Karnataka Village Accountant Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 1000 ಗ್ರಾಮ ಲೆಕ್ಕಿಗರ (ಆಡಳಿತಾಧಿಕಾರಿ) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: IIMB Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿ ಸಲ್ಲಿಸವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 4 ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 3 (ರಾತ್ರಿ 11.50ರ ವರೆಗೆ) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.
ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿಸಬಹುದಾಗಿದೆ.
ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.#jobopportunity #jobsearching #karnataka@CMofKarnataka @siddaramaiah pic.twitter.com/UaEpH14Ly1
— DIPR Karnataka (@KarnatakaVarthe) February 22, 2024
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:02 pm, Fri, 23 February 24