AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ

ಮಾರುತಿ ಸುಜುಕಿ ಇಂಡಿಯಾದಿಂದ ಜನವರಿ 15ರಿಂದ ಅನ್ವಯ ಆಗುವಂತೆ ಕಾರುಗಳ ಬೆಲೆ ಏರಿಕೆ ಮಾಡಲಾಗಿದೆ. ಸರಾಸರಿ ಶೇಕಡಾವಾರು ಎಷ್ಟು ಹೆಚ್ಚಳ ಮಾಡಲಾಗಿದೆ ಎಂಬ ವಿವರ ಇಲ್ಲಿದೆ.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jan 15, 2022 | 1:04 PM

ದೇಶದ ಅತಿ ದೊಡ್ಡ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಶನಿವಾರದಂದು ತಿಳಿಸಿರುವಂತೆ, ಅದರ ಮಾಡೆಲ್​ಗಳ ಬೆಲೆಯನ್ನು ಶೇ 4.3ರ ತನಕ ಏರಿಕೆ ಮಾಡಿದೆ. ಇನ್​ಪುಟ್​ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅದನ್ನು ಭಾಗಶಃ ಸರಿತೂಗಿಸಬೇಕು ಎಂಬ ಕಾರಣಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ತೀರ್ಮಾನಕ್ಕೆ ಬರಲಾಗಿದೆ. ಕಂಪೆನಿಯ ವಿವಿಧ ಮಾಡೆಲ್​ಗಳ ಕಾರುಗಳ ಬೆಲೆಯಲ್ಲಿ ಶೇ 0.1ರಿಂದ ಶೇ 4.3ರ ತನಕ ದರ ಹೆಚ್ಚಳ ಆಗಲಿದೆ. ವಿವಿಧ ಇನ್​ಪುಟ್​ ವೆಚ್ಚಗಳ ಏರಿಕೆ ಕಾರಣಕ್ಕೆ ಈ ಬೆಳವಣಿಗೆ ಆಗಲಿದೆ. “ವೇಯ್ಟೆಡ್ ಸರಾಸರಿ ಬೆಲೆಗಳ ಏರಿಕೆಯು ಎಕ್ಸ್​- ಶೋರೂಮ್​ ದರಗಳು (ದೆಹಲಿ) ಎಲ್ಲ ಮಾಡೆಲ್​ಗಳಲ್ಲಿ ಶೇ 1.7. ಹೊಸ ಬೆಲೆಗಳು ಇಂದಿನಿಂದ (ಜನವರಿ 15) ಜಾರಿಗೆ ಬರಲಿದೆ,” ಎಂದು ಮಾರುತಿ ಸುಜುಕಿ ಇಂಡಿಯಾ ನಿಯಂತ್ರಕ ಫೈಲಿಂಗ್​ನಲ್ಲಿ ಹೇಳಿದೆ.

ಮಾರುತಿ ಸುಜುಕಿಯಿಂದ ಆಲ್ಟೋದಿಂದ ಎಸ್​-ಕ್ರಾಸ್ ತನಕ ಕಾರುಗಳ ಮಾರಾಟ ಮಾಡಲಾಗುತ್ತದೆ. ಅವುಗಳ ದರವು ಕ್ರಮವಾಗಿ ರೂ. 3.15 ಲಕ್ಷದಿಂದ ರೂ. 12.56 ಲಕ್ಷದ ತನಕ ಇದೆ. ಕಳೆದ ವರ್ಷ ಮಾರುತಿ ಸುಜುಕಿ ಮೂರು ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜನವರಿಯಲ್ಲಿ ಶೇ 1.4ರಷ್ಟು, ಏಪ್ರಿಲ್​ನಲ್ಲಿ ಶೇ 1.6ರಷ್ಟು, ಸೆಪ್ಟೆಂಬರ್​ನಲ್ಲಿ ಶೇ 1.9ರಷ್ಟು ಹೀಗೆ ಒಟ್ಟಾರೆಯಾಗಿ ಶೇ 4.9ರಷ್ಟು ದರ ಇಳಿಕೆ ಮಾಡಲಾಗಿತ್ತು.

ಕಳೆದ ತಿಂಗಳು ಕಂಪೆನಿಯಿಂದ ಹೇಳಿದ ಪ್ರಕಾರ, ಅಗತ್ಯ ವಸ್ತುಗಳಾದ ಉಕ್ಕು, ಅಲ್ಯೂಮಿನಿಯಂ, ತಾಮ್ರ, ಪ್ಲಾಸ್ಟಿಕ್ ಮತ್ತು ಬೆಲೆಬಾಳುವ ಇತರ ಲೋಹಗಳ ಬೆಲೆಗಳು ಕಳೆದ ಒಂದು ವರ್ಷದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Maruti Suzuki: ಚಿಪ್ ಕೊರತೆಯಿಂದ ಸತತ ಎರಡನೇ ತಿಂಗಳು ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತ ಸಾಧ್ಯತೆ

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ