TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?

Jio download speed: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್ -TRAI) ಜೂನ್ 8ರಂದು ಪ್ರಕಟಿಸಿರುವ ವರದಿ ಪ್ರಕಾರ, ಸರಾಸರಿ 4.7 ಎಂಬಿಪಿಎಸ್ ವೇಗದೊಂದಿಗೆ ಏರ್‌ಟೆಲ್ ಅತ್ಯಂತ ಕಡಿಮೆ ವೇಗದ ಸ್ಥಾನ ಪಡೆದುಕೊಂಡಿದೆ.

TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?
TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?
Follow us
ಸಾಧು ಶ್ರೀನಾಥ್​
|

Updated on: Jun 17, 2021 | 8:51 AM

ನವದೆಹಲಿ: ಪ್ರತಿ ಸೆಕೆಂಡಿಗೆ ಸರಾಸರಿ 20.7 ಮೆಗಾಬೈಟ್ ಡೌನ್‌ಲೋಡ್ ವೇಗವನ್ನು ಹೊಂದಿರುವ ರಿಲಯನ್ಸ್ ಜಿಯೋ, 4ಜಿ ವಿಭಾಗದಲ್ಲಿ ತನ್ನ ಮುಂದಾಳತ್ವ ಕಾಯ್ದುಕೊಳ್ಳುವುದನ್ನು ಮುಂದುವರಿಸಿದೆ. ಮೇ ತಿಂಗಳಿನ ಪಟ್ಟಿಯಲ್ಲಿ ವೊಡಾಫೋನ್ ಐಡಿಯಾ 6.7 ಎಂಬಿಪಿಎಸ್ ಡೇಟಾ ವೇಗದೊಂದಿಗೆ ಅಪ್‌ಲೋಡ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದೆ.

ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಅದು ತನ್ನ ಅತಿ ಸಮೀಪದ ಪ್ರತಿಸ್ಪರ್ಧಿ ವೊಡಾಫೋನ್ ಐಡಿಯಾಕ್ಕಿಂತಲೂ ಮೂರು ಪಟ್ಟು ಅಧಿಕವಾಗಿದೆ. ವೊಡಾಫೋನ್ ಐಡಿಯಾ 6.3 ಎಂಬಿಪಿಎಸ್ ಸರಾಸರಿ ಡೌನ್‌ಲೋಡ್ ವೇಗವನ್ನು ಹೊಂದಿದೆ.

ಏರ್‌ಟೆಲ್ ಅತ್ಯಂತ ಕಡಿಮೆ ವೇಗದ ಸ್ಥಾನ

2018ರ ಆಗಸ್ಟ್‌ನಲ್ಲಿ ವೊಡಾಫೋನ್ ಮತ್ತು ಐಡಿಯಾಗಳು ವಿಲೀನಗೊಂಡ ಬಳಿಕ ಇದೇ ಮೊದಲ ಬಾರಿಗೆ ಟ್ರಾಯ್ ಈ ಕಂಪೆನಿಗಳ ನೆಟ್‌ವರ್ಕ್ ವೇಗವನ್ನು ಜತೆಗೂಡಿಸಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್ -TRAI) ಜೂನ್ 8ರಂದು ಪ್ರಕಟಿಸಿರುವ ವರದಿ ಪ್ರಕಾರ, ಸರಾಸರಿ 4.7 ಎಂಬಿಪಿಎಸ್ ವೇಗದೊಂದಿಗೆ ಏರ್‌ಟೆಲ್ ಅತ್ಯಂತ ಕಡಿಮೆ ವೇಗದ ಸ್ಥಾನ ಪಡೆದುಕೊಂಡಿದೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಅಥವಾ ವಿಡಿಯೋಗಳನ್ನು ರವಾನಿಸಲು ಸಹಾಯ ಮಾಡುತ್ತದೆ. ಟ್ರಾಯ್ ವರದಿ ಪ್ರಕಾರ, ವೊಡಾಫೋನ್ ಐಡಿಯಾ ಮೇ ತಿಂಗಳಲ್ಲಿ ಸರಾಸರಿ 6.3 ಎಂಬಿಪಿಎಸ್ ಅಪ್‌ಲೋಡ್ ವೇಗ ಹೊಂದಿತ್ತು. ರಿಲಯನ್ಸ್ ಜಿಯೋ 4.2 ಎಂಬಿಪಿಎಸ್‌ನೊಂದಿಗೆ ಎರಡನೆಯ ಸ್ಥಾನದಲ್ಲಿದ್ದರೆ, ಭಾರ್ತಿ ಏರ್‌ಟೆಲ್ 3.6 ಎಂಬಿಪಿಎಸ್ ಅಪ್‌ಲೋಡ್ ವೇಗ ಹೊಂದಿದೆ.

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್‌ಎನ್‌ಎಲ್ ಆಯ್ದ ಪ್ರದೇಶಗಳಲ್ಲಿ 4ಜಿ ಸೇವೆ ಆರಂಭಿಸಿದ್ದರೂ, ಅದರ ನೆಟ್‌ವರ್ಕ್‌ ವೇಗವನ್ನು ಟ್ರಾಯ್ ಪಟ್ಟಿಯಲ್ಲಿ ನಮೂದಿಸಿಲ್ಲ. ತನ್ನ ಮೈ ಸ್ಪೀಡ್ ಆಪ್‌ನಲ್ಲಿನ ರಿಯಲ್ ಟೈಮ್ ಆಧಾರದಲ್ಲಿ ಭಾರತದಾದ್ಯಂತ ಸಂಗ್ರಹಿಸಿದ ದತ್ತಾಂಶಗಳ ಲೆಕ್ಕಾಚಾರದಲ್ಲಿ ಟ್ರಾಯ್, ಸರಾಸರಿ ವೇಗವನ್ನು ನಿರ್ಧರಿಸುತ್ತದೆ.

(Jio tops in 4G download speed in May 2021 Trai)

ಜಿಯೋ ಫೈಬರ್‌ನಿಂದ ಮಾನ್ಸೂನ್​ ಸುಗ್ಗಿ! ಹೊಸ ಪೋಸ್ಟ್‌ ಪೇಯ್ಡ್ ಪ್ಲಾನ್‌, ಇಂಟರ್‌ನೆಟ್‌ ಬಾಕ್ಸ್‌ ಜೊತೆಗೆ ಇನ್‌ಸ್ಟಲೇಷನ್‌ ಉಚಿತ!

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ