ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ

ಸಂಸತ್ ಅಧಿವೇಶನದಲ್ಲಿ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಬಗ್ಗೆ ವಿವರಿಸಿದ್ದಾರೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
ಆಯೇಷಾ ಬಾನು
|

Updated on:Jul 31, 2024 | 11:12 AM

ದೆಹಲಿ, ಜುಲೈ.31: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (Surya Ghar Yojana) ಯೋಜನೆಯು ದೀರ್ಘಾವಧಿಯಲ್ಲಿ ಒಂದು ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿವರಿಸಿದ ಸಚಿವರು, ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ತ್ವರಿತವಾಗಿ ಜಾರಿಗೆ ತರಲು ಡಿಸ್ಕಾಮ್‌ ಗಳಿಗೆ ನಿರ್ದೇಶಸಿದ್ದೇವೆ ಎಂದರು.

ಇದನ್ನೂ ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಈ ಯೋಜನೆಯಡಿ 3 KW ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ 78,000 ರೂ. ಸಬ್ಸಿಡಿ ನೀಡುತ್ತಿದೆ. ಜತೆಗೆ ಬ್ಯಾಂಕ್ ಸಾಲ ಸೌಲಭ್ಯವೂ ಇರುತ್ತದೆ. ಸಾಮಾನ್ಯವಾಗಿ 3 KW ಘಟಕ 300 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ. ಸೂರ್ಯ ಘರ ಘಟಕಕ್ಕೆ ಮೇಲ್ಛಾವಣಿ ಸ್ಥಾಪನೆಗೆ 1.5 ಲಕ್ಷ ರೂ. ವೆಚ್ಚವಾಗಲಿದೆ. 78,000 ರೂ. ಸಬ್ಸಿಡಿ ಲಭ್ಯವಿದ್ದು, ಉಳಿದ ಬಂಡವಾಳಕ್ಕೆ ಫಲಾನುಭವಿಗಳು ಬ್ಯಾಂಕ್ ಸಾಲ ಪಡೆಯಬಹುದು. 300 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸಿದಲ್ಲಿ, ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್ ಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ಸಾಮಾನ್ಯ 5 ಜನರಿರುವ ಮಧ್ಯಮ ವರ್ಗದವರ ಮನೆಗಳಿಗೆ 300 ಯೂನಿಟ್ ವಿದ್ಯುತ್ ಸಾಕಷ್ಟಾಗುತ್ತದೆ ಎಂದು ಅಭಿಪ್ರಾಯ ಮಂಡಿಸಿದ ಸಚಿವರು, ಡಿಸ್ಕಾಮ್ ಗಳು ನವೀಕರಿಸಬಹುದಾದ ಇಂಧನವನ್ನು ಖರೀದಿಸುವ ಬಾಧ್ಯತೆ ಹೊಂದಿದ್ದು, ಇದಕ್ಕಾಗಿ ಕುಟುಂಬಗಳಿಗೆ ಮರುಪಾವತಿ ಮಾಡಲಾಗುತ್ತದೆ ಮತ್ತು ದೀರ್ಘಾವಧಿಯಲ್ಲಿ ಅದು ಮಧ್ಯಮವರ್ಗಕ್ಕೆ ಉಚಿತವಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Wed, 31 July 24

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ