ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Department of Kannada and Culture) ವ್ಯಾಪ್ತಿಯ 10 ಅಕಾಡೆಮಿಗಳಿಗೆ ಹೊಸ ಸದಸ್ಯರ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಧಾರವಾಡ ಜಿಲ್ಲೆಯ ಅಜಿತ್ ನಾಗಪ್ಪ ಬಸಾಪುರ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಡಾ.ಮಹೇಶ ಜೋಶಿ ಅವರು ಹಾವೇರಿ ನಗರದ ವಾರ್ತಾ ಭವನದಲ್ಲಿ ಇಂದು (ಆಗಸ್ಟ 6) 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ನನ್ನ ಸಂಪರ್ಕಕ್ಕೆ ಬಂದವರು ಕೂಡಲೆ ಕೋರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಅಂತಾ ಮಾಹಿತಿ ಹಂಚಿಕೊಂಡಿದ್ದಾರೆ.
ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಬೆಂಗಳೂರಿನ ಇನ್ಸ್‌ಪೆಕ್ಟರ್‌ಗೆ ಕಂಚಿನ ಪದಕ
ಬೆಂಗಳೂರು: ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಬೆಂಗಳೂರಿನ ಬೊಮ್ಮನಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಪ್ರಶಾಂತ್ ಇನ್ಸ್‌ಪೆಕ್ಟರ್ ಕಂಚಿನ ಪದಕ ಗೆದ್ದು ಬೀಗಿದ್ದಾರೆ. ನೆದರ್‌ಲೆಂಡ್‌ನ ರೋಟರ್ ಡ್ಯಾಂನಲ್ಲಿ ಎರಡು ವರ್ಷಕ್ಕೊಮ್ಮೆ ವಿಶ್ವ ಪೊಲೀಸ್ ಕ್ರೀಡಾಕೂಟ ನಡೆಯುತ್ತದೆ. ಈ ಕ್ರೀಡಾಕೂಟದಲ್ಲಿ ಇನ್ಸ್‌ಪೆಕ್ಟರ್ ಪ್ರಶಾಂತ್ ಟೆನಿಸ್ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ ಎಂದು ಬಿಎಮ್ಆರ್ಸಿಎಲ್ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 5 ಗಂಟೆಯಿಂದ 6 ರವರೆಗೆ ಹಾಗೂ ರಾತ್ರಿ 10 ರಿಂದ 11 ಗಂಟೆವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚರಿಸಲಿದೆ.
ಇದುವರೆಗೂ ಪ್ರತಿ 20 ನಿಮಿಷಕ್ಕೊಂದು ಮೆಟ್ರೋ ಸಂಚರಿಸುತ್ತಿತ್ತು. ಇದರಿಂದ ಬೆಳಿಗ್ಗೆ, ರಾತ್ರಿ ಓಡಾಡೋ ಪ್ರಯಾಣಿಕರಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಮ್ಆರ್ಸಿಎಲ್ ತಿಳಿಸಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:43 pm, Sat, 6 August 22