ಮೈಸೂರಿನಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಟಿವಿ9 ಮುಂದೆ ಅಳಲು
ಬಹಿಷ್ಕಾರಕ್ಕೊಳಗಾದವರು ವಿವಾಹವೊಂದರಲ್ಲಿ ಭಾಗಿಯಾಗಿದ್ದಕ್ಕೆ 25 ಸಾವಿರ ರೂ. ದಂಡ ವಿಧಿಸಿದ್ದಾರಂತೆ. ಈ ಕುರಿತು ಬಹಿಷ್ಕಾರಕ್ಕೆ ಒಳಗಾದ ಕುಟುಂಬದವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಮೈಸೂರು: ಸುಮಾರು 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ. ತಮಗಾದ ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅದೇ ಗ್ರಾಮದ ಜನರು ಬಹಿಷ್ಕಾರ ಹಾಕಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಗ್ರಾಮ ಪಂಚಾಯತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬದ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.
ಬಹಿಷ್ಕಾರಕ್ಕೊಳಗಾದವರು ವಿವಾಹವೊಂದರಲ್ಲಿ ಭಾಗಿಯಾಗಿದ್ದಕ್ಕೆ 25 ಸಾವಿರ ರೂ. ದಂಡ ವಿಧಿಸಿದ್ದಾರಂತೆ. ಈ ಕುರಿತು ಬಹಿಷ್ಕಾರಕ್ಕೆ ಒಳಗಾದ ಕುಟುಂಬದವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಜಾಗದಲ್ಲಿ ವಾಲ್ಮೀಕಿ ಭವನ ಕಟ್ಟಲು ಮುಂದದಾಗ ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬಗಳು ಪ್ರಶ್ನೆ ಮಾಡಿವೆ. ಪ್ರಶ್ನೆ ಮಾಡಿದ್ದಕ್ಕೆ ಪರಿಹಾರ ಕೊಡುವುದಾಗಿ ಹೇಳಿದ್ದರಂತೆ. ಆದರೆ ಇದೀಗ ಪರಿಹಾರವು ಇಲ್ಲ, ಜಾಗವು ನಿಮ್ಮದಲ್ಲ ಎನ್ನುತ್ತಿದ್ದಾರಂತೆ. ಹೀಗಾಗಿ ಕುಟುಂಬಗಳು ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ. ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕಿನಿಂದ ಭವನ ಕಟ್ಟುತ್ತಿದ್ದಾರೆ ಅಂತ ಆರೋಪಿಸುತ್ತಿದ್ದಾರೆ. ಸದ್ಯ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ
ಸೋಯಾಬೀನ್ ಮೂಟೆಗಳಿಗೆ ದುಷ್ಕರ್ಮಿಗಳಿಂದ ಬೆಂಕಿ; 200ಕ್ಕೂ ಹೆಚ್ಚು ಮೂಟೆ ಬೆಂಕಿಗಾಹುತಿ
Gold Price Today: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಆಭರಣಗಳ ಬೆಲೆ ಪರಿಶೀಲಿಸಿ
Published On - 8:50 am, Wed, 27 October 21