ರಾಜ್ಯ ಕಾಂಗ್ರೆಸ್​ನಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ಲಾಬಿ ಶುರು

ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಹೆಚ್ಚು ಕಡಿಮೆ ಒಂದೂವರೆ ತಿಂಗಳಾಗ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಆದ್ರೆ ಇದಕ್ಕೂ ಮುಂಚೆಯೇ ಕಾಂಗ್ರೆಸ್​ ಪಾಳಯದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದ ಸ್ಥಾನ ಉಳಿಸಿಕೊಳ್ಳಲು ಈಗಾಗಲೇ ಪ್ಲಾನ್ ಮಾಡಿದ್ದಾರೆ. ಮೊನ್ನೆ ವಿಧಾನಸಭೆಯಲ್ಲೂ ವಿರೋಧ ಪಕ್ಷದ ನಾಯಕ ಅಂತ ಪರೋಕ್ಷವಾಗಿಯೇ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಕೈ ಪಾಳಯದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಮೂಲ ಕಾಂಗ್ರೆಸ್ಸಿಗರ ವಿರೋಧವಿದೆ.

ಇದೇ ಬೆಳವಣಿಗೆಯಲ್ಲಿ ಸೆ.4ರಂದು ಕಾಂಗ್ರೆಸ್​ನ ಹಿರಿಯ ನಾಯಕ ಹೆಚ್​.ಕೆ. ಪಾಟೀಲ್ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ಮಾಜಿ ಸಚಿವ ಹೆಚ್​ಕೆ ಪಾಟೀಲ್​ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಸೇರಿದಂತೆ ಮೂಲ ಕಾಂಗ್ರೆಸ್​ನ 20ಕ್ಕೂ ಹೆಚ್ಚು ಶಾಸಕರು ಪತ್ರದ ಮೂಲಕ ಬೆಂಬಲಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!