AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ಬಿಪಿ, ಮಧುಮೇಹವನ್ನು ನಿಯಂತ್ರಿಸಲು ಈ ಯೋಗಾಸನಗಳನ್ನು ಟ್ರೈ ಮಾಡಬಹುದು

ಕೆಲವು ಯೋಗಾಸನಗಳ ನಿಯಮಿತ ಅಭ್ಯಾಸವು ಹೊಟ್ಟೆಯನ್ನು ಹಿಸುಕಲು ಮತ್ತು ಸಂಕುಚಿತಗೊಳಿಸಲು ಸಹಾಯ ಮಾಡುತ್ತದೆ. ಮೇದೋಜ್ಜೀರಕ ಗ್ರಂಥಿ ಅಥವಾ ಹಾರ್ಮೋನ್ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ ಎಂದು ಸಂಶೋಧನೆ ತಿಳಿಸಿದೆ.

International Yoga Day 2022: ಬಿಪಿ, ಮಧುಮೇಹವನ್ನು ನಿಯಂತ್ರಿಸಲು ಈ ಯೋಗಾಸನಗಳನ್ನು ಟ್ರೈ ಮಾಡಬಹುದು
ಸಾಂದರ್ಭಿಕ ಚಿತ್ರImage Credit source: Indian Express
TV9 Web
| Edited By: |

Updated on:Jun 21, 2022 | 7:48 AM

Share

ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ಕೊಲೆಸ್ಟ್ರಾಲ್ (Cholesterol) ಮತ್ತು ಬಿಪಿ ಸುಧಾರಣೆಗೆ ಕಾರಣವಾಗಬಹುದು ಎಂದು ಅಧ್ಯಯನಗಳು ತಿಳಿಸಿವೆ. ಯೋಗಾಸನಗಳ ಸಹಾಯದಿಂದ ಮೇದೋಜ್ಜೀರಕ ಗ್ರಂಥಿಯನ್ನು ಉತ್ತೇಜಿಸುವುದು ಇನ್ಸುಲಿನ್ ಉತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ಕೆಲವು ಆಸನಗಳು ರಕ್ತಪರಿಚಲನೆ ಮತ್ತು ನರಮಂಡಲವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಕೆಲವು ಯೋಗಾಸನಗಳ ನಿಯಮಿತ ಅಭ್ಯಾಸವು ಹೊಟ್ಟೆಯನ್ನು ಹಿಸುಕಲು ಮತ್ತು ಸಂಕುಚಿತಗೊಳಿಸಲು ಸಹಾಯ ಮಾಡುತ್ತದೆ. ಮೇದೋಜ್ಜೀರಕ ಗ್ರಂಥಿ ಅಥವಾ ಹಾರ್ಮೋನ್ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ ಎಂದು ಸಂಶೋಧನೆ ತಿಳಿಸಿದೆ.

ರಕ್ತದೊತ್ತಡ ನಿಯಂತ್ರಣಕ್ಕೆ ಯೋಗ ಮದ್ದು

ಯೋಗವು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೂರ್ಯ ನಮಸ್ಕಾರವನ್ನು ಒಳಗೊಂಡಿರುವಂತಹ  ಯೋಗಾಭ್ಯಾಸಗಳು ಶ್ರಮದಾಯಕ ವ್ಯಾಯಾಮಗಳಾಗಿ ಪರಿಗಣಿಸಲ್ಪಡುತ್ತವೆ. ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: WhatsApp: ವಾಟ್ಸ್​ಆ್ಯಪ್ ರಿಯಾಕ್ಷನ್ಸ್ ಫೀಚರ್​​ನಲ್ಲಿ ಹೊಸ ಆಯ್ಕೆ: ಬಳಕೆದಾರರಿಗೆ ಕಾದಿದೆ ಮತ್ತಷ್ಟು ಅಚ್ಚರಿ

ಬಿಪಿ ನಿಯಂತ್ರಣಕ್ಕೆ ಯೋಗಾಸನಗಳು 

ಯೋಗಾಸನಗಳು ಸಾಮಾನ್ಯವಾಗಿ ದೇಹದ ಚಲನೆಯನ್ನು ಸಿಂಕ್ರೊನೈಸ್ ಮಾಡುವುದರೊಂದಿಗೆ ಪ್ರಜ್ಞಾಪೂರ್ವಕವಾಗಿ ಉಸಿರಾಡುವುದನ್ನು ಒಳಗೊಂಡಿರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರಾಥಮಿಕವಾಗಿ ಒತ್ತಡವನ್ನು ನಿವಾರಿಸುವ ಮೂಲಕ ಶಿಶು ಆಸನ, ಪಶ್ಚಿಮೋತ್ತನಾಸನ, ವಿರಾಸನ, ಬಧಕೋನಾಸನ ಮತ್ತು ಅರ್ಧ ಮತ್ಸ್ಯೇಂದ್ರಾಸನ ಇವುಗಳು ಹೆಚ್ಚು ಪ್ರಯೋಜನಕಾರಿಯಾಗಿವೆ. ವಿಶೇಷವಾಗಿ ನಿರೋಧಕ ಶಕ್ತಿ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ.

ಮಧುಮೇಹಿ ರೋಗಿಗಳಿಗೆ ಯೋಗ ಹೇಗೆ ಪೂರಕ

ಆಸನಗಳ ಹೊರತಾಗಿ, ಕಪಾಲಭಾತಿ ಮತ್ತು ಅನುಲೋಮ್ ವಿನುಲೋಮ್‌ನಂತಹ ಉಸಿರಾಟದ ವ್ಯಾಯಾಮಗಳನ್ನು ಅಭ್ಯಾಸ ಮಾಡುವುದು ಅತ್ಯಂತ ಪ್ರಯೋಜನಕಾರಿಯಾಗಿದೆ. ಅನುಲೋಮ್ ವಿನುಲೋಮ್ ಒಂದು ಪರ್ಯಾಯ ಉಸಿರಾಟದ ಅಂಶ ವಾಗಿದ್ದು ಅದು ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುವುದರ ಜೊತೆಗೆ ಹೈಪರ್ಗ್ಲೈಸೀಮಿಯಾ ಮತ್ತು ಅಧಿಕ ರಕ್ತದೊತ್ತಡಕ್ಕೂ ಸಹಕಾರಿ. ಕಪಾಲಭಾತಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಮತ್ತು ನೌಲಿ ಕ್ರಿಯಾದೊಂದಿಗೆ ಸಂಯೋಜಿಸಿದಾಗ, ಇದು ನಿಜವಾಗಿಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಫೈಬರ್, ದ್ವಿದಳ ಧಾನ್ಯಗಳು, ಧಾನ್ಯಗಳು ಮತ್ತು ತರಕಾರಿಗಳಂತಹ ಸಾತ್ವಿಕ ಆಹಾರವು ನಮ್ಮ ದೇಹಕ್ಕೆ ಪೂರಕವಾಗಿದೆ.

ಇನ್ನಷ್ಟು ಯೋಗ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:00 am, Tue, 21 June 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ