SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ

| Updated By: ಸುಷ್ಮಾ ಚಕ್ರೆ

Updated on: Oct 18, 2021 | 6:25 PM

SBI Online Banking: ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ.

SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ
ಎಸ್​ಬಿಐ
Follow us on

ನವದೆಹಲಿ: ತನ್ನ ಗ್ರಾಹಕರ ಅಗತ್ಯತೆಗಳು ಮತ್ತು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 15 ವಿವಿಧ ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗ್ರಾಹಕರು ತಮಗೆ ಅನುಕೂಲಕರವಾದ ಭಾಷೆಗಳಲ್ಲಿ ಆನ್​ಲೈನ್ ಬ್ಯಾಂಕಿಂಗ್ ಸೇವೆಯನ್ನು ಪಡೆಯಬಹುದು.

ಸ್ಟೇಟ್ ಬ್ಯಾಂಕ್ ಟ್ವೀಟ್​ನಲ್ಲಿ ಈ ಮಾಹಿತಿಯನ್ನು ನೀಡಿದೆ. ಎಸ್​ಬಿಐ ಗ್ರಾಹಕರು www.onlinesbi.com ನಲ್ಲಿ 15 ಭಾಷೆಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಪಡೆಯಬಹುದು. ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಎಸ್​ಬಿಐ ಬ್ಯಾಂಕಿಂಗ್ ಸೇವೆ ಲಭ್ಯವಿದೆ. ಗ್ರಾಹಕರು ತಮಗೆ ಅನುಕೂಲವಾಗುವ ಭಾಷೆಯ ಮೇಲೆ ಕ್ಲಿಕ್ ಮಾಡಿದ ನಂತರ, ಗ್ರಾಹಕರು ಅದಕ್ಕೆ ಅನುಗುಣವಾಗಿ ಸಂಪೂರ್ಣ ವಿವರಗಳನ್ನು ಪಡೆಯಲು ಮತ್ತು ಆ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ. ಮೆಸೇಜ್​ನಲ್ಲಿ ಬರುವ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡುವ ಮೊದಲು ಹಲವು ಬಾರಿ ಯೋಚಿಸಿ ಎಂದು ಎಸ್​ಬಿಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಬ್ಯಾಂಕಿನಿಂದ ನೀವು ಉಡುಗೊರೆಯನ್ನು ಸ್ವೀಕರಿಸಿದ್ದೀರಿ ಎಂದು ಸಂದೇಶದಲ್ಲಿ ಬರೆಯಬಹುದು. ನಿಮಗೆ ಅಂತಹ ಸಂದೇಶ ಬಂದರೆ, ಅದನ್ನು ಓಪನ್ ಮಾಡಬೇಡಿ, ಹಾಗೇ ಅದರಲ್ಲಿ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ. ಇದರಿಂದ ನಿಮ್ಮ ಅಕೌಂಟ್​ನಲ್ಲಿರುವ ಹಣವನ್ನೆಲ್ಲ ಕಳೆದುಕೊಳ್ಳಬೇಕಾಗಬಹುದು ಎಂದು ಎಸ್​ಬಿಐ ಹೇಳಿದೆ.

ಇದನ್ನೂ ಓದಿ: SBI Annuity Deposit: ಎಸ್​ಬಿಐನ ಈ ಸ್ಕೀಮ್​ನಲ್ಲಿ ಹಣ ಹೂಡಿದರೆ ತಿಂಗಳು ತಿಂಗಳು ಆದಾಯ ಬರುತ್ತೆ

SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು