6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ

ಅನಾಮಧೇಯ ಟ್ವಿಟರ್‌ ಖಾತೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ ಕಮಾಂಡ್‌ ಸೆಂಟರ್‌ಗೆ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ. ಆರು ವಿಮಾನದಲ್ಲಿ ಇಬ್ಬರು ಬಾಂಬರ್‌ಗಳಂತೆ ಒಟ್ಟು 12 ಬಾಂಬರ್‌ಗಳಿರುವುದಾಗಿ ಟ್ವೀಟ್‌ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ.

6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ
6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 20, 2024 | 5:30 PM

ಬೆಂಗಳೂರು ಗ್ರಾಮಾಂತರ, ಅಕ್ಟೋಬರ್​ 20: ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ನ (Kempegowda International Airport) ಕಮಾಂಡ್‌ ಸೆಂಟರ್‌ಗೆ ಬಾಂಬ್‌ ಬೆದರಿಕೆ ಸಂದೇಶ ರವಾನೆ ಮಾಡಿರುವಂತಹ ಘಟನೆ ನಡೆದಿದೆ. 6 ವಿಮಾನಗಳಲ್ಲಿ ಇಬ್ಬರು ಒಟ್ಟು 12 ಬಾಂಬರ್‌ಗಳಿರುವುದಾಗಿ ಅನಾಮಧೇಯ ಟ್ವಿಟರ್‌ ಖಾತೆಯಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ. ಸದ್ಯ ಹುಸಿ ಬಾಂಬ್‌ ಬೆದರಿಕೆ ಮೆಸೇಜ್ ಮಾಡಿದವರ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಡಿಗೋ ಏರ್‌ಲೈನ್ಸ್‌ನ IX 233, IX 375, IX 481, IX 383, IX 549, IX 399 ವಿಮಾನಗಳಲ್ಲಿ ಬಾಂಬರ್‌ಗಳಿರುವುದಾಗಿ ಟ್ವೀಟ್‌ ರವಾನಿಸಲಾಗಿದೆ. ಮಂಗಳೂರು-ದುಬೈ, ತಿರುವನಂತಪುರಂ-ಮಸ್ಕಟ್ ಸೇರಿದಂತೆ ದೇಶದ ವಿವಿಧ ಏರ್‌ಪೋರ್ಟ್‌ಗಳಿಂದ ತೆರಳುವ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ಬೆದರಿಕೆ ಮೆಸೇಜ್ ಹಿನ್ನೆಲೆ ಏರ್‌ಪೋರ್ಟ್‌ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಕಳೆದ ಒಂದು ವಾರದಲ್ಲಿ ಎರಡನೇ ಸಲ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ಗೆ ಹುಸಿ ಬಾಂಬ್‌ ಬೆದರಿಕೆ ಬಂದಿದೆ.

ಕೆಂಪೇಗೌಡ ಏರ್‌ಪೋರ್ಟ್​ನಲ್ಲಿ ಇಂಡಿಗೋ ಪ್ರಯಾಣಿಕರ ಪರದಾಟ

ಇಂಡಿಗೋ ಸರ್ವರ್ ಡೌನ್ ಆದ ಹಿನ್ನಲೆ ಏರ್ಪೋಟ್ಗಳಲ್ಲಿ ಪ್ರಯಾಣಿಕರು ಪರದಾಡಿದ್ದರು. ಅದರಲ್ಲೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಪ್ರಯಾಣಿಕರು ಸರ್ವರ್ ಡೌನ್​ನಿಂದ ತೀವ್ರ ಸಮಸ್ಯೆ ಎದುರಿಸಿದ್ದರು.

ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್ 1ರಲ್ಲಿ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿತ್ತು. ಜೊತೆಗೆ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ಟರ್ಮಿನಲ್ 1 ರಲ್ಲಿ ನಲ್ಲಿ ಸಾವಿರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು.

ಇದನ್ನೂ ಓದಿ: ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಚೆಕ್ಇನ್ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್ನಲ್ಲೂ ವಿಳಂಬವಾಗಿದ್ದು, ಏರ್ಲೈನ್ಸ್ ಸಿಬ್ಬಂದಿಗಳು ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Sun, 20 October 24

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು