ರಾಜ್ಯದಲ್ಲಿ ಒಂದೇ ದಿನ ಶತಕ ದಾಟಿದೆ, 91 ಮಂದಿಗೆ ಮಹಾರಾಷ್ಟ್ರ ಲಿಂಕ್

ಸಾಧು ಶ್ರೀನಾಥ್​

|

Updated on:May 19, 2020 | 2:11 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 127 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 62 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ 19, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಚಿಕ್ಕಮಗಳೂರು 2, ಶಿವಮೊಗ್ಗ 12, ಉತ್ತರ ಕನ್ನಡ 4, ಹಾಸನ 3, ಗದಗ, ಯಾದಗಿರಿ, […]

ರಾಜ್ಯದಲ್ಲಿ ಒಂದೇ ದಿನ ಶತಕ ದಾಟಿದೆ, 91 ಮಂದಿಗೆ ಮಹಾರಾಷ್ಟ್ರ ಲಿಂಕ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 127 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 62 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ 19, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಚಿಕ್ಕಮಗಳೂರು 2, ಶಿವಮೊಗ್ಗ 12, ಉತ್ತರ ಕನ್ನಡ 4, ಹಾಸನ 3, ಗದಗ, ಯಾದಗಿರಿ, ವಿಜಯಪುರ, ಚಿತ್ರದುರ್ಗದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ. 127 ಕೊರೊನಾ ಸೋಂಕಿತರ ಪೈಕಿ 15 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಂದೇ ದಿನ ಮೂವರು ಸಾವು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬರು, ವಿಜಯಪುರದಲ್ಲಿ ಒಬ್ಬರು ಹಾಗೂ ಬೆಂಗಳೂರಿನಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಮಂಡ್ಯಗೆ ‘ಮಹಾ’ ಆಘಾತ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು ಹೊಸದಾಗಿ 62 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೆ.ಆರ್.ಪೇಟೆ ತಾಲೂಕಿನ 40 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ನಾಗಮಂಗಲ ತಾಲೂಕಿನ 22 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಮಹಾರಾಷ್ಟ್ರದ ಮುಂಬೈ ಸಂಪರ್ಕದಿಂದ ಎಲ್ಲಾ 62 ಜನರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಇಂದು ರಾಜ್ಯದ 91 ಸೋಂಕಿತರಿಗೆ ಮಹಾರಾಷ್ಟ್ರದ ಲಿಂಕ್ ಇದೆ.

ಚಾಮರಾಜನಗರ ಒಂದೇ ಜಿಲ್ಲೆ ಗ್ರೀನ್ ಜೋನ್: ಮಹಾಮಾರಿ ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಕರ್ನಾಟಕದ 30 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಸೋಂಕು ವ್ಯಾಪಿಸಿದೆ. ಸದ್ಯ ಚಾಮರಾಜನಗರ ಜಿಲ್ಲೆ ಗ್ರೀನ್ ಜೋನ್​ನಲ್ಲಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada