5G ಸೇವೆ ಬಂದಾಗ 2G, 3G ನೆಟ್‌ವರ್ಕ್ ಯಾವಾಗ ಸ್ಥಗಿತಗೊಳ್ಳುತ್ತವೆ ಗೊತ್ತಾ!? 5G ಸಾಧನಗಳ ಲಭ್ಯತೆ ಹೇಗಿದೆ? ಇಲ್ಲಿದೆ ಪಿನ್ ಟು ಪಿನ್ ಡಿಟೇಲ್ಸ್

5G ಮೊಬೈಲ್ ಫೋನ್‌ಗಳು ಸುಲಭವಾಗಿ ಲಭ್ಯವಿದೆಯೇ? ಹೌದು. 5G ಫೋನ್‌ಗಳ ಹಲವು ಮಾದರಿಗಳು ಸುಲಭವಾಗಿ ಲಭ್ಯವಿವೆ. ಆಪಲ್‌ ಐಫೋನ್‌, ಸ್ಯಾಮ್‌ಸಂಗ್‌, ಒನ್‌ಪ್ಲಸ್‌ ಇತ್ಯಾದಿ ಪ್ರಮುಖ ಬ್ರ್ಯಾಂಡ್‌ಗಳ ಸಾಧನಗಳು 5G ಫೋನ್‌ಗಳನ್ನು ಮಾರಾಟ ಮಾಡುತ್ತಿವೆ.

5G ಸೇವೆ ಬಂದಾಗ 2G, 3G ನೆಟ್‌ವರ್ಕ್ ಯಾವಾಗ ಸ್ಥಗಿತಗೊಳ್ಳುತ್ತವೆ ಗೊತ್ತಾ!? 5G ಸಾಧನಗಳ ಲಭ್ಯತೆ ಹೇಗಿದೆ? ಇಲ್ಲಿದೆ ಪಿನ್ ಟು ಪಿನ್ ಡಿಟೇಲ್ಸ್
5G ಸೇವೆಗಳು ಬಂದರೆ 2G, 3G ನೆಟ್‌ವರ್ಕ್ ಯಾವಾಗ ಸ್ಥಗಿತಗೊಳ್ಳುತ್ತವೆ ಗೊತ್ತಾ!? 5G ಸಾಧನಗಳ ಲಭ್ಯತೆ ಹೇಗಿದೆ? ಇಲ್ಲಿದೆ ಪಿನ್ ಟು ಪಿನ್ ಡಿಟೇಲ್ಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 27, 2022 | 6:06 AM

5G ಯಾರಿಗೆ ಹೆಚ್ಚು ಅನುಕೂಲ? ಯಾವ ರೀತಿಯ ಬಳಕೆಗೆ ಇದು ಹೆಚ್ಚು ಸೂಕ್ತವಾಗಿದೆ? ಎಂಬಂತಹ ವ್ಯಾಲಿಡ್​ ಪಾಯಿಂಟುಗಳಿಂದ ಹಿಡಿದು 5G ವಿತರಣೆ ಹೇಗೆ ನಡೆಯುತ್ತದೆ? ದೊಡ್ಡ ಟವರ್‌ಗಳ ಬದಲಿಗೆ ಸಣ್ಣ ಪೋಸ್ಟ್‌ಗಳು (ಮೈಕ್ರೋ ಸೈಟ್‌ಗಳು) ಇರುತ್ತವೆಯೇ? ಅವು ಹೇಗೆ ಕಾರ್ಯನಿರ್ವಹಿಸುತ್ತವೆ? ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನಿಖರ ಉತ್ತರ (Fifth-generation wireless -5G):

  1.  5G ಬಂದಾಗ, 3G ಮತ್ತು 4G ಫೋನ್‌ಗಳು ಧ್ವನಿ ಕರೆ ಮತ್ತು ಡೇಟಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆಯೇ? ಹೌದು, ಅಸ್ತಿತ್ವದಲ್ಲಿರುವ ಎಲ್ಲಾ ಫೋನ್ ಧ್ವನಿ ಕರೆಗಳು ಮತ್ತು ಡೇಟಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿರುತ್ತವೆ. ಆಪರೇಟರ್‌ ತಮ್ಮ 2G ಅಥವಾ 3G ನೆಟ್‌ವರ್ಕ್ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿದಾಗ ಮಾತ್ರ ಈ ಸೇವೆಗಳು ನಿಲ್ಲುತ್ತವೆ.
  2.  ಹಾಗಾದರೆ, ಅಂತಹ ಬಳಕೆದಾರರಿಗೆ ಯಾವ ಬದಲಾವಣೆಗಳು ಕಂಡುಬರುತ್ತವೆ? ಅವರ ಸಾಧನ 4G ಆಗಿದ್ದರೂ ಡೌನ್‌ಲೋಡ್ ಮತ್ತು ಅಪ್‌ಲೋಡ್‌ ವೇಗ ಹೆಚ್ಚುತ್ತದೆಯೇ? ನೀವು 5G ಅನ್ನು 5G ಇರುವ ಸಾಧನದಲ್ಲಿ ಮಾತ್ರ ಅನುಭವಿಸಬಹುದು. ಈಗಾಗಲೇ ಇರುವ 4G ಸಾಧನಗಳಲ್ಲಿ 5G ಲಭ್ಯವಿರುವುದಿಲ್ಲ.
  3. 4G ನೆಟ್‌ವರ್ಕ್ ಮುಂದುವರಿಯುತ್ತದೆಯೇ? ಹೌದು, 4G ನೆಟ್‌ವರ್ಕ್ ಮುಂದುವರಿಯುತ್ತದೆ.
  4.  5G ಸಾಧನಗಳ ಲಭ್ಯತೆ ಹೇಗಿದೆ? ಉದ್ಯಮದ ಅಂದಾಜಿನ ಪ್ರಕಾರ, ಭಾರತದಲ್ಲಿ ಪ್ರಸ್ತುತ ಸುಮಾರು 50 ಮಿಲಿಯನ್ 5G ಸಾಧನಗಳಿವೆ. ಈ ಸಂಖ್ಯೆ ವೇಗವಾಗಿ ಬೆಳೆಯುತ್ತಿದೆ.
  5.  5G ಮೊಬೈಲ್ ಫೋನ್‌ಗಳು ಸುಲಭವಾಗಿ ಲಭ್ಯವಿದೆಯೇ? ಹೌದು. 5G ಫೋನ್‌ಗಳ ಹಲವು ಮಾದರಿಗಳು ಸುಲಭವಾಗಿ ಲಭ್ಯವಿವೆ. ಆಪಲ್‌ ಐಫೋನ್‌, ಸ್ಯಾಮ್‌ಸಂಗ್‌, ಒನ್‌ಪ್ಲಸ್‌ ಇತ್ಯಾದಿ ಪ್ರಮುಖ ಬ್ರ್ಯಾಂಡ್‌ಗಳ ಸಾಧನಗಳು 5G ಫೋನ್‌ಗಳನ್ನು ಮಾರಾಟ ಮಾಡುತ್ತಿವೆ.
  6.  4G (ಜಿಯೋಫೈ) ಯಲ್ಲಿ ನಮಗೆ ಲಭ್ಯವಿರುವ ಹಾಗೆ 5G ಯಲ್ಲೂ ಸಣ್ಣ ವೈಫೈ ಸಾಧನಗಳು ಇರುತ್ತವೆಯೇ? ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಿಸಿದಂತೆ, ಜಿಯೋ ಏರ್ ಫೈಬರ್ ಸಾಧನವನ್ನು ಜಿಯೋ ಹೊರತರಲಿದೆ. ಇದು ಪೋರ್ಟಬಲ್ 5G ಸಾಧನವಾಗಿದೆ.
  7.  ಪ್ರಸ್ತುತ 4G ಫೋನ್‌ಗಳನ್ನು 5G ಗೆ ಅಪ್‌ಗ್ರೇಡ್ ಮಾಡಬಹುದೇ? ಇಲ್ಲ, ಪ್ರಸ್ತುತ 4G ಫೋನ್‌ಗಳನ್ನು 5G ಗೆ ಅಪ್‌ಗ್ರೇಡ್ ಮಾಡಲು ಸಾಧ್ಯವಿಲ್ಲ.
  8.  ಬಳಕೆದಾರರು ಅಷ್ಟು ದೊಡ್ಡ ಪ್ರಮಾಣದಲ್ಲಿ ಡೇಟಾ ಬಳಕೆಯನ್ನು ಹೊಂದಿಲ್ಲದಿದ್ದರೆ, 4G ಫೋನ್ ಬಿಟ್ಟು ಹೊಸ 5G ಫೋನ್ ಖರೀದಿಸಬೇಕೆ? 5G ಹೆಚ್ಚಿನ ವೇಗ ಮತ್ತು ಕಡಿಮೆ ಲೇಟೆನ್ಸಿಯ ವಿಶಿಷ್ಟ ಪ್ರಯೋಜನವನ್ನು ಹೊಂದಿದೆ. ಇದು ಡಿಜಿಟಲ್ ಗ್ರಾಹಕರು ಹೆಚ್ಚಿನ ವೇಗದ ಇಂಟರ್ನೆಟ್ ಅನ್ನು ಬಳಸಲು ಸಹಾಯ ಮಾಡುತ್ತದೆ.
  9.  5G ಯಾರಿಗೆ ಹೆಚ್ಚು ಅನುಕೂಲ? ಯಾವ ರೀತಿಯ ಬಳಕೆಗೆ ಇದು ಹೆಚ್ಚು ಸೂಕ್ತವಾಗಿದೆ? 5G ಯ ಅನುಕೂಗಳಿಂದ ಎಲ್ಲಾ ವಿಭಾಗದ ಗ್ರಾಹಕರು ಪ್ರಯೋಜನ ಪಡೆಯುತ್ತಾರೆ. ಮನೆಯಲ್ಲಿ 5G ಬಳಸುವ ಗ್ರಾಹಕರು ಜಿಯೋ ಏರ್ ಫೈಬರ್ ಸಾಧನ ಅಥವಾ 5G ಹ್ಯಾಂಡ್‌ಸೆಟ್ ಬಳಸಿ ಹೆಚ್ಚಿನ ವೇಗದ ಇಂಟರ್ನೆಟ್ ಪಡೆಯಬಹುದು. 5G ಉದ್ಯಮ 4.0 ಪರಿಹಾರಗಳನ್ನು ಬಳಸಬಹುದು. ಸಾಮಾಜಿಕ ವಲಯದಲ್ಲಿ ಇದು ಕೃಷಿ, ಆರೋಗ್ಯ, ಶಿಕ್ಷಣ, ಇತ್ಯಾದಿಗಳಿಗೆ ನೆರವಾಗಬಹುದು.
  10.  5G ವಿತರಣೆ ಹೇಗೆ ನಡೆಯುತ್ತದೆ? ದೊಡ್ಡ ಟವರ್‌ಗಳ ಬದಲಿಗೆ ಸಣ್ಣ ಪೋಸ್ಟ್‌ಗಳು (ಮೈಕ್ರೋ ಸೈಟ್‌ಗಳು) ಇರುತ್ತವೆಯೇ? ಅವು ಹೇಗೆ ಕಾರ್ಯನಿರ್ವಹಿಸುತ್ತವೆ? ಅಸ್ತಿತ್ವದಲ್ಲಿರುವ ಟವರ್‌ಗಳಲ್ಲಿ 5G ಉಪಕರಣಗಳನ್ನು ಅಳವಡಿಸಬಹುದಾಗಿದೆ. ಇನ್ನು, ರಸ್ತೆ ಬದಿಗಳಲ್ಲೂ ಅಳವಡಿಸಬಹುದಾಗಿದೆ.

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ