AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರ್ಯಾಶ್ ಟೆಸ್ಟಿಂಗ್: ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಸ್ಕೋಡಾ ಕುಶಾಕ್ ಮತ್ತು ಫೋಕ್ಸ್ ವ್ಯಾಗನ್ ಟೈಗುನ್!

ದೇಶಿಯ ಮಾರುಕಟ್ಟೆ 2.0 ಇಂಡಿಯಾ ಯೋಜನೆಯ ಅಡಿ ಹೊಸ ಕಾರು ಮಾದರಿಗಳ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಫೋಕ್ಸ್ ವ್ಯಾಗನ್(Volkswagen) ಮತ್ತು ಸ್ಕೋಡಾ(Skoda) ಕಂಪನಿಗಳು ಇದೀಗ ಕಾರುಗಳ ಸುರಕ್ಷತೆಯಲ್ಲೂ ಗ್ರಾಹಕರಿಂದ ಮೆಚ್ಚುಗೆಗೆ ಕಾರಣವಾಗಿವೆ.

ಕ್ರ್ಯಾಶ್ ಟೆಸ್ಟಿಂಗ್: ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಸ್ಕೋಡಾ ಕುಶಾಕ್ ಮತ್ತು ಫೋಕ್ಸ್ ವ್ಯಾಗನ್ ಟೈಗುನ್!
Volkswagen Taigun and Skoda Kushaq Achieve 5 Stars in Global NCAP’s
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 15, 2022 | 1:41 PM

Share

ಹೌದು, ಫೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು ತಮ್ಮ ಹೊಸ ಕುಶಾಕ್(Kushaq) ಮತ್ತು ಟೈಗುನ್(Taigun) ಪ್ರೀಮಿಯಂ ಕಂಪ್ಯಾಕ್ಟ್ ಎಸ್ ಯುವಿ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಎರಡು ಹೊಸ ಕಾರು ಮಾದರಿಗಳು ಇದೀಗ ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ.

ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 71.64 ಅಂಕಗಳೊಂದಿಗೆ ಹೊಸ ಕುಶಾಕ್ ಮತ್ತು ಟೈಗುನ್ ಎರಡು ಕಾರುಗಳು ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಪ್ರೀಮಿಯಂ ಫೀಚರ್ಸ್ ಜೊತೆಗೆ ಪ್ರಯಾಣಿಕರ ಸುರಕ್ಷತೆಯಲ್ಲೂ ಹೆಚ್ಚು ಸುರಕ್ಷತೆಯನ್ನು ಖಾತ್ರಿಪಡಿಸಿವೆ.

ಎಂಕ್ಯೂಬಿ-ಎo ಇನ್ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಕುಶಾಕ್ ಮತ್ತು ಟೈಗುನ್ ಕಾರು ಮಾದರಿಗಳು ಹೆಚ್ಚಿನ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಶೇ.90 ರಷ್ಟು ಸ್ಥಳೀಯ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಂಡಿವೆ. ಜೊತೆಗೆ ಎರಡು ಕಾರು ಮಾದರಿಗಳಲ್ಲೂ ಹೆಚ್ಚಿನ ಮಟ್ಟದ ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಲಾಗಿದ್ದು, ಅಪಘಾತದ ವೇಳೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸುತ್ತವೆ.

ಗ್ಲೋಬಲ್ ಎನ್ ಸಿಎಪಿ ಸಂಸ್ಥೆಯು ಭಾರತದಲ್ಲಿ ಉತ್ಪಾದನೆಯಾಗುವ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ #SAFERCARSFORINDIA ಅಭಿಯಾನ ಕೈಗೊಂಡಿದ್ದು, ಹೊಸ ಅಭಿಯಾನದ ನಂತರ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಣೆ ಕಂಡಿದೆ.

ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ಕಾರು ಮಾದರಿಯಾಗಿ ಹೊರಹೊಮ್ಮಲು ಕನಿಷ್ಠ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವ ಅವಶ್ಯಕತೆಯಿದ್ದು, 3ಕ್ಕಿಂತ ಕಡಿಮೆ ರೇಟಿಂಗ್ಸ್ ಪಡೆದುಕೊಳ್ಳುವ ಕಾರುಗಳನ್ನು ಕಳಪೆ ಕಾರುಗಳೆಂದು ಕರೆಯಲಾಗುತ್ತದೆ. ಇದೀಗ ಕುಶಾಕ್ ಮತ್ತು ಟೈಗುನ್ ಕಾರುಗಳು ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್ ಗಳೊಂದಿಗೆ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿವೆ.

ಇದನ್ನು ಓದಿ: ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಸಿಎನ್‌ಜಿ ಬಿಡುಗಡೆ!

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಹಾಗೆಯೇ ಹೊಸ ಟೈಗುನ್ ಕಾರಿನಲ್ಲಿ ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳಿದ್ದು, ಮಲ್ಟಿ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವಾರು ಸುಧಾರಿತ ಸೌಲಭ್ಯಗಳಿವೆ.

ಕುಶಾಕ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವ್, ಆ್ಯಂಬಿನೇಷನ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಎನ್ನುವ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದ್ದು, ದೆಹಲಿ ಆರಂಭಿಕವಾಗಿ ರೂ. 11.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಹಾಗೆಯೇ ಹೊಸ ಟೈಗುನ್ ಕಾರು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕವಾಗಿ ರೂ. 11.56 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.71 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಎರಡು ಕಾರು ಮಾದರಿಗಳಲ್ಲೂ ಪೋಕ್ಸ್ ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿವೆ.

ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿರಲಿದೆ.

Published On - 1:41 pm, Sat, 15 October 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್