ನವದೆಹಲಿ: ಇಂದು ವಿಶ್ವಾದ್ಯಂತ ಯೋಗ ದಿನವನ್ನು (International Yoga Day) ಆಚರಿಸಲಾಗುತ್ತಿದೆ. ಯೋಗವು ಮಾನವೀಯತೆಗೆ ಭಾರತ ನೀಡಿದ ಕೊಡುಗೆಯಾಗಿದೆ. ಯೋಗ ಆರೋಗ್ಯದ ಸಮಗ್ರ ವಿಧಾನವಾಗಿದೆ. ಯೋಗಾಸನ ಮಾಡುವುದರಿಂದ ಮನಸ್ಸು, ದೇಹ ಮತ್ತು ಆತ್ಮವನ್ನು ಸಮತೋಲನಗೊಳಿಸಬಹುದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ram Nath Kovind) ಹೇಳಿದ್ದಾರೆ. ಇಂದು ಅಂತಾರಾಷ್ಟ್ರೀಯ ಯೋಗ ದಿನದಂದು ಜನರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೆಹಲಿಯಲ್ಲಿ ಯೋಗಾಸನ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದ್ದಾರೆ.
ಪ್ರತಿಯೊಬ್ಬರೂ ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು. ಎಲ್ಲರೂ ಯೋಗದ ಪ್ರಯೋಜನಗಳನ್ನು ಅನುಭವಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮನವಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರತಿ ವರ್ಷ ಜೂನ್ 21ರಂದು ಆಚರಿಸಲಾಗುತ್ತದೆ.
ಇದನ್ನೂ ಓದಿ: PM Modi Speech: ಯೋಗ ಶಾಂತಿ ತಂದುಕೊಡುತ್ತದೆ; ಶಾಂತಿ ವ್ಯಕ್ತಿಗೆ ಸೀಮಿತವಾಗಿಲ್ಲ, ಇಡೀ ಜಗತ್ತಿಗೆ ಅನ್ವಯ ಆಗುತ್ತೆ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು! ಯೋಗ ನಮ್ಮ ಪ್ರಾಚೀನ ಭಾರತೀಯ ಪರಂಪರೆಯ ಭಾಗವಾಗಿದೆ. ಇದು ಮಾನವೀಯತೆಗೆ ಭಾರತದ ಕೊಡುಗೆಯಾಗಿದೆ. ಯೋಗ ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ. ಇದು ನಮ್ಮ ಮನಸ್ಸು, ದೇಹ ಮತ್ತು ಆತ್ಮವನ್ನು ಸಮತೋಲನಗೊಳಿಸುತ್ತದೆ. ಯೋಗವನ್ನು ನಿಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಿ ಮತ್ತು ಅದರ ಪ್ರಯೋಜನಗಳನ್ನು ಅನುಭವಿಸುವಂತೆ ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Greetings on #InternationalDayofYoga! Yoga is a part of our ancient Indian heritage. India’s gift to humanity, it is a holistic approach to health and well-being, balancing our mind, body and soul. I urge everyone to make Yoga a part of your daily life & experience its benefits. pic.twitter.com/ih8qFUEeVs
— President of India (@rashtrapatibhvn) June 21, 2022
ಕರ್ನಾಟಕದ ಸಾಂಸ್ಕೃತಿಕ ನಗರವಾದ ಮೈಸೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಪ್ರದರ್ಶಿಸಿದ್ದಾರೆ. ಯೋಗವು ಮನೆ-ಮನೆಯಿಂದ ಹೊರಬಂದು ಪ್ರಪಂಚದಾದ್ಯಂತ ಹರಡಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಆಧ್ಯಾತ್ಮಿಕ ಸಾಕ್ಷಾತ್ಕಾರದ ಚಿತ್ರಣವಾಗಿದೆ. ಯೋಗವು ಈಗ ಜಾಗತಿಕ ಹಬ್ಬವಾಗಿದೆ. ಯೋಗ ಯಾವುದೇ ವ್ಯಕ್ತಿಗೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ ಸಂಬಂಧಿಸಿದೆ. ಆದ್ದರಿಂದ, ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಾನವೀಯತೆಗಾಗಿ ಯೋಗ ಎಂಬ ಪರಿಕಲ್ಪನೆಯಡಿ ಆಚರಿಸಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ