ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ಕಾರ್ಯಕ್ರಮಗಳ ಆಯೋಜನೆ

ಕಾಂಗ್ರೆಸ್‌ ಪಕ್ಷವು ಬೆಳಗಾವಿಯಲ್ಲಿ 1924ರಲ್ಲಿ ನಡೆದ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲು ಯೋಜಿಸಿದೆ. ಡಿಸೆಂಬರ್ 26 ಮತ್ತು 27ರಂದು ಮಹಾಧಿವೇಶನ, ಸಾರ್ವಜನಿಕ ಸಭೆ, ಮತ್ತು ವಿವಿಧ ಸ್ಮಾರಕ ಕಾರ್ಯಕ್ರಮಗಳು ನಡೆಯಲಿವೆ. ಗಾಂಧೀಜಿ ಅವರ ಸ್ಮರಣೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು, ಗ್ರಂಥಾಲಯ, ಪ್ರತಿಮೆಗಳ ಅನಾವರಣ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ಕಾರ್ಯಕ್ರಮಗಳ ಆಯೋಜನೆ
ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ಕಾರ್ಯಕ್ರಮಗಳ ಆಯೋಜನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 02, 2024 | 10:32 PM

ಬೆಂಗಳೂರು, ಡಿಸೆಂಬರ್​ 02: ಬರುವ ಡಿ.28ರಂದು ಕಾಂಗ್ರೆಸ್‌ ಸಂಸ್ಥಾಪನ ದಿನಾಚರಣೆ ಇದ್ದು, ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಭಾಗವಹಿಸಿ 100 ವರ್ಷಗಳಾಗಲಿವೆ. ಈ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ಇಂದು(ಡಿಸೆಂಬರ್ 02) ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯ ಪ್ರಮುಖ ಅಂಶಗಳು ಈ ಕೆಳಗಿನಿಂತಿವೆ.

ಸಮಿತಿ ಸಭೆಯ ಪ್ರಮುಖ ಅಂಶಗಳು ಹೀಗಿವೆ

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮೋದಿಯಿಂದಲೇ ವಿಜಯೇಂದ್ರ ಬಣಕ್ಕೆ ಟಕ್ಕರ್​ ಕೊಡಿಸಲು ಯತ್ನಾಳ್ ಮೆಗಾ ಪ್ಲ್ಯಾನ್!

ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.

ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿ

ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು. ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.

ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಾಗುವುದು. ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಜಿ.ಪಂ-ತಾ.ಪಂ ಚುನಾವಣೆ ಸುಳಿವು ಬೆನ್ನಲ್ಲೇ ನೆಲಮಂಗಲದಲ್ಲಿ ಆಪರೇಷನ್ ಹಸ್ತ

ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು. ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಗಿದೆ. ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧರಿಸಲಾಗಿದೆ.

ವರದಿ: ಈರಣ್ಣ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Mon, 2 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ