Chandana: 1ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಚಂದನದಲ್ಲಿ ಪ್ರತಿದಿನ ವಿಡಿಯೋ ಪಾಠಗಳ ಪ್ರಸಾರ

ಈ ತರಗತಿಗಳು ಬೆಳಗಿನ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಮರಾಠಿ ಮಾಧ್ಯಮದ ಪಾಠಗಳನ್ನು ಯೂ-ಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು.

Chandana: 1ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಚಂದನದಲ್ಲಿ ಪ್ರತಿದಿನ ವಿಡಿಯೋ ಪಾಠಗಳ ಪ್ರಸಾರ
ಚಂದನ ವಾಹಿನಿ
TV9kannada Web Team

| Edited By: guruganesh bhat

Jun 21, 2021 | 7:33 PM

ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವ ಇದೇ ಜುಲೈ1ರಿಂದ ದೂರದರ್ಶನದ ಚಂದನ ವಾಹಿನಿ ಮೂಲಕ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿದಿನ ವಿಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಕನ್ನಡ, ಇಂಗ್ಲಿಷ್ ಮತ್ತು ಉರ್ದು ಮಾಧ್ಯಮದ ಪಾಠಗಳು ಪ್ರಸಾರವಾಗಲಿವೆ. ಈ ತರಗತಿಗಳು ಬೆಳಗಿನ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಮರಾಠಿ ಮಾಧ್ಯಮದ ಪಾಠಗಳನ್ನು ಯೂ-ಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಸಂವೇದಾ ದೂರದರ್ಶನ ಪಾಠ ಎಂದು ಈ ಯೋಜನೆಗೆ ಹೆಸರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

2021-22ನೇ ಸಾಲಿನಲ್ಲಿ ಭೌತಿಕ ತರಬೇತಿಗಳು ಪ್ರಾರಂಭವಾದಲ್ಲಿ ಶಿಕ್ಷಕರು ನಿರ್ವಹಿಸಬೇಕಾದ ಬೋಧನೆ ಹಾಗೂ ಮೌಲ್ಯಮಾಪನ ಕ್ರಮದ ಖಚಿತವಾದ ರೂಪುರೇಷೆಗಳನ್ನು ನಾವು ಹೊಂದಿರಬೇಕೆಂದು ಸಲಹೆ ನೀಡಿದ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಡಯಟ್‍ಗಳು ಉತ್ತಮ ಉಪಕ್ರಮಗಳನ್ನು  ಕ್ರೋಡಿಕರಿಸಿ ಅವುಗಳನ್ನು  ಇತರರೂ ಅನುಸರಿಸುವ ನಿಟ್ಟಿನಲ್ಲಿ ಕೈಪಿಡಿಯೊಂದನ್ನು ಹೊರತರಬೇಕೆಂದು ಸೂಚಿಸಿದರು.

ಭಾಷಾ ಪ್ರಯೋಗಾಲಯಗಳು ಸಂಪನ್ಮೂಲ ಅಭಿವೃದ್ಧಿ ಕೇಂದ್ರಗಳಾಗಲಿ ಇಲಾಖೆ ಆಶ್ರಯದ ರಾಜ್ಯದ ನಾಲ್ಕು ವಿಭಾಗಗಳಲ್ಲಿರುವ ಶ್ರೀ ಆಲೂರು ವೆಂಕಟರಾವ್ ಭಾಷಾ ಕೌಶಲ ತರಬೇತಿ ಕೇಂದ್ರಗಳಲ್ಲಿ ತೆಲುಗು, ತಮಿಳು, ಮರಾಠಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಕೌಶಲ್ಯ ಸ್ಥಾಪನೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು. ಪ್ರತಿ ಕೇಂದ್ರದಲ್ಲಿ ಸುಸಜ್ಜಿತ ಗ್ರಂಥಾಲಯ ಸೌಲಭ್ಯಗಳು, ತಂತ್ರಜ್ಞಾನ ವ್ಯವಸ್ಥೆಗಳನ್ನು ನಿರ್ಮಿಸಿಕೊಡಲಾಗಿದೆ. ಸುಸಜ್ಜಿತ ಭಾಷಾ ಪ್ರಯೋಗಾಲಯಗಳ ಸ್ಥಾಪನೆ ಅಂತಿಮ ರೂಪವನ್ನು ಪಡೆದುಕೊಳ್ಳುತ್ತಿದೆ. ಈ ಪ್ರಯೋಗಾಲಯಗಳು ಭಾಷಾ ಸಾಹಿತ್ಯದಲ್ಲಿ ಚಟುವಟಿಕೆಯಾಧಾರಿತ ಕಾರ್ಯಕ್ರಮಗಳನ್ನು ರೂಪಿಸಲಿವೆ.  ಸುಸಜ್ಜಿತ ತಾಂತ್ರಿಕ ಸೌಲಭ್ಯಗಳನ್ನು ಒಳಗೊಳ್ಳಲಿದ್ದು, ಸದ್ಯದಲ್ಲೇ ಈ ನಾಲ್ಕು ಪ್ರಯೋಗಾಲಯಗಳನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಶಾಲೆ ಆರಂಭ ಯಾವಾಗ? ಕೊವಿಡ್ 3ನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದ ಸಮಿತಿ ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪಗೆ ಮಧ್ಯಂತರ ವರದಿ ಸಲ್ಲಿಸಲಿದೆ. ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ  ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌‌ಕುಮಾರ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ. ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ  ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

ಇದನ್ನೂ ಓದಿ: School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

(1 to 10th class video lessons are telecasted at Dooradarshana Chandana Channel in Karnataka)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada