ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ
15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕಾಲೇಜು ವೃತ್ತಿಪರ ಕೋರ್ಸ್ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ.
ಬೆಂಗಳೂರು, ಜೂನ್ 14: ಖಾಸಗಿ ಇಂಜನಿಯರಿಂಗ್ (engineering) ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ (Govt) ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದೆ. ಆ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕಾಲೇಜು ವೃತ್ತಿಪರ ಕೋರ್ಸ್ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಇಂಜಿನಿಯರಿಂಗ್ ಸೀಟು ಬಲು ದುಬಾರಿ; 10-15 % ಶುಲ್ಕ ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ನಿರ್ಧಾರ
ಕಳೆದ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಪ್ರವೇಶಾತಿ ಶುಲ್ಕ ಶೇ.7% ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ 40 ಸಾವಿರ ರೂ ಶುಲ್ಕ ಹೆಚ್ಚಿಸಲಾಗಿತ್ತು. ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 67 – 68.000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ, ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ ಮಾಡಲಾಗಿತ್ತು.
ಇದನ್ನೂ ಓದಿ: 35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
ಆದರೆ ಇದರ ಹೊರತಾಗಿ ಖಾಸಗಿ ಕೋಟ ಸೀಟ್ ಗಳಿಗೆ ಕಾಲೇಜುಗಳು ಮನಸಿಗೆ ಬಂದಷ್ಟು ಶುಲ್ಕ ಪಡೆಯುತ್ತಿದ್ದು ಪೋಷಕರ ಪರದಾಟಕ್ಕ ಕಾರಣವಾಗಿದೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಸೀಟ್ ಪಡೆಯಲು 6 ರಿಂದ 10 ಲಕ್ಷ ರೂ. ನೀಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:02 pm, Fri, 14 June 24