Toyota cars: 2022ರ ಜನವರಿಯಿಂದ ಟೊಯೊಟಾದ ಎಲ್ಲ ಕಾರುಗಳ ಬೆಲೆ ಏರಿಕೆ

2022ರ ಜನವರಿಯಿಂದ ಟೊಯೊಟಾ ಕಿರ್ಲೋಸ್ಕರ್ ಕಾರುಗಳ ಬೆಲೆಯಲ್ಲಿ ಏರಿಕೆ ಆಗಲಿದೆ. ಈ ಬಗ್ಗೆ ಬುಧವಾರದಂದು ಘೋಷಣೆ ಮಾಡಲಾಗಿದೆ.

Toyota cars: 2022ರ ಜನವರಿಯಿಂದ ಟೊಯೊಟಾದ ಎಲ್ಲ ಕಾರುಗಳ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 15, 2021 | 12:32 PM

ಇನ್‌ಪುಟ್ ವೆಚ್ಚದಲ್ಲಿನ ಏರಿಕೆಯ ಪರಿಣಾಮವನ್ನು ಸರಿದೂಗಿಸಲು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಜನವರಿಯಿಂದ ತನ್ನ ಎಲ್ಲ ಉತ್ಪನ್ನಗಳ ಪೋರ್ಟ್‌ಫೋಲಿಯೊದಲ್ಲಿ ಬೆಲೆಗಳನ್ನು ಹೆಚ್ಚಿಸುವುದಾಗಿ ಬುಧವಾರ ಹೇಳಿದೆ. ಕಂಪೆನಿಯು ದೇಶೀಯ ಮಾರುಕಟ್ಟೆಯಲ್ಲಿ ಗ್ಲಾಂಜಾ (Glanza), ಅರ್ಬನ್ ಕ್ರೂಸರ್ (Urban Cruiser), ಇನ್ನೋವಾ ಕ್ರಿಸ್ಟಾ (Innova Crysta) ಮತ್ತು ಫಾರ್ಚೂನರ್ (Fortuner) ಸೇರಿದಂತೆ ಹಲವಾರು ಮಾದರಿಗಳನ್ನು ಮಾರಾಟ ಮಾಡುತ್ತದೆ.

“ಕಚ್ಚಾ ಸಾಮಗ್ರಿಗಳು ಸೇರಿದಂತೆ ಇನ್‌ಪುಟ್ ವೆಚ್ಚದಲ್ಲಿ ನಿರಂತರ ಹೆಚ್ಚಳದ ಹಿನ್ನೆಲೆಯಲ್ಲಿ ಬೆಲೆ ಮರುಹೊಂದಿಕೆ ಅಗತ್ಯವಾಗಿದೆ. ವೆಚ್ಚದ ಹೆಚ್ಚಳದ ಪರಿಣಾಮ ನಮ್ಮ ಗ್ರಾಹಕರ ಮೇಲೆ ತುಂಬ ಕನಿಷ್ಠ ಪ್ರಮಾಣದ ಪರಿಣಾಮ ಬೀರುತ್ತದೆ ಎಂದು ಖಚಿತಪಡಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ,” ಎಂದು TKM ಹೇಳಿಕೆಯಲ್ಲಿ ತಿಳಿಸಿದೆ.

ಈಗಾಗಲೇ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಹೋಂಡಾ ಕಾರ್ಸ್ ಸೇರಿದಂತೆ ವಿವಿಧ ಕಂಪೆನಿಗಳು ಮುಂದಿನ ತಿಂಗಳಿನಿಂದ (2022ರ ಜನವರಿ) ಬೆಲೆಗಳನ್ನು ಹೆಚ್ಚಿಸುವುದಾಗಿ ತಿಳಿಸಿವೆ. ಉಕ್ಕು, ತಾಮ್ರ, ಅಲ್ಯೂಮಿನಿಯಂ ಮತ್ತು ಅಮೂಲ್ಯ ಲೋಹಗಳ ವಿವಿಧ ಅಗತ್ಯ ವಸ್ತುಗಳ ಬೆಲೆ ಕಳೆದ ಒಂದು ವರ್ಷದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಆ ಹಿನ್ನೆಲೆಯಲ್ಲಿ ಈ ನಿರ್ಧಾರ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್​​ನಿಂದ 2022ರ ಜನವರಿಯಿಂದ ವಾಣಿಜ್ಯ ವಾಹನಗಳ ಬೆಲೆ ಏರಿಕೆ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ