PM Kisan Scheme: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ಜ. 1ರಂದು ದೇಶದ 10 ಕೋಟಿ ರೈತರ ಖಾತೆಗೆ ಹಣ ಬಿಡುಗಡೆ

PM Kisan Samman Nidhi Yojana: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಂತುಗಳನ್ನು 2022ರ ಜನವರಿ 1ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ.

PM Kisan Scheme: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ಜ. 1ರಂದು ದೇಶದ 10 ಕೋಟಿ ರೈತರ ಖಾತೆಗೆ ಹಣ ಬಿಡುಗಡೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 29, 2021 | 6:19 PM

ನವದೆಹಲಿ: ಈ ಹೊಸ ವರ್ಷದ ಮೊದಲ ದಿನವೇ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (Pradhan Mantri Kisan Samman  Nidhi Scheme)ಕಂತಿನ‌ ಹಣ 2022ರ ಜನವರಿ 1ರಂದು ಬಿಡುಗಡೆಯಾಗಲಿದೆ. ಹೊಸ ವರ್ಷದ ದಿನದಂದು 10 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಗುವುದು. ಇದುವರೆಗೂ 1.6 ಲಕ್ಷ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೀಗ ಜನವರಿ 1ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು.

ಈ ನಿಟ್ಟಿನಲ್ಲಿ ಫಲಾನುಭವಿ ರೈತರಿಗೆ ಸಂದೇಶದ ಮೂಲಕ ಮಾಹಿತಿ ನೀಡಲಾಗಿದೆ. ಸಂದೇಶದ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಂತುಗಳನ್ನು 2022ರ ಜನವರಿ 1ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ದೇಶಾದ್ಯಂತ ಕೋಟ್ಯಂತರ ರೈತರಿಗೆ ವಾರ್ಷಿಕ 6 ಸಾವಿರ ರೂ. ಹಣವನ್ನು ಆನ್‌ಲೈನ್‌ನಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.

ಜನವರಿ 1 ರಂದು ಪ್ರಧಾನಿ ಮೋದಿ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ರೈತರಿಗೆ ಕಳುಹಿಸಿದ ಸಂದೇಶದಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 1, 2022 ರಂದು ಮಧ್ಯಾಹ್ನ 12 ಗಂಟೆಗೆ ಪಿಎಂ ಕಿಸಾನ್ ಯೋಜನೆಯಡಿ 10 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡುತ್ತಾರೆ. ಈ ದಿನ ಪ್ರಧಾನಿ ಮೋದಿ ಅವರು ರೈತ ಉತ್ಪಾದಕ ಸಂಸ್ಥೆಗಳಿಗೆ ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ರೈತರು pmindiawebcast.nic.in ಅಥವಾ ದೂರದರ್ಶನದ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದು.

ಭಾರತದ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ವರ್ಗಾಯಿಸಲಾಗುವುದು. PM-KISAN ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಇದುವರೆಗೆ ಈ ಯೋಜನೆಯಡಿ 1.6 ಲಕ್ಷ ಕೋಟಿ ರೂ. ಹಣವನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: PM Kisan Samman Nidhi: ಪಿಎಂ ಕಿಸಾನ್ ನಿಧಿಯಲ್ಲಿ 22,000 ಕೋಟಿ ರೂ. ಮುಂದಿನ ತಿಂಗಳು ಬಿಡುಗಡೆ

ಪಿಎಂ ಕಿಸಾನ್​ ಸಮ್ಮಾನ್​ ಯೋಜನೆಯಡಿ ಕರ್ನಾಟಕದ ರೈತರಿಗೆ 1023 ಕೋಟಿ ರೂ. ಧನಸಹಾಯ: ಧನ್ಯವಾದ ಸಲ್ಲಿಸಿದ ಸಿಎಂ ಬೊಮ್ಮಾಯಿ

Published On - 6:17 pm, Wed, 29 December 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್