LPG Cylinder: ಎಲ್‌ಪಿಜಿ ಗ್ರಾಹಕರೇ ಗಮನಿಸಿ; ಸದ್ಯದಲ್ಲೇ ಅಡುಗೆ ಅನಿಲದ ಸಿಲಿಂಡರ್‌ಗಳ ತೂಕ ಇಳಿಸಲು ಸರ್ಕಾರ ಚಿಂತನೆ
14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ.
ನವದೆಹಲಿ: ದಿನನಿತ್ಯದ ಅಗತ್ಯಗಳಲ್ಲಿ ಒಂದಾದ ಎಲ್‌ಪಿಜಿ (LPG) ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳು ಭಾರವಾಗಿದ್ದು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್ ಸಿಲಿಂಡರ್‌ಗಳ ತೂಕವನ್ನೇ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಚಿಸಿದೆ.
14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಎಲ್‌ಪಿಜಿ ಸಿಲಿಂಡರ್‌ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿದಾಗ ಅದಕ್ಕೆ ಉತ್ತರ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG) ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು. 14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ. ಹೀಗಾಗಿ, ಶೀಘ್ರದಲ್ಲೇ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೂಕದಿಂದ ಅದನ್ನು ಸಾಗಾಟ ಮಾಡಲು ಸಮಸ್ಯೆಯಾಗುತ್ತದೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ.
ಇದನ್ನೂ ಓದಿ: LPG Subsidy: ಮತ್ತೆ ಎಲ್‌ಪಿಜಿ ಸಬ್ಸಿಡಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ; ನಿಮಿಷಗಳಲ್ಲಿ ಪರಿಶೀಲನೆ ಮಾಡುವುದು ಹೇಗೆ?
LPG Cylinder Price: ಮತ್ತೆ ಬೆಲೆ ಏರಿಕೆ ಬರೆ, ಎಲ್‌ಪಿಜಿ ಅಡುಗೆ ಸಿಲಿಂಡರ್ ಬೆಲೆ ಮತ್ತೆ 15 ರೂ. ಹೆಚ್ಚಳ