4ಜಿ ಡೌನ್‌ಲೋಡ್ ವೇಗದಲ್ಲಿ ಮತ್ತೆ ಜಿಯೋ ಸಂಸ್ಥೆಯದ್ದೇ ಮೇಲುಗೈ, ಟ್ರಾಯ್ ಸರಾಸರಿ ವೇಗದ ಲೆಕ್ಕಾಚಾರ ಹೇಗೆ?

ಟ್ರಾಯ್ ಪ್ರಕಾರ, ವೊಡಾಫೋನ್ ಐಡಿಯಾ ಮಾರ್ಚ್ ತಿಂಗಳಲ್ಲಿ 8.2 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿದ್ದು, ಈ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ. 7.3 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ನಂತರದ ಸ್ಥಾನದಲ್ಲಿದ್ದರೆ, ಭಾರ್ತಿ ಏರ್‌ಟೆಲ್ 6.1 ಹಾಗೂ ಬಿಎಸ್‌ಎನ್‌ಎಲ್ 5.1 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ.

4ಜಿ ಡೌನ್‌ಲೋಡ್ ವೇಗದಲ್ಲಿ ಮತ್ತೆ ಜಿಯೋ ಸಂಸ್ಥೆಯದ್ದೇ ಮೇಲುಗೈ, ಟ್ರಾಯ್  ಸರಾಸರಿ ವೇಗದ ಲೆಕ್ಕಾಚಾರ ಹೇಗೆ?
reliance Jio tops 4G download speed chart according to TRAI data for March 2022
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 21, 2022 | 9:34 PM

ನವದೆಹಲಿ: ಪ್ರತಿ ಸೆಕೆಂಡ್‌ಗೆ ಸರಾಸರಿ 21.1 ಮೆಗಾಬೈಟ್ ಡೌನ್‌ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿನ ಅಧಿಕ ಸರಾಸರಿ ಡೇಟಾ ಡೌನ್‌ಲೋಡ್‌ ವೇಗದಲ್ಲಿ ಮಾರ್ಚ್ ತಿಂಗಳಲ್ಲಿ ಕೂಡ ರಿಲಯನ್ಸ್ ಜಿಯೋ ಮುಂಚೂಣಿಯಲ್ಲಿದೆ (reliance jio 4G download speed) ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್ –TRAI) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ. ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗ ಫೆಬ್ರವರಿಗೆ ಹೋಲಿಸಿದರೆ ಶೇ 2.5ರಷ್ಟು ಹೆಚ್ಚಳ ಕಂಡಿದೆ. ಫೆಬ್ರವರಿಯಲ್ಲಿ ಜಿಯೋ ಡೌನ್‌ಲೋಡ್ ವೇಗ 20.6 ಎಂಬಿಪಿಎಸ್ ಇತ್ತು. ಅದು ಮಾರ್ಚ್‌ನಲ್ಲಿ 21.21 ಎಂಬಿಪಿಎಸ್ ವೇಗಕ್ಕೆ ಏರಿಕೆಯಾಗಿದೆ.

ಟ್ರಾಯ್ ಸರಾಸರಿ ವೇಗದ ಲೆಕ್ಕಾಚಾರ ಹೇಗೆ? ವೊಡಾಫೋನ್ ಐಡಿಯಾ (ವಿಐಎಲ್) ಮತ್ತು ಭಾರ್ತಿ ಏರ್‌ಟೆಲ್ ಕ್ರಮವಾಗಿ ಪ್ರತಿ ಸೆಕೆಂಡ್‌ಗೆ 17.9 ಮೆಗಾಬೈಟ್ (ಎಂಬಿಪಿಎಸ್) ಮತ್ತು 13.7 ಎಂಬಿಪಿಎಸ್ ಡೌನ್‌ಲೋಡ್ ವೇಗಗಳೊಂದಿಗೆ ಅಲ್ಪ ಇಳಿಕೆ ಕಂಡಿವೆ. ಆದರೆ ಕಳೆದ ಆರು ತಿಂಗಳಲ್ಲಿ ಎರಡೂ ಕಂಪೆನಿಗಳು ಜಿಯೋ ಡೌನ್‌ಲೋಡ್ ವೇಗದೊಂದಿಗೆ ಇರುವ ಅಂತರವನ್ನು ಕಡಿಮೆ ಮಾಡಿವೆ. ಬಿಎಸ್‌ಎನ್‌ಎಲ್ ನೆಟ್‌ವರ್ಕ್ 6.1 ಎಂಬಿಪಿಎಸ್ ಡೌನ್‌ಲೋಡ್ ವೇಗ ಹೊಂದಿದೆ ಎಂದು ವರದಿ ತಿಳಿಸಿದೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.

ಟ್ರಾಯ್ ಪ್ರಕಾರ, ವೊಡಾಫೋನ್ ಐಡಿಯಾ ಮಾರ್ಚ್ ತಿಂಗಳಲ್ಲಿ 8.2 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿದ್ದು, ಈ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ. 7.3 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ನಂತರದ ಸ್ಥಾನದಲ್ಲಿದ್ದರೆ, ಭಾರ್ತಿ ಏರ್‌ಟೆಲ್ 6.1 ಹಾಗೂ ಬಿಎಸ್‌ಎನ್‌ಎಲ್ 5.1 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

Also Read: ಸ್ನಾತಕೋತ್ತರ ಪದವಿಗೆ ರಿಲಯನ್ಸ್​ ಜಿಯೋ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಾವಕಾಶ ಆರಂಭ, ಉದಾರ ವಿದ್ಯಾರ್ಥಿವೇತನ ನೆರವು

Also Read: Jio 4G in MM Hills: ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಇನ್ಮುಂದೆ ಜಿಯೋ 4ಜಿ ಸೇವೆ ನಿತ್ಯೋತ್ಸವ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ