ರಾಜ್ಯದಲ್ಲಿ ಬರಗಾಲ ಆವರಿಸಿದ್ದರಿಂದ ಜಲ ಮೂಲಗಳು ಬರಿದಾಗುತ್ತಾವೆ. ಇದರಿಂದ ಕುಡಿಯಲು ನೀರು ಸಿಗದಂತಾಗಿದೆ. ಬೆಂಗಳೂರಿನಲ್ಲಂತೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹನಿ ನೀರಿಗಾಗಿ ಪರದಾಡುವಂತಾಗಿದೆ. ಕೆಆರ್ಎಸ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಬಹಳ ಕುಸಿತಗೊಂಡಿದ್ದು, ಬೆಂಗಳೂರು ನಗರಕ್ಕೆ ನೀರು ಪೂರೈಕೆ ತಲೆನೋವಾಗಿದೆ. ಹಾಗಾದರೆ ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ 12 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 43.65 | 44.96 | 0 | 11741 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 7.03 | 21.56 | 0 | 2135 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 11.23 | 13.20 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 14.98 | 25.68 | 169 | 1468 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 36.04 | 60.23 | 0 | 3184 |
ಕಬಿನಿ ಜಲಾಶಯ (Kabini Dam) | 696.13 | 19.52 | 10.73 | 08.61 | 27 | 1292 |
ಭದ್ರಾ ಜಲಾಶಯ (Bhadra Dam) | 657.73 | 71.54 | 24.93 | 48.74 | 86 | 498 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 26.04 | 19.57 | 0 | 106 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 13.04 | 20.68 | 36 | 370 |
ವರಾಹಿ ಜಲಾಶಯ (Varahi Dam) | 594.36 | 31.10 | 7.22 | 8.25 | 0 | 1093 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.35 | 3.22 | 189 | 200 |
ಸೂಫಾ (Supa Dam) | 564.00 | 145.33 | 55.17 | 72.48 | 78 | 3584 |
ಇಂದು ರಾಜ್ಯದಾದ್ಯಂತ ಒಣ ಹವೆ ಬೀಸಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಡ್ತಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ