International Yoga Day 2022 Live: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ, ಕರ್ನಾಟಕದ ವಿವಿಧೆಡೆ ವಿಶೇಷ ಕಾರ್ಯಕ್ರಮ

TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 21, 2022 | 8:32 AM

PM Modi In Mysore Live Updates: ವಿಶ್ವ ಯೋಗದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

International Yoga Day 2022 Live: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ, ಕರ್ನಾಟಕದ ವಿವಿಧೆಡೆ ವಿಶೇಷ ಕಾರ್ಯಕ್ರಮ
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ

LIVE NEWS & UPDATES

  • 21 Jun 2022 08:32 AM (IST)

    ನಂದಿ ಭೋಗಾ ನಂದೀಶ್ವರ ದೇಗುಲದಲ್ಲಿ ಯೋಗದಿನ

    ಚಿಕ್ಕಬಳ್ಳಾಪುರ: ವಿಶ್ವ ಯೋಗದಿನದ ಪ್ರಯುಕ್ತ ನಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಯೋಗ ದಿನಾಚರಣೆ ನಡೆಯಿತು. ಆಯುಷ್ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಸೇರಿದಂತೆ ನೂರಾರು ಯೋಗಪಟುಗಳು ಭಾಗವಹಿಸಿದ್ದರು.

    CKB-Yoga-Celebration

    ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದ ಭೋಗಾ ನಂದೀಶ್ವರ ದೇಗುಲದಲ್ಲಿ ಯೋಗ ದಿನ

  • 21 Jun 2022 08:15 AM (IST)

    Yoga Day 2022 Live Updates: ಮೆಯೊಹಾಲ್ ಕೋರ್ಟ್ ಆವರಣದಲ್ಲಿ ಯೋಗಾಭ್ಯಾಸ

    ಬೆಂಗಳೂರು: ನಗರದ ಎಂ.ಜಿ.ರಸ್ತೆ ಮೆಯೋ ಹಾಲ್ ಕೋರ್ಟ್ ಆವರಣದಲ್ಲಿ ನ್ಯಾಯಮೂರ್ತಿಗಳು, ವಕೀಲರು ಮತ್ತು ಸಿಬ್ಬಂದಿ ಯೋಗಾಭ್ಯಾಸ ಮಾಡಿದರು. ನಮ್ಮ ಚಿತ್ತ ಕರ್ತವ್ಯದತ್ತ ಎಂಬ ಧೈಯ ವಾಕ್ಯದೊಂದಿಗೆ ಯೋಗಾಭ್ಯಾಸ ಮಾಡಲಾಯಿತು.ಪರಿವರ್ತನಾ ಯೋಗ ಫೌಂಡೇಶನ್ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.

    Yoga-MayoHall

    ಬೆಂಗಳೂರಿನ ಮೆಯೋಹಾಲ್​ನಲ್ಲಿ ವಕೀಲರು, ನ್ಯಾಯಮೂರ್ತಿಗಳಿಂದ ಯೋಗಾಭ್ಯಾಸ

  • 21 Jun 2022 08:11 AM (IST)

    Yoga Day 2022 Live Updates: ಬಿಜೆಪಿ ಕಚೇರಿಯಲ್ಲಿ ಯೋಗದಿನ: ನಟಿ ಅದಿತಿ ಪ್ರಭುದೇವ ಭಾಗಿ

    ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು, ವ್ಯಾಸ ಯೋಗ ವಿವಿ ವಿಸಿ ಡಾ.ಬಿ.ಆರ್.ರಾಮಕೃಷ್ಣ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಚಲನಚಿತ್ರ ನಟಿ ಅದಿತಿ ಪ್ರಭುದೇವ ಸಹ ಪಾಲ್ಗೊಂಡಿದ್ದರು.

  • 21 Jun 2022 08:07 AM (IST)

    Yoga Day 2022: ನಿರ್ಮಲಾನಂದನಾಥ ಸ್ವಾಮೀಜಿ ಯೋಗಾಭ್ಯಾಸ

    ಬೆಂಗಳೂರು: ವಿಶ್ವ ಯೋಗ ದಿನದ ಪ್ರಯುಕ್ತ ಬಿಜಿಎಸ್‌ ಶಿಕ್ಷಣ ಸಂಸ್ಥೆಯಿಂದ ಕೆಂಗೇರಿಯ ಬಿಜಿಎಸ್‌ ಮೈದಾನದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಬಿಜಿಎಸ್‌ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಪ್ರಕಾಶನಾಥ ಸ್ವಾಮೀಜಿ ಮತ್ತು ಶಿಕ್ಷಣ ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

  • 21 Jun 2022 07:53 AM (IST)

    PM Modi in Mysore Live Updates: ಶಾಂತಿಪಾಠದೊಂದಿಗೆ ಯೋಗಾಭ್ಯಾಸ ಮುಕ್ತಾಯ

    ದೇಶದ ವಿಕಾಸಕ್ಕಾಗಿ ತನುಮನಧನಗಳ ಅರ್ಪಣೆಯ ಸಂಕಲ್ಪದೊಂದಿಗೆ ಶಾಂತಿಪಾಠವನ್ನು ಉಚ್ಚರಿಸಲಾಯಿತು. ಸರ್ವೇ ಭವಂತು ಸುಖಿನಃ, ಸರ್ವೇ ಸಂತು ನಿರಾಮಯಃ, ಸರ್ವೇ ಭದ್ರಾಣಿ ಪಶ್ಯಂತು, ಮಾ ಕಶ್ಚಿತ್ ದುಃಖ ಭಗ್​ ಭವೇತ್. ಜನರೊಂದಿಗೆ ಬೆರೆತು ಯೋಗಾಭ್ಯಾಸ ಮಾಡಿದ ಪ್ರಧಾನಿ ನರೇಂದ್ರ ಮೋದಿ ಸಹ ಸಂಕಲ್ಪ ಮತ್ತು ಶಾಂತಿಪಾಠವನ್ನು ಉಚ್ಚರಿಸಿದರು.

  • 21 Jun 2022 07:43 AM (IST)

    PM Modi in Mysore Live Updates: ಪ್ರಾಣಾಯಾಮದೊಂದಿಗೆ ಕೊನೆಯ ಘಟ್ಟಕ್ಕೆ ಯೋಗಾಭ್ಯಾಸ

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಮಕ್ಷಮದಲ್ಲಿ ಮೈಸೂರು ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗದಿನ ಕಾರ್ಯಕ್ರಮವು ಕಪಾಲಭಾತಿ, ಪ್ರಾಣಾಯಾಮಗಳ ಅಭ್ಯಾಸದೊಂದಿಗೆ ಕೊನೆಯ ಘಟ್ಟಕ್ಕೆ ಬಂದಿದೆ. ಕಾರ್ಯಕ್ರಮದ ನಂತರ ವೇದಿಕೆಯಿಂದ ಅರಮನೆಗೆ ತೆರಳಲಿರುವ ನರೇಂದ್ರ ಮೋದಿ ಅಲ್ಲಿ ರಾಜವಂಶಸ್ಥರ ಜೊತೆಗೆ ಮೋದಿ ಉಪಹಾರ ಸೇವಿಸಲಿದ್ದಾರೆ. ಮೋದಿ ಅವರಿಗಾಗಿ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ ಸಿದ್ಧಪಡಿಸಲಾಗದೆ.

  • 21 Jun 2022 07:21 AM (IST)

    PM Modi in Mysore Live Updates: ತಾಯಿ ಚಾಮುಂಡಿಗೆ ವೃಕ್ಷಾಸನದ ಪ್ರಣಾಮ

    ತಾಡಾಸನ, ವೃಕ್ಷಾಸನ, ಅರ್ಧ ಚಕ್ರಾಸನ ಸೇರಿದಂತೆ ಹಲವು ಯೋಗಾಸನಗಳನ್ನು ಸಾವಿರಾರು ಜನರೊಂದಿಗೆ ಮೋದಿ ಅವರೂ ಮಾಡಿದರು. ವೃಕ್ಷಾಸನವು ತಾಯಿ ಚಾಮುಂಡಿಗೆ ಶರಣಾಗತಿ ಮತ್ತು ಆರಾಧನೆಯ ಭಾವವನ್ನು ಪ್ರದರ್ಶಿಸಿತು.

  • 21 Jun 2022 07:13 AM (IST)

    PM Modi in Mysore Live Updates: ಯೋಗಾಭ್ಯಾಸ ಆರಂಭ

    ಕುತ್ತಿಗೆ ಸಡಿಲಗೊಳಿಸುವ, ಕುತ್ತಿಗೆ ತಿರುಗಿಸುವ ಮತ್ತು ಇತರ ಸರಳ ಉಸಿರಾಟದ ವ್ಯಾಯಾಮಗಳೊಂದಿಗೆ ಯೋಗಾಭ್ಯಾಸ ಆರಂಭವಾಯಿತು.

  • 21 Jun 2022 07:07 AM (IST)

    International Day of Yoga 2022 Live Updates: ಓಂಕಾರದೊಂದಿಗೆ ಯೋಗಾಭ್ಯಾಸ ಆರಂಭ

    ಮೂರು ಬಾರಿ ಓಂಕಾರ ಉಚ್ಚಾರಣೆಯೊಂದಿಗೆ ಯೋಗದಿನದ ಪ್ರಯುಕ್ತ ನಡೆಯುತ್ತಿರುವ ವಿಶೇಷ ಯೋಗಾಭ್ಯಾಸ ಆರಂಭವಾಯಿತು. ಸಂಸ್ಕೃತದ ಶ್ಲೋಕವೊಂದರ ಮೂಲಕ ಪ್ರಾರ್ಥನೆ ಮಾಡಲಾಯಿತು.

  • 21 Jun 2022 07:03 AM (IST)

    PM Modi in Mysore Live Updates: ಯೋಗ ಮಾರ್ಗದಲ್ಲಿ ಬದುಕೋಣ: ಮೋದಿ

    ಯೋಗದ ಬಗ್ಗೆ ತಿಳಿಯೋಣ, ಯೋಗದ ರೀತಿಯಲ್ಲಿ ಬದುಕೋಣ, ಯೋಗವನ್ನು ನಮ್ಮದಾಗಿಸಿಕೊಳ್ಳೋಣ. ನಾವು ಯೋಗದ ರೀತಿಯಲ್ಲಿ ಜೀವನ ಮುಂದುವರಿಸೋಣ. ಯೋಗದಿಂದ ಸಿಗುವ ನೆಮ್ಮದಿಯನ್ನು ಎಲ್ಲರೂ ಸಂಭ್ರಮಿಸೋಣ. ಯೋಗದಿಂದ ನಾವು ಎಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸಹೊಸ ಆಲೋಚನೆಗಳೊಂದಿಗೆ ಯೋಗದ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಸ್ಟಾರ್ಟ್​ಅಪ್ ಅವಕಾಶಗಳೂ ಸಾಕಷ್ಟು ಇವೆ. ಮೈಸೂರಿನಲ್ಲಿ ಈಗ ಇನ್ನೊವೇಟಿವ್ ಡಿಜಿಟಲ್ ಎಕ್ಸಿಬಿಷನ್ ಆಯೋಜಿಸಿದ್ದೇವೆ ಎಂದು ಮೋದಿ ಹೇಳಿದರು.

  • 21 Jun 2022 07:00 AM (IST)

    PM Modi in Mysore Live Updates: ವಿಶ್ವಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಸದ್ದು ಮಾಡಿದೆ: ಮೋದಿ

    ವಿಶ್ವದ ವಿವಿಧ ದೇಶಗಳಲ್ಲಿ ಸೂರ್ಯೋದಯದ ಹೊತ್ತಿಗೆ ಯೋಗ ದಿನದ ಕಾರ್ಯಕ್ರಮಗಳು ನಡೆಯುತ್ತಿವೆ. ವಿಶ್ವದ ವಿವಿಧೆಡೆ ಸೂರ್ಯರಶ್ಮಿ ಸ್ಪರ್ಶವಾಗುವ ಹೊತ್ತಿಗೆ ಯೋಗದಿನದ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಪ್ರಯೋಗವು ವಿಶ್ವಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಹೆಸರಿನಲ್ಲಿ ಜನಜನಿತವಾಗಿದೆ. ಯೋಗ ಎನ್ನುವುದು ಕೇವಲ ಜೀವನದ ಭಾಗ ಅಲ್ಲ, ಅದು ಜೀವನದ ರೀತಿ ಆಗುತ್ತಿದೆ ಎಂದು ಮೋದಿ ಹೇಳಿದರು.

  • 21 Jun 2022 06:58 AM (IST)

    PM Modi in Mysore Live Updates: ಯೋಗವು ಜನರನ್ನು ಬೆಸೆಯುತ್ತದೆ: ಮೋದಿ

    ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸಕ್ಕೆ ಸಾಕ್ಷಿ, ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ. ಯೋಗದಿನದ ಪ್ರಯುಕ್ತ ಎಲ್ಲರನ್ನೂ ಬೆಸೆಯುತ್ತಿದ್ದೇವೆ.

  • 21 Jun 2022 06:56 AM (IST)

    PM Modi in Mysore Live Updates: ಭಾರತವು ವಿಶ್ವದ ಒಳಿತು ಬಯಸುತ್ತದೆ: ಮೋದಿ

    ಭಾರತವು ಸದಾ ವಿಶ್ವದ ಒಳಿತು ಬಯಸಿದೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. ಮಾನವತೆಗೆ ಯೋಗ ಎನ್ನುವುದು ಈ ವರ್ಷದ ಆಶಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

  • 21 Jun 2022 06:53 AM (IST)

    PM Modi in Mysore Live Updates: ಮೈಸೂರು ಅಧ್ಯಾತ್ಮ, ಯೋಗ ಸಾಧಕರ ನೆಲೆವೀಡು: ಮೋದಿ

    ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನದ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಯೋಗ ಈಗ ಇಡೀ ಜಗತ್ತಿನಲ್ಲಿ ಜನಪ್ರಿಯವಾಗಿದೆ. ಯೋಗ ಎನ್ನುವುದು ಆತ್ಮಪ್ರಕಾಶಕ್ಕೆ ನೆರವಾಗುವ ಪ್ರಕ್ರಿಯೆಯಾಗಿದೆ ಎಂದು ನುಡಿದರು.

  • 21 Jun 2022 06:48 AM (IST)

    Yoga Day in Mysuru Live Updates: ಯೋಗ ದಿನದಲ್ಲಿ ಬೊಮ್ಮಾಯಿ ಭಾಷಣ

    ಮೈಸೂರಿನಲ್ಲಿ ನಡೆಯುತ್ತಿರುವ ಯೋಗ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಯೋಗದಿನ ಆಯೋಜನೆ, ಜನಪ್ರಿಯತೆಯಲ್ಲಿ ಮೋದಿ ಅವರ ಪಾತ್ರ ದೊಡ್ಡದು. ಈ ಬಾರಿ ಅವರು ಮೈಸೂರಿಗೆ ಬರುವ ಮೂಲಕ ಮೈಸೂರು ನಗರವನ್ನು ಅಂತರರಾಷ್ಟ್ರೀಯ ನಕ್ಷೆಯಲ್ಲಿ ಗಮನ ಸೆಳೆಯಲು ನೆರವಾಗಿದ್ದಾರೆ. ಯೋಗದಿಂದ ವಿಶ್ವವನ್ನುಒಂದುಗೂಡಿಸಬಹುದು ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ ಎಂದು ಬೊಮ್ಮಾಯಿ ನುಡಿದರು.

  • 21 Jun 2022 06:44 AM (IST)

    International Day of Yoga 2022 Live Updates: ಮೈಸೂರಿನ ಇತಿಹಾಸ ಸ್ಮರಿಸಿದ ಸಚಿವ ಸೋನೊವಾಲ

    ಮೈಸೂರು: ವಿಶ್ವ ಯೋಗ ದಿನಾಚರಣೆಯ ಸಭಾ ಕಾರ್ಯಕ್ರಮ ಆರಂಭವಾಗಿದ್ದು ಕೇಂದ್ರ ಆಯುಷ್ ಸಚಿವ ಸೋನೊವಾಲ ಸ್ವಾಗತ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ಅವರು ಕರ್ನಾಟಕ ಮತ್ತು ಮೈಸೂರಿನ ಇತಿಹಾಸ ಸ್ಮರಿಸಿದ ಅವರು, ಯುವಜನರಿಗಾಗಿ ಕೇಂದ್ರ ಸರ್ಕಾರಿ ಜಾರಿಗೆ ತಂದಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.

  • 21 Jun 2022 06:41 AM (IST)

    International Day of Yoga 2022 Live Updates: ಮಾನವತೆಗೆ ಯೋಗ: ಕಾರ್ಯಕ್ರಮ ಆರಂಭ

    ಈ ಬಾರಿಯ ಯೋಗ ದಿನಾಚರಣೆಗೆ ಮಾನವತೆಗೆ ಯೋಗ ಎನ್ನುವ ಘೋಷವಾಕ್ಯ ನೀಡಲಾಗಿದೆ. ಇದು ಯೋಗದ ಆಶಯವನ್ನು ಸಮರ್ಥವಾಗಿ ಬಿಂಬಿಸುವ ವಾಕ್ಯ ಎನಿಸಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ ರಾಜವಂಸ್ಥರಾದ ಪ್ರಮೋದಾದೇವಿ, ಯದುವೀರ್ ಒಡೆಯರ್, ಕೇಂದ್ರ ಆಯುಷ್ ಇಲಾಖೆ​ ಸಚಿವ ಸರ್ಬಾನಂದ ಸೋನೊವಾಲ, ಸಚಿವರಾದ ಡಾ.ಕೆ.ಸುಧಾಕರ್​, ಎಸ್​.ಟಿ.ಸೋಮಶೇಖರ್, ಸಂಸದ ಪ್ರತಾಪ್​ ಸಿಂಹ ಸೇರಿದಂತೆ ಹಲವರು ಸಾಥ್ ನೀಡುತ್ತಿದ್ದಾರೆ.

  • 21 Jun 2022 06:37 AM (IST)

    Yoga Day in Mysuru Live Updates: 15 ಸಾವಿರ ಜನರಿಂದ ಯೋಗ

    ಮೈಸೂರಿನಲ್ಲಿ ನಡೆಯುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರು ಅರಮನೆಯ ಮುಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಕ್ಷಮದಲ್ಲಿ ಯೋಗಾಭ್ಯಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದಾರೆ. ಯೋಗ ಕಾರ್ಯಕ್ರಮದಲ್ಲಿ ಸುಮಾರು 15 ಸಾವಿರ ಜನರು ಭಾಗವಹಿಸಿದ್ದಾರೆ.

  • 21 Jun 2022 06:35 AM (IST)

    Yoga Day 2022 Live Updates: ಪ್ರವೇಶ ನಿರಾಕರಣೆ: ಮೋದಿಯೊಂದಿಗೆ ಯೋಗ ಮಾಡುವ ಅವಕಾಶ ಕಳೆದುಕೊಂಡ ವಿದ್ಯಾರ್ಥಿಗಳ ನೋವು

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗ ಮಾಡಲು ಬಂದಿದ್ದ ಎಚ್​ಡಿ ಕೋಟೆಯ ಜೆಎಸ್​ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮೈಸೂರು ಅರಮನೆ ಆವರಣ ಪ್ರವೇಶಕ್ಕೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. ಕೊನೆಯ ಹಂತದಲ್ಲಿ ಪಾಸ್ ಸಿಗದ ಕಾರಣ ಇವರನ್ನು ಪೊಲೀಸರು ಹೊರಗೆ ಕಳಿಸಿದರು. ಬೇಸರದಿಂದಲೇ ವಿದ್ಯಾರ್ಥಿಗಳು ಅರಮನೆಯಿಂದ ಹೊರಗೆ ನಡೆದರು.

  • 21 Jun 2022 06:31 AM (IST)

    PM Modi in Mysore Live Updates: ಯೋಗ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ

    ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ವಿಶೇಷ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ರಾಡಿಸನ್​ ಬ್ಲೂ ಹೋಟೆಲ್​ನಿಂದ ಮೈಸೂರು ಅರಮನೆ ಮೈದಾನದ ಆವರಣಕ್ಕೆ ಮೋದಿ ಬಂದರು. ಬೆಳಗ್ಗೆ 6.30ರಿಂದ 7.45ರವರೆಗೂ ಯೋಗ ದಿನಾಚರಣೆ ಕಾರ್ಯಕ್ರಮಗಳು ನಡೆಯಲಿವೆ.

  • ಮೈಸೂರು: ವಿಶ್ವ ಯೋಗದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೈಸೂರು ಅರಮನೆ ಮೈದಾನದಲ್ಲಿ (Mysore Palace) ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೂರ್ವ ನಿಗದಿತ 6.30ರ ಒಳಗೆ ಮೋದಿ ಮೈಸೂರು ಅರಮನೆಗೆ ಬಂದ ಮೋದಿ ಅವರನ್ನು ರಾಜಮಾತೆ ಪ್ರಮೋದ ದೇವಿ ಸ್ವಾಗತಿಸಿದರು. 6.30ರಿಂದ 7.45ರ ವರೆಗೂ ಯೋಗಭ್ಯಾಸ ನಡೆಸಿದ ಮೋದಿ ಅವರು, ಬಳಿಕ ರಾಜವಂಶಸ್ಥರ ಜೊತೆ ಉಪಹಾರ ಸೇವಿಸಿದರು. ನಮೋ ಎಕ್ಸಿಬಿಷನ್ ಉದ್ಘಾಟಿಸಿದ ಬಳಿಕ ನೇರವಾಗಿ ಮೈಸೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಲಿದ್ದಾರೆ. ವಿಶ್ವ ಯೋಗ ದಿನದ ಪ್ರಯುಕ್ತ ಕರ್ನಾಟಕದ ವಿವಿಧೆಡೆ ವಿಶೇಷ ಕಾರ್ಯಕ್ರಮಗಳು ನಡೆದವು.

    Published On - Jun 21,2022 6:27 AM

    Follow us
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ