AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ

ಅಂಬಾನಿ ಕುಟುಂಬವು ಲಂಡನ್​ಗೆ ಭಾಗಶಃ ವಾಸ್ತವ್ಯ ಬದಲಿಸುವ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್ (RIL) ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ
ಮುಕೇಶ್ ಅಂಬಾನಿ ಮತ್ತು ಲಂಡನ್​ನ ಸ್ಟೋಕ್​ ಪಾರ್ಕ್
TV9 Web
| Edited By: |

Updated on: Nov 05, 2021 | 10:56 PM

Share

ಮುಂಬೈ: ಅಂಬಾನಿ ಕುಟುಂಬವು ಲಂಡನ್​ಗೆ ಭಾಗಶಃ ವಾಸ್ತವ್ಯ ಬದಲಿಸುವ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್ (RIL) ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಲಂಡನ್​ನ ಸ್ಟೋಕ್ ಪಾರ್ಕ್​ಗೆ ಅಂಬಾನಿ ಕುಟುಂಬ ಭಾಗಶಃ ವಾಸ್ತವ್ಯ ಬದಲಿಸಲು ಆಲೋಚಿಸುತ್ತಿದೆ ಎಂದು ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿಯು ಕೆಲ ಅನಗತ್ಯ ಮತ್ತು ಅನಪೇಕ್ಷಿತ ಆಧಾರ ರಹಿತ ಊಹಾಪೋಹಗಳಿಗೆ ಕಾರಣವಾಗಿದೆ ಎಂದು ರಿಲಯನ್ಸ್​ ಹೇಳಿದೆ.

ರಿಲಯನ್ಸ್​ನ ಅಧ್ಯಕ್ಷರು ಅಥವಾ ಅವರ ಕುಟುಂಬವು ಲಂಡನ್​ ಅಥವಾ ವಿಶ್ವದ ಬೇರೆ ಯಾವುದೇ ನಗರಕ್ಕೆ ವಾಸ್ತವ್ಯ ಬದಲಿಸುವ ಆಲೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಿಲಯನ್ಸ್​ ಇಂಡಸ್ಟ್ರೀಸ್​ನ ಭಾಗವಾಗಿರುವ ಆರ್​ಐಐಎಚ್​ಎಲ್ ಲಂಡನ್​ನ ಸ್ಟೋಕ್ ಪಾರ್ಕ್ ಎಸ್ಟೇಟ್​ ಅನ್ನು ಈಚೆಗೆ ಖರೀದಿಸಿತ್ತು. ಪರಂಪರೆಯ ಮೌಲ್ಯ ಹೊಂದಿರುವ ಈ ಆಸ್ತಿಯನ್ನು ಉತ್ತಮ ಗಾಲ್ಫ್​ ಮತ್ತು ಕ್ರೀಡಾ ರೆಸಾರ್ಟ್​ ಆಗಿ ಅಭಿವೃದ್ಧಿಪಡಿಸುವುದು ಕಂಪನಿಯ ಉದ್ದೇಶವಾಗಿದೆ. ಪ್ಲಾನಿಂಗ್ ವೇಳೆ ಸ್ಥಳೀಯ ನಿಯಮಗಳನ್ನು ಸಂಪೂರ್ಣವಾಗಿ ಅನುಸರಿಸಲಾಗುವುದು ಎಂದು ಭರವಸೆ ನೀಡಿದೆ.

ಈ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆದುಕೊಂಡ ನಂತರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಗ್ರಾಹಕ ವ್ಯವಹಾರವೊಂದು ರಿಲಯನ್ಸ್​ ಸಮೂಹದ ಭಾಗವಾದಂತೆ ಆಗಿದೆ. ಭಾರತವು ಹೆಸರುವಾಸಿಯಾಗಿರುವ ಆತಿಥ್ಯ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ಈ ಪ್ರಯತ್ನ ನೆರವಾಗಲಿದೆ ಎಂದು ಆರ್​ಐಎಸ್ ಹೇಳಿದೆ.

ಇದನ್ನೂ ಓದಿ: Channapatna toys: ಅಂಬಾನಿಯ ರಿಲಯನ್ಸ್ ಸಹಭಾಗಿ ಸಂಸ್ಥೆಯ ನೆರವು, ಚನ್ನಪಟ್ಟಣದ ಬೊಂಬೆಗಳು ಸಿಂಗಾಪೂರಕ್ಕೆ ರಫ್ತು ಇದನ್ನೂ ಓದಿ: Reliance Industries: ರಿಲಯನ್ಸ್​ ಇಂಡಸ್ಟ್ರೀಸ್​ಗೆ ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ ದಾಖಲೆಯ 15,479 ಕೋಟಿ ರೂ. ಲಾಭ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ