AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ ಎಷ್ಟು ಗೊತ್ತಾ?

ola electric scooter specifications: ಒಟ್ಟು 10 ಬಣ್ಣಗಳಲ್ಲಿ ಓಲಾ ಸ್ಕೂಟರ್ ಖರೀದಿಗೆ ಬುಕ್ಕಿಂಗ್​ಗೆ ಲಭ್ಯವಿದ್ದು, ಗ್ರಾಹಕರು ಕೆಂಪು, ಪಿಂಕ್, ಹಳದಿ, ಸ್ವಿಲರ್, ಬಿಳಿ ಹಾಗೂ ನೀಲಿ ಬಣ್ಣಗಳಲ್ಲಿ ಖರೀದಿಸಬಹುದು.

Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ ಎಷ್ಟು ಗೊತ್ತಾ?
ಇನ್ನು ದೆಹಲಿಯಲ್ಲಿ ಓಲಾ S1 85,099 ರೂ. ಹಾಗೆಯೇ ಓಲಾ S1 ಪ್ರೊ ಬೆಲೆ 110,149 ರೂ. ಅತ್ತ ಮಹಾರಾಷ್ಟ್ರದಲ್ಲೂ ಓಲಾ ಸ್ಕೂಟರ್ ಮೇಲೆ ಸಬ್ಸಿಡಿ ಇದ್ದು, ಅಲ್ಲಿ 94,999 ರೂ. ಹಾಗೂ 124,999 ರೂ.ನಲ್ಲಿ ಓಲಾ ಸ್ಕೂಟರ್​ ಲಭ್ಯವಿದೆ.
TV9 Web
| Edited By: |

Updated on: Jul 27, 2021 | 4:45 PM

Share

ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲೇ ರಸ್ತೆಗಿಳಿಯಲಿದೆ. ಈಗಾಗಲೇ ಕಂಪೆನಿ ಬುಕ್ಕಿಂಗ್ ಆರಂಭಿಸಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಬುಕ್ ಮಾಡಿಕೊಂಡಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಆಗಸ್ಟ್​ ತಿಂಗಳಲ್ಲಿ ಓಲಾ ಸ್ಕೂಟರ್​ನ ಮೊದಲ ಆವೃತ್ತಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಪ್ರಮುಖ ನಗರಗಳಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲ್ಲಿದ್ದೇವೆ. ಹಾಗೆಯೇ ಬುಕ್ಕಿಂಗ್ ಮಾಡಲಾದ ಸ್ಕೂಟರ್​ನ್ನು ಕೊರೋನಾ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ತಲುಪಿಸುವುದಾಗಿ ಓಲಾ ಕಂಪೆನಿ ಘೋಷಿಸಿದೆ. ಇನ್ನು ಆಯ್ದ ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸೆಂಟರ್​ಗಳನ್ನು ನಿರ್ಮಿಸಲಿದ್ದು, ಈಗಾಗಲೇ ನಿರ್ಮಾಣ ಪ್ರಕ್ರಿಯೆಗಳ ಸಿದ್ಧತೆಗಳು ಶುರುವಾಗಿದೆ. ಇದರಿಂದ ಓಲಾ ಸ್ಕೂಟರ್​ನ್ನು ಚಾರ್ಜಿಂಗ್ ಸ್ಟೇಷನ್​ ಮೂಲಕ ವೇಗವಾಗಿ ಚಾರ್ಜ್​​ ಮಾಡಿಕೊಳ್ಳಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ನೀವು ಚಾರ್ಜಿಂಗ್ ಸ್ಟೇಷನ್‌ನಿಂದ ಚಾರ್ಜ್ ಮಾಡಿದರೆ ಶೂನ್ಯದಿಂದ ಸಂಪೂರ್ಣವಾಗಿ ಚಾರ್ಜ್ ಮಾಡಲು ಸುಮಾರು ಎರಡೂವರೆ ಗಂಟೆ ಸಮಯ ತೆಗೆದುಕೊಳ್ಳಲಿದೆ. ಹೈಪರ್ ಚಾರ್ಜಿಂಗ್ ಕೇಂದ್ರದಲ್ಲಿ,ಕೇವಲ 18 ನಿಮಿಷಗಳಲ್ಲಿ 50% ವರೆಗೆ ಚಾರ್ಜ್ ಮಾಡಬಹುದು. ಇನ್ನು ಮನೆಯಲ್ಲಿಯೇ ಸಂಪೂರ್ಣವಾಗಿ ಚಾರ್ಜ್ ಮಾಡಲು ಐದಾರು ಗಂಟೆ ತೆಗೆದುಕೊಳ್ಳಲಿದೆ. ಓಲಾ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮೂರು ಮಾಡೆಲ್​ಗಳಲ್ಲಿ ಬಿಡುಗಡೆ ಮಾಡಲಿದೆ. ಈ ಮೂರು ಮಾಡೆಲ್​​ಗಳಿಗೆ ಓಲಾ ಎಸ್, ಎಸ್ 1 ಮತ್ತು ಓಲಾ ಎಸ್ 1 ಪ್ರೊ ಎಂದು ಹೆಸರಿಡಲಾಗಿದೆ. ಇವುಗಳು ಕ್ರಮವಾಗಿ 2kW, 4kW ಮತ್ತು 7kW ಮೋಟರ್‌ಗಳನ್ನು ಹೊಂದಿರಲಿವೆ.

ಇನ್ನು ಓಲಾ ಎಲೆಕ್ಟ್ರಿಕ್ ಸಿಇಒ ಭಾವೀಶ್ ಅಗರ್ವಾಲ್, ತಮ್ಮ ಕಂಪೆನಿಯ ನೂತನ ಸ್ಕೂಟರ್​ನ ಟಾಪ್ ಸ್ಪೀಡ್ ಎಷ್ಟಿರಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಸಮೀಕ್ಷೆ ನಡೆಸಿದ್ದಾರೆ. 80Kmph, 90Kmph, 100Kmph ಗಿಂತ ಹೆಚ್ಚಿನ ವೇಗದ ಆಯ್ಕೆಗಳನ್ನು ನೀಡಿ ಕೇಳಲಾದ ಈ ಪ್ರಶ್ನೆಗೆ ಶೇ. 49.4 ರಷ್ಟು ಮಂದಿ 100 ಕಿ.ಮೀ ವೇಗಕ್ಕಿಂತ ಹೆಚ್ಚಿರಬೇಕೆಂದು ತಿಳಿಸಿದ್ದಾರೆ. ಈ ಸಮೀಕ್ಷೆ ಪ್ರಕಾರ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ನ ವೇಗ 100 ಕಿ.ಮೀ ಅಸುಪಾಸಿನಲ್ಲಿರಲಿದೆ ಎಂಬುದನ್ನು ಅಂದಾಜಿಸಬಹುದು.

ಆಟೋಮೊಬೈಲ್ ಎಕ್ಸ್​ಪರ್ಟ್​ಗಳ ಮಾಹಿತಿ ಪ್ರಕಾರ, ಓಲಾ ಸ್ಕೂಟರ್ ಬೇಸ್ ಮಾಡೆಲ್​ 45 ಕಿಲೋಮೀಟರ್ ವೇಗ ಹೊಂದಿದ್ದರೆ, ಎರಡನೆಯದು 70 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ. ಇದೀಗ ಭಾವೀಶ್ ಅಗರ್ವಾಲ್ ಅವರು ಟಾಪ್ ಸ್ಪೀಡ್ ಸಮೀಕ್ಷೆಯನ್ನು ನಡೆಸಿದ್ದರಿಂದ 7kW ಮೋಟರ್​ ಮಾಡೆಲ್ ವೇಗ 100 ಅಥವಾ ಅದಕ್ಕಿಂತ ಹೆಚ್ಚಿರಲಿದೆ ಎಂದೇ ಹೇಳಲಾಗುತ್ತಿದೆ. ಒಂದು ವೇಳೆ 100 ಕಿ.ಮೀ ಗಿಂತ ಹೆಚ್ಚಿನ ವೇಗ ನೀಡಿದರೆ ಹೈವೇ ಸೇರಿದಂತೆ ದೂರದ ಪ್ರಯಾಣಕ್ಕೆ ಓಲಾ ಸ್ಕೂಟರ್​ನ್ನು ಬಳಸಿಕೊಳ್ಳಬಹುದು.

ಇನ್ನು ಒಟ್ಟು 10 ಬಣ್ಣಗಳಲ್ಲಿ ಓಲಾ ಸ್ಕೂಟರ್ ಖರೀದಿಗೆ ಬುಕ್ಕಿಂಗ್​ಗೆ ಲಭ್ಯವಿದ್ದು, ಗ್ರಾಹಕರು ಕೆಂಪು, ಪಿಂಕ್, ಹಳದಿ, ಸ್ವಿಲರ್, ಬಿಳಿ ಹಾಗೂ ನೀಲಿ ಬಣ್ಣಗಳಲ್ಲಿ ಖರೀದಿಸಬಹುದು. ಹಾಗೆಯೇ ಈ ಸ್ಕೂಟರ್​ನ ಮೈಲೇಜ್ ಅದರ ವೇಗಕ್ಕೆ ಅನುಗುಣವಾಗಿರಲಿದೆ. ಅಂದರೆ 20 ಕಿ.ಮೀ ವೇಗದಲ್ಲಿ ಚಲಾಯಿಸಿದರೆ ಬರೋಬ್ಬರಿ 240 ಕಿ.ಮೀ ರೇಂಜ್ (ಮೈಲೇಜ್) ಸಿಗಲಿದೆ ಎಂದು ಕಂಪೆನಿ ತಿಳಿಸಿದೆ. ಸಾಮಾನ್ಯ ವೇಗದಲ್ಲಿ 130-150 ಕಿಲೋಮೀಟರ್ ವ್ಯಾಪ್ತಿಯವರೆಗೆ ಚಲಿಸಬಹುದು. ಈ ಸ್ಕೂಟರ್ ಬೆಲೆಯು ಸುಮಾರು 1 ಲಕ್ಷ ರೂ.ನಿಂದ ಆರಂಭವಾಗಲಿದ್ದು, ಆ ಮಾಡೆಲ್​ಗೆ ಅನುಗುಣವಾಗಿ ಬೆಲೆಯಲ್ಲಿ ವ್ಯತ್ಯಾಸಗಳು ಕಂಡು ಬರುತ್ತದೆ.

ಇದನ್ನೂ ಓದಿ: Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್

ಇದನ್ನೂ ಓದಿ: ಈವರೆಗೆ ಟೀಮ್ ಇಂಡಿಯಾ ಪರ ಎಷ್ಟು ಮಂದಿ ಆಡಿದ್ದಾರೆ ಗೊತ್ತಾ?

(Ola electric scooter expected to have top speed)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ