡ್ಡ ಪ್ರಯೋಜನವೆಂದರೆ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವರ್ಗಾವಣೆಯಾದರೆ, ಅಥವಾ ಪದೇ ಪದೇ ಬೇರೊಂದು ರಾಜ್ಯಕ್ಕೆ ಪ್ರಯಾಣಿಸುತ್ತಿದ್ದರೆ ತಮ್ಮ ವಾಹನಗಳ ನೋಂದಣಿ ಪ್ರಮಾಣಪತ್ರವನ್ನು ವರ್ಗಾಯಿಸುವ ಅಗತ್ಯವಿಲ್ಲ. ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 47 ರ ಪ್ರಕಾರ, ಒಂದು ವಾಹನವನ್ನು ನೋಂದಾಯಿಸಿದ ರಾಜ್ಯವನ್ನು ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ಗರಿಷ್ಠ 12 ತಿಂಗಳುಗಳವರೆಗೆ ಮಾತ್ರ ಓಡಿಸಬಹುದು. 12 ತಿಂಗಳ ಅವಧಿ ಮುಗಿಯುವ ಮೊದಲು ಮಾಲೀಕರು ಅಂತಹ ವಾಹನಗಳನ್ನು ಮರು ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ವಾಹನ ಮಾಲೀಕರು ಮೂಲ ರಾಜ್ಯದಿಂದ ನೋ ಆಬ್ಜೆಕ್ಷನ್ ಪ್ರಮಾಣ ಪತ್ರವನ್ನು ಪಡೆಯಬೇಕು. ರಸ್ತೆ ತೆರಿಗೆಯನ್ನು ಪಾವತಿಸಿದ ನಂತರ ಹೊಸ ರಾಜ್ಯದಲ್ಲಿ ವಾಹನವನ್ನು ನೋಂದಾಯಿಸಿಕೊಳ್ಳಬೇಕು. ಇಲ್ಲಿ ನಿಬಂಧನೆಯು ಬಹಳ ತೊಡಕಿನ ಪ್ರಕ್ರಿಯೆ. ಇದು ಒಂದು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.

ಈ ಸಮಸ್ಯೆಗಳನ್ನು ತಪ್ಪಿಸುವ ಸಲುವಾಗಿ ರಾಜ್ಯದಿಂದ ರಾಜ್ಯಕ್ಕೆ ತಡೆರಹಿತವಾಗಿ ವಾಹನಗಳನ್ನು ವರ್ಗಾಯಿಸಲು ಅನುಕೂಲವಾಗುವಂತೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ವಾಹನಗಳಿಗೆ ಹೊಸ ನೋಂದಣಿ ಗುರುತು ಪರಿಚಯಿಸಿದೆ ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಪ್ರಸ್ತುತ, ಬಿಎಚ್ ಸರಣಿಯ ಅಡಿಯಲ್ಲಿ ಈ ವಾಹನ ನೋಂದಣಿ ಸೌಲಭ್ಯವು ರಕ್ಷಣಾ ಸಿಬ್ಬಂದಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನೌಕರರು, ಕೇಂದ್ರ ಮತ್ತು ರಾಜ್ಯ ಪಿಎಸ್​ಯು ಉದ್ಯೋಗಿಗಳು ಮತ್ತು ಖಾಸಗಿ ವಲಯದ ಕಂಪನಿಗಳು/ಸಂಸ್ಥೆಗಳಿಗೆ ಸ್ವಯಂಪ್ರೇರಿತವಾಗಿ ಲಭ್ಯವಿರಲಿದೆ. ಮೋಟಾರ್ ವಾಹನ ತೆರಿಗೆಯನ್ನು ಎರಡು ವರ್ಷಗಳವರೆಗೆ, ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ನೋಂದಣಿಗಾಗಿ ತೆರಿಗೆ ಸಂಗ್ರಹಿಸಲಾಗುತ್ತದೆ. ಹದಿನಾಲ್ಕನೇ ವರ್ಷದ ಪೂರ್ಣಗೊಂಡ ನಂತರ, ಮೋಟಾರು ವಾಹನ ತೆರಿಗೆಯನ್ನು ವಾರ್ಷಿಕವಾಗಿ ವಿಧಿಸಲಾಗುತ್ತದೆ.

ಆನ್​ಲೈನ್​ ನೋಂದಣಿ: ಪದೇ ಪದೇ ವರ್ಗಾವಣೆಗೆ ಒಳಗಾಗುವ ಮತ್ತು ಇತರ ರಾಜ್ಯಗಳಿಗೆ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗುವ ಜನರಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಬಿಎಚ್ ಸರಣಿ (ಭಾರತ್ ಸರಣಿ) ವಾಹನಗಳಿಗೆ, ಬೇರೆ ರಾಜ್ಯಕ್ಕೆ ತೆರಳಿದಾಗ ಮರು ನೋಂದಣಿ ಅಗತ್ಯವಿಲ್ಲ. ವಾಹನದ ಮಾಲೀಕರು BH ಸರಣಿಯ ಆಯ್ಕೆಯನ್ನು ಹೊಂದಿರುತ್ತಾರೆ. ಈ ಸಂದರ್ಭದಲ್ಲಿ, ಅವರು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಇದರಲ್ಲಿ ನೀವು ಆರ್‌ಟಿಒಗೆ ಹೋಗುವ ಅಗತ್ಯವಿಲ್ಲ. ಈ ಕಾರಣದಿಂದಾಗಿ ಈ ಸಂಪೂರ್ಣ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿದೆ.

Govt introduces new BH number series for vehicles

BH number series

BH- ಸರಣಿಯಲ್ಲಿನ ಸ್ವರೂಪವೇನು? BH- ಸರಣಿಯ ನೋಂದಣಿ ಗುರುತು YY BH #### XX ಆಗಿರುತ್ತದೆ. YY ನೋಂದಣಿಯ ವರ್ಷವನ್ನು ಸೂಚಿಸುತ್ತದೆ, BH ಎಂಬುದು ಭಾರತ್ ಸರಣಿಯ ಸಂಕೇತವಾಗಿದೆ. #### ಎಂಬಲ್ಲಿ ನಾಲ್ಕು ಅಂಕಿಯ ಸಂಖ್ಯೆ ಇರಲಿದೆ. ಇನ್ನು XX ಎರಡು ವರ್ಣಮಾಲೆಗಳನ್ನು ಹೊಂದಿರಲಿದೆ.

ಇದನ್ನೂ ಓದಿ: T20 ವಿಶ್ವಕಪ್ ಅರ್ಹತಾ​ ಪಂದ್ಯ: 20 ಓವರ್​ನಲ್ಲಿ ಕೇವಲ 32 ರನ್​..!

ಇದನ್ನೂ ಓದಿ: India vs England 3rd test: ಸಿರಾಜ್ ಮೇಲೆ ಚೆಂಡಿನ ದಾಳಿ: ಮುಂದುವರೆದ ಇಂಗ್ಲೆಂಡ್ ಪ್ರೇಕ್ಷಕರ ಪುಂಡಾಟ

ಇದನ್ನೂ ಓದಿ: IPL 2021: ಮಾಜಿ RCB ಆಟಗಾರ, ವಿಶ್ವದ ನಂಬರ್ 1 ಬೌಲರ್ ರಾಜಸ್ಥಾನ್ ರಾಯಲ್ಸ್ ಪಾಲು

(Govt introduces new BH number series for vehicles)

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ