ಶಾಲೆಗೆ ತೆರಳುವ ವೇಳೆ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ ಸಾವು

|

Updated on: Dec 12, 2019 | 1:59 PM

ಬೆಳಗಾವಿ: ಶಾಲೆಗೆ ತೆರಳುವ ವೇಳೆ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ದೇಸೂರ ಗ್ರಾಮದಲ್ಲಿ ನಡೆದಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದು ಸರ್ಕಾರಿ ಬಸ್‌ನಡಿ ಸಿಲುಕಿ ಮಹಮ್ಮದ್ ಚೌಧರಿ ಮೃತಪಟ್ಟಿದ್ದಾನೆ. ಈ ಸಂಬಂಧ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗೆ ತೆರಳುವ ವೇಳೆ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ ಸಾವು
Follow us on

ಬೆಳಗಾವಿ: ಶಾಲೆಗೆ ತೆರಳುವ ವೇಳೆ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ದೇಸೂರ ಗ್ರಾಮದಲ್ಲಿ ನಡೆದಿದೆ.

ಬಸ್ ಹತ್ತುವಾಗ ಕೆಳಗೆ ಬಿದ್ದು ಸರ್ಕಾರಿ ಬಸ್‌ನಡಿ ಸಿಲುಕಿ ಮಹಮ್ಮದ್ ಚೌಧರಿ ಮೃತಪಟ್ಟಿದ್ದಾನೆ. ಈ ಸಂಬಂಧ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.