ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 14, 2024 | 8:41 PM

15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜು ವೃತ್ತಿಪರ ಕೋರ್ಸ್​ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ.

ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ
ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ
Follow us on

ಬೆಂಗಳೂರು, ಜೂನ್​ 14: ಖಾಸಗಿ ಇಂಜನಿಯರಿಂಗ್ (engineering) ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ (Govt) ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದೆ. ಆ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ್​ ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜು ವೃತ್ತಿಪರ ಕೋರ್ಸ್​ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಇಂಜಿನಿಯರಿಂಗ್‌ ಸೀಟು ಬಲು ದುಬಾರಿ; 10-15 % ಶುಲ್ಕ ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ನಿರ್ಧಾರ

ಕಳೆದ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಪ್ರವೇಶಾತಿ ಶುಲ್ಕ ಶೇ.7% ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ 40 ಸಾವಿರ ರೂ ಶುಲ್ಕ ಹೆಚ್ಚಿಸಲಾಗಿತ್ತು. ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 67 – 68.000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ, ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ ಮಾಡಲಾಗಿತ್ತು.

ಇದನ್ನೂ ಓದಿ: 35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

ಆದರೆ ಇದರ ಹೊರತಾಗಿ ಖಾಸಗಿ ಕೋಟ ಸೀಟ್ ಗಳಿಗೆ ಕಾಲೇಜುಗಳು ಮನಸಿಗೆ ಬಂದಷ್ಟು ಶುಲ್ಕ ಪಡೆಯುತ್ತಿದ್ದು ಪೋಷಕರ ಪರದಾಟಕ್ಕ ಕಾರಣವಾಗಿದೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಸೀಟ್ ಪಡೆಯಲು 6 ರಿಂದ 10 ಲಕ್ಷ ರೂ. ನೀಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Fri, 14 June 24