ಬೆಂಗಳೂರು ವಿವಿ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ: ರಸ್ತೆ ತಡೆದು ಧರಣಿ

ಬೆಂಗಳೂರು ವಿವಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸುಮಾರು 40 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಉಂಟಾಗಿರುವಂತಹ ಘಟನೆ ನಡೆದಿದೆ. ಇವತ್ತು ರೋಡಿಗಿಳಿದಿದ್ದ ವಿದ್ಯಾರ್ಥಿಗಳು ಊಟ ಸರಿಯಿಲ್ಲವೆಂದು ಆರೋಪಿಸಿ ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ಧರಣಿ ಮಾಡಿದ್ದಾರೆ. ಪೊಲೀಸರ ಮನವೊಲಿಕೆ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ.

ಬೆಂಗಳೂರು ವಿವಿ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ: ರಸ್ತೆ ತಡೆದು ಧರಣಿ
ಬೆಂಗಳೂರು ವಿವಿ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ: ರಸ್ತೆ ತಡೆದು ಧರಣಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 03, 2024 | 10:57 PM

ಬೆಂಗಳೂರು, ಜೂನ್​ 03: ಬೆಂಗಳೂರು ವಿಶ್ವವಿದ್ಯಾಲಯದ (Bengaluru university) ಬಿಸಿಎಂ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು (students) ಅಸ್ವಸ್ಥರಾಗಿದ್ದು, 40 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಉಂಟಾಗಿರುವಂತಹ ಘಟನೆ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹಾಸ್ಟೆಲ್ ಒಳಪಡುತ್ತದೆ. ಇವತ್ತು ರೋಡಿಗಿಳಿದಿದ್ದ ವಿದ್ಯಾರ್ಥಿಗಳು ಊಟ ಸರಿಯಿಲ್ಲವೆಂದು ಆರೋಪಿಸಿ ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ಧರಣಿ ಮಾಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣೆ ಪೊಲೀಸರು ಹಾಸ್ಟೆಲ್ ವಿದ್ಯಾರ್ಥಿಗಳ ಮನವೊಲಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ ನಂತರ ಸಂಚಾರ ಸಹಜಸ್ಥಿತಿಗೆ ಮರಳಿದೆ.

ಹಾಸ್ಟೆಲ್​ನಲ್ಲಿ ಊಟದ್ದೇ ಸಮಸ್ಯೆ: ರೋಡಿಗಿಳಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಧಾರವಾಡ: ವಿದ್ಯಾಕಾಶಿ ಧಾರವಾಡಕ್ಕೆ ವ್ಯಾಸಂಗ ಮಾಡಲು ರಾಜ್ಯದ ವಿವಿಧ ಕಡೆಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಹೀಗೆ ಬರುವ ವಿದ್ಯಾರ್ಥಿಗಳು ಸರಕಾರಿ ಹಾಸ್ಟೆಲ್​ಗಳಲ್ಲಿಯೇ ಉಳಿದುಕೊಳ್ಳುತ್ತಾರೆ. ಆದರೆ ಹೀಗೆ ಹಾಸ್ಟೆಲ್​ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳ ಕಷ್ಟ ಹೇಳತೀರದು. ಇಲ್ಲಿನ ವಿದ್ಯಾರ್ಥಿಗಳಿಗೆ ಊಟದ್ದೇ ಪ್ರಮುಖ ಸಮಸ್ಯೆ. ಇಂಥ ಸಮಸ್ಯೆ ವಿರೋಧಿಸಿ ವಿದ್ಯಾರ್ಥಿಗಳು ಹೋರಾಟಕ್ಕೆ ಇಳಿದಿದ್ದರು.

ಇದನ್ನೂ ಓದಿ: ಗೃಹ ಪ್ರವೇಶದಲ್ಲಿ ಊಟ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ: ವೃದ್ಧೆ ಸಾವು

ನಗರದ ಸಪ್ತಾಪುರ ಬಡಾವಣೆಯಲ್ಲಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಲಾಗಿದೆ. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಈ ಹಾಸ್ಟೆಲ್​ನಲ್ಲಿ ಕಳೆದ ಒಂದು ವಾರದಿಂದ ಊಟದ್ದೇ ಸಮಸ್ಯೆಯಾಗಿತ್ತು. ಒಂದು ವಾರದ ಹಿಂದೆ ಇಲ್ಲಿನ ವಾರ್ಡನ್ ನೀಲಪ್ಪ ಅನ್ನೋರಿಗೆ ಬೇರೆ ಕಡೆ ವರ್ಗವಾಗಿತ್ತು. ಬಳಿಕ ಬಂದಿರೋ ವಾರ್ಡನ್ ಸರಿಯಾದ ಕಾಳಜಿ ತೆಗೆದುಕೊಳ್ಳದೇ ಇರೋದಕ್ಕೆ ಈ ಸಮಸ್ಯೆ ಆಗಿತ್ತು.

ಇದನ್ನೂ ಓದಿ: ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು: ಮೂವರು ಅಧಿಕಾರಿಗಳು ಅಮಾನತು

ಇಲ್ಲಿ ತಯಾರಾಗುವ ಅಡುಗೆಯಲ್ಲಿ ಶುದ್ಧತೆ ಇಲ್ಲ ಹಾಗೂ ಅನ್ನ ಸಂಪೂರ್ಣವಾಗಿ ಆಗೋದಕ್ಕೆ ಮುಂಚೆಯೇ ಊಟಕ್ಕೆ ನೀಡಲಾಗುತ್ತಿದೆ ಅನ್ನೋದು ವಿದ್ಯಾರ್ಥಿಗಳ ಆರೋಪ. ಇದೇ ಕಾರಣಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಅನ್ನದ ಪಾತ್ರೆಯನ್ನು ಹಾಸ್ಟೆಲ್ ಮುಂದಿರೋ ರಸ್ತೆಗೆ ತಂದಿಟ್ಟು, ಪ್ರತಿಭಟನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!