BREAKING NEWS
India vs Australia, 2nd ODI, LIVE Score: ಫಿಂಚ್-ವಾರ್ನರ್ ಭರ್ಜರಿ ಜೊತೆಯಾಟ

ಲಾಕ್​ಡೌನ್ ಬಳಿಕ ಮೊದಲ ಏಕದಿನ ಸರಣಿಯಲ್ಲಿ ಪಾಲ್ಗೊಂಡಿರುವ ಭಾರತ, ಇಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಪಂದ್ಯವನ್ನು ಆಡಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿರುವ ಭಾರತಕ್ಕೆ ಇಂದಿನ ಆಟವನ್ನು ಗೆಲ್ಲಲೇಬೇಕಾದ ಒತ್ತಡವಿದೆ‌. ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಇರುವ ಭಾರತವು, ಸರಣಿ ಸಮಬಲ ಕಾಯ್ದುಕೊಳ್ಳಲು ಹೋರಾಡಬೇಕಿದೆ. ಗೆಲ್ಲುವ ಉತ್ಸಾಹದಲ್ಲಿ ಕೊಹ್ಲಿ-ಫಿಂಚ್ ಪಡೆ! ಮೊದಲ ಪಂದ್ಯದ ತಪ್ಪುಗಳನ್ನು ಮತ್ತೆ ಮರುಕಳಿಸದೆ, ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರುವ ಉತ್ಸಾಹದಲ್ಲಿ ಕೊಹ್ಲಿ

x

ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ: ಕ್ರಿಕೆಟ್​ ದಿಗ್ಗಜ ಕಪಿಲ್​ ದೇವ್​ ಆಸ್ಪತ್ರೆಯಿಂದ ಡಿಸ್ಚಾರ್ಜ್​

  • KUSHAL V
  • Published On - 18:05 PM, 25 Oct 2020

ದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಕ್ರಿಕೆಟ್​ ದಿಗ್ಗಜ ಕಪಿಲ್​ ದೇವ್​ ಇಂದು ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್​ ಆದರು.

ಕಪಿಲ್​ ದೇವ್​ಗೆ ನಿನ್ನೆ ಌಂಜಿಯೋಪ್ಲಾಸ್ಟಿ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಲಾಯಿತು. ಸರ್ಜರಿ ಬಳಿಕ ಚೇತರಿಸಿಕೊಂಡಿರುವ ಮಾಜಿ ಕ್ರಿಕೆಟಿಗ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದರು. ಕಪಿಲ್​ ದೇವ್​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಗ್ಗೆ ಮಾಜಿ ಕ್ರಿಕೆಟಿಗ ಚೇತನ್​ ಶರ್ಮಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡರು.