AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯದ 108 ಸಿಬ್ಬಂದಿಯ ವೇತನ ಸಮಸ್ಯೆ: ಆ 18 ರೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಂದ ನೌಕರರು

ಮಾರ್ಚ್ ತಿಂಗಳ ವೇತನ ಹಾಗೂ ಕಡಿತ ಮಾಡಿರುವ ಹಿಣ ನೀಡದ ಹಿನ್ನಲೆ, ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ಆ್ಯಂಬುಲೆನ್ಸ್ ನೌಕರರ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 18ರ ವರೆಗೂ ಕಾಲಾವಕಾಶ ನೀಡಿದ್ದು, ವೇತನ ನೀಡದಿದ್ದರೆ ಕರ್ತವ್ಯಕ್ಕೆ ಗೈರಾಗುವುದಾಗಿ ಸಕಾರ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮುಗಿಯದ 108 ಸಿಬ್ಬಂದಿಯ ವೇತನ ಸಮಸ್ಯೆ: ಆ 18 ರೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಂದ ನೌಕರರು
ಪ್ರಾತಿನಿಧಿಕ ಚಿತ್ರ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 10, 2023 | 8:18 PM

Share

ಬೆಂಗಳೂರು, ಆಗಸ್ಟ್ 10: ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮೊದಲು ಜಾರಿ ಮಾಡಿದ್ದೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಗ್ಯಾರಂಟಿ ಯೋಜನೆ. ಆದರೆ ಸರ್ಕಾರ ಯೋಜನೆ ಜಾರಿ ಮಾಡಿದ ಬಳಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ಸಿಗದಂತಾಗಿತ್ತು. ಇದೀಗ ಮತ್ತೆ 108 ಸಿಬ್ಬಂದಿಯ (108 employees) ವೇತನದ ಸಮಸ್ಯೆ ಉಂಟಾಗಿದ್ದು, ಮತ್ತೆ ಹೋರಾಟಕ್ಕೆ ಆ್ಯಂಬುಲೆನ್ಸ್ ನೌಕರರು ಸಜ್ಜಾಗಿದ್ದಾರೆ.

ಆ್ಯಂಬುಲೆನ್ಸ್ ನೌಕರರಿಂದ ಆರೋಗ್ಯ ಇಲಾಖೆಗೆ ಎಚ್ಚರಿಕೆ

ಮಾರ್ಚ್ ತಿಂಗಳ ವೇತನ ಹಾಗೂ ಕಡಿತ ಮಾಡಿರುವ ಹಿಣ ನೀಡದ ಹಿನ್ನಲೆ ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ಆ್ಯಂಬುಲೆನ್ಸ್ ನೌಕರರ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 18 ರೊಳಗೆ ವೇತನ ನೀಡದಿದ್ದರೆ ಕರ್ತವ್ಯಕ್ಕೆ ಗೈರಾಗುವುದಾಗಿ 108 ಆ್ಯಂಬುಲೆನ್ಸ್ ನೌಕರರಿಂದ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಆಗಸ್ಟ್ 27 ರಂದು ರಾಜ್ಯದ 11 ಸಾವಿರ ಕಡೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಡಿಕೆ ಶಿವಕುಮಾರ್

ಉಚಿತ ಯೋಜನೆ ಬಗ್ಗೆ ತಲೆ ಕೆಡಿಸಿಕೊಂಡ ಕಾಂಗ್ರೆಸ್​

ಕೊಟ್ಟ ಮಾತು ಉಳಿಸಿಕೊಳ್ಳಲು ಉಚಿತ ಯೋಜನೆ ಬಗ್ಗೆ ತಲೆ ಕೆಡಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಗುತ್ತಿಗೆದಾರು ಶಾಕ್ ಕೊಟ್ಟಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಾಮಗಾರಿಗಳ ಬಾಕಿ ಬಿಲ್ ಕ್ಲಿಯರ್ ಆಗುತ್ತೋ ಇಲ್ವೋ ಎಂಬ ಆತಂಕ ಗುತ್ತಿಗೆದಾರರಿಗೆ ಕಾಡುತ್ತಿದ್ದೆ. ಕಳೆದ 2ವರ್ಷದಿಂದ ಸಾವಿರಾರು ಕೋಟಿ ರೂ. ಬಿಲ್ ಬಾಕಿ ಇದ್ದು, ಈಗ ಬಿಲ್ ಕ್ಲಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: KKRDB Committee: ಕೆಕೆಆರ್​ಡಿಬಿಗೆ ಸಮಿತಿ ರಚನೆ, ಅಧ್ಯಕ್ಷರಾಗಿ ಡಾ.ಅಜಯಸಿಂಗ್ ನೇಮಕ

ಕೆಲ ಗುತ್ತಿಗೆದಾರರು ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನಡುವಿನ ತಿಕ್ಕಾಟ ಜೋರಾಗಿದೆ. ಇತ್ತೀಚೆಗೆ ಕೆಲ ಗುತ್ತಿಗೆದಾರರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಇಂದು ಸಚಿವ ಆರ್​ ಅಶೋಕ್​ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಡಿಕೆ ಶಿವಕುಮಾರ್​ ಬಾಕಿ ಬಿಲ್ ವಿರತಣೆ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿಲ್ಲ ಅನ್ನೋದಾದ್ರೆ, ದೇವರ ಮುಂದೆ ಪ್ರಮಾಣ ಮಾಡಲಿ ಅಂತಲೂ ಸವಾಲು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!