AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ರಮೇಶ್ ಬಿ. ಜವಳಗೇರಾ
|

Updated on: Jun 03, 2026 | 1:58 PM

Share

ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್​ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿ​ದ್ದಾರೆ. ಇನ್ನು ಮೊದಲ ಪಟ್ಟಿಯಲ್ಲಿ ಹಲವು ಘಟಾನುಘಟಿ ನಾಯಕರಿಗೆ ಸ್ಥಾನ ಸಿಕ್ಕಿಲ್ಲ.

ಒಕ್ಕಲಿಗರ ಕೋಟಾದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಮೂವರಿಗೆ ಸ್ಥಾನ ನೀಡಲಾಗಿದ್ದರೆ, ಲಿಂಗಾಯತ ಕೋಟಾದಲ್ಲಿ ಮೂವರು, ದಲಿತ ಕೋಟಾದಡಿ ಪರಮೇಶ್ವರ್ ಸೇರಿ ಮೂವರು, ಕುರುಬ ಸಮುದಾಯದಡಿ ಇಬ್ಬರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಇನ್ನು ಎಸ್​​ಟಿ, ಮುಸ್ಲಿಮ್, ಕ್ರಿಶ್ಚಿಯನ್​​ ಕೋಟಾದಡಿ ತಲಾ ಒಬ್ಬರಿಗೆ ಸ್ಥಾನ ನೀಡಲಾಗಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More