1000 ಗ್ರಾಮ ಲೆಕ್ಕಿಗರ ನೇಮಕಾತಿ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ, ವಿದ್ಯಾರ್ಹತೆ ಇತ್ಯಾದಿ ಮಾಹಿತಿ ಇಲ್ಲಿದೆ

ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. 1000 ಗ್ರಾಮ ಲೆಕ್ಕಿಗರ (ಆಡಳಿತಾಧಿಕಾರಿ) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವ ವಿಧಾನ, ಬೇಕಾದ ದಾಖಲೆಗಳು, ವಿದ್ಯಾರ್ಹತೆ, ಶುಲ್ಕ, ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕ ಇತ್ಯಾದಿ ಮಾಹಿತಿ ಇಲ್ಲಿದೆ.

1000 ಗ್ರಾಮ ಲೆಕ್ಕಿಗರ ನೇಮಕಾತಿ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ, ವಿದ್ಯಾರ್ಹತೆ ಇತ್ಯಾದಿ ಮಾಹಿತಿ ಇಲ್ಲಿದೆ
karnataka village administrative officers recruitment 2024
Follow us
Rakesh Nayak Manchi
|

Updated on:Feb 23, 2024 | 11:03 PM

Karnataka Village Accountant Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 1000 ಗ್ರಾಮ ಲೆಕ್ಕಿಗರ (ಆಡಳಿತಾಧಿಕಾರಿ) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

  • ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ-VA)
  • ಹುದ್ದೆಗಳ ಸಂಖ್ಯೆ: 1000
  • ವೇತನ ಶ್ರೇಣಿ: Rs. 21400-42000

ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್‌ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: IIMB Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯಸ್ಸಿನ ಅರ್ಹತೆ

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ನೆನಪಿನಲ್ಲಿಡಬೇಕಾದ ದಿನಾಂಕಗಳು

ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿ ಸಲ್ಲಿಸವವರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 4 ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 3 (ರಾತ್ರಿ 11.50ರ ವರೆಗೆ) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಆನ್​ಲೈನ್ ಮೂಲಕ ಮಾತ್ರ ಪಾವತಿಸಬಹುದಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 pm, Fri, 23 February 24

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್