ಜಲ ಕಂಟಕ: ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 13 ಮಂದಿ ಜಲ ಸಮಾಧಿ!

ಕರ್ನಾಟಕದಲ್ಲಿ ಇಂದು ಹಲವೆಡೆ ಹೋಳಿ ಆಚರಣೆ ಮಾಡಲಾಗಿದ್ದು, ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ್ದಾರೆ. ಅದ್ಧೂರಿಯಾಗಿ ಹೋಳಿ ಹಬ್ಬ ಆಚರಿಸಿ ನಂತರ ಸ್ನಾನ‌ ಮಾಡಲೆಂದು ಈಜಾಡಲು ಹೋದವರು ನೀರು ಪಾಲಾಗಿದ್ದಾರೆ. ಹೀಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ ಬರೋಬ್ಬರಿ 13 ಜನ ಜಲ ಸಮಾಧಿಯಾಗಿದ್ದಾರೆ.

ಜಲ ಕಂಟಕ: ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 13 ಮಂದಿ ಜಲ ಸಮಾಧಿ!
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Mar 26, 2024 | 10:38 PM

ಬೆಂಗಳೂರು, (ಮಾರ್ಚ್ 26): ಕರ್ನಾಟಕದಲ್ಲಿ ಇಂದು(ಮಾರ್ಚ್ 26) ಒಂದೇ ದಿನ 12 ಜನರು ಜಲ ಸಮಾಧಿಯಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಜಲು ಹಾಗೂ ಮೀನು ಹಿಡಿಯಲು ಹೋದ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಮಂಡ್ಯ, ಗದಗ, ಶಿವಮೊಗ್ಗ, ಉಡುಪಿ, ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾವುಗಳು ಸಂಭವಿಸಿವೆ.

ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ದುರ್ಮರಣ

ಪ್ರತ್ಯೇಕ ಕಡೆಗಳಲ್ಲಿ ಈಜಲು ಹಾಗೂ ಮೀನು ಹಿಡಿಯಲು ಹೋದ ಒಟ್ಟು 13 ಮಂದಿ ಒಂದೇ ದಿನ ಜಲ ಸಮಾಧಿಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಲು ಹೋದ ತಂದೆ ಮಗ ಸೇರಿ ನಾಲ್ವರು (Drowned In Water) ಮೃತಪಟ್ಟಿದ್ದಾರೆ. ಮೈಸೂರು ಕನಕಗಿರಿ ಬಡಾವಣೆ ನಿವಾಸಿಗಳಾದ ನಾಗೇಶ್ (40) ಇವರ ಮಗ ಭರತ್ (17) ಹಾಗೂ ಗುರು (32), ಮಹಾದೇವ್ (16) ಮೃತ ದುರ್ದೈವಿಗಳು. ದೇವರ ಕಾರ್ಯಕ್ಕೆಂದು ಮುತ್ತತ್ತಿಗೆ ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಈಜಲು ಹೋಗಿದ್ದಾರೆ. ಆದರೆ ನೀರಿನ ರಭಸಕ್ಕೆ ನಾಲ್ವರು ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ನಾಗೇಶ್‌ ಹಾಗೂ ಭರತ್‌ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಗುರು ಹಾಗೂ ಮಹಾದೇವ್ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಯುವಕ ಕೆರೆಯಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಈಜಾಡಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಯಾದಗಿರಿ ತಾಲೂಕಿನ ಅರಕೇರಾ ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಲಿಂಗಪ್ಪ (18) ಮೃತ ದುರ್ದೈವಿ. ಬೆಳಗ್ಗೆ ಸ್ನೇಹಿತರ ಜತೆ ಬಣ್ಣದೋಕಳಿ ಆಡಿ ನಂತರ ತಮ್ಮನೊಟ್ಟಿಗೆ ಕೆರೆಗೆ ಈಜಾಡಲು ತೆರಳಿದ್ದಾನೆ. ಆದರೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು

ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರುಪಾಲಾದ (Drowned in River) ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ (Seeta river) ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು. ಮಾ.26ರ ಬೆಳಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದರು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೇ ವೇಳೆ ಅಲ್ಲಿದ್ದ ಸ್ಥಳೀಯರು ಮುಳುಗುತ್ತಿರುವವರ ರಕ್ಷಣೆಗೆ ಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ.

ಮೈಸೂರಿನಲ್ಲಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಸಾವು

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಬಿಸಿಲ ತಾಪದಿಂದ (Temperature rising) ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ ಮೈಸೂರಿನಲ್ಲಿ ಬಿಸಿಲ ತಾಪಮಾನವು ಮೂವರ ಜೀವ ತೆಗೆದಿದೆ. ಸೆಕೆ ತಾಳಲಾರದೆ ಮೂವರು ಕೆರೆಯಲ್ಲಿ ಈಜಲು (Drowned in River) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಮಿಲನ್ (25), ಮೋಹನ್ (19), ತರುಣ್ (19) ಮೃತ ಕಾರ್ಮಿಕರು. ಈ ಮೂವರು ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಹೊರ ಬಂದ ಯುವಕರು ಬೇಸಿಗೆಯ ಸೆಖೆ ತಾಳಲಾರದೆ ಕಪಿಲಾ ನದಿಗೆ ಇಳಿದಿದ್ದಾರೆ. ಆದರೆ ಕಪಿಲಾ ನದಿಗೆ ಇಳಿದವರು ಸುಳಿಗೆ ಸಿಲುಕಿ ಹೊರಬರಲು ಆಗದೆ ಮೃತಪಟ್ಟಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕಾಲು ಜಾರಿ ಕೃಷಿ ಹೊಂಡಕ್ಕೆ (Drowned in Pond) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ತೋಟದಲ್ಲಿ ಘಟನೆ (Bengaluru Rural) ನಡೆದಿದೆ. ಉಜ್ಜನಿ ಹೊಸಹಳ್ಳಿ ಗ್ರಾಮದ ಸುನೀಲ್ (30) ಮೃತ ದುರ್ದೈವಿ. ಸುನೀಲ್‌ 2 ತಿಂಗಳ ಹಿಂದಷ್ಟೇ ತೋಟದ ಕೆಲಸಕ್ಕೆ ಸೇರಿಕೊಂಡಿದ್ದರು. ತೋಟದಲ್ಲೇ ವಾಸವಿದ್ದ ಸುನೀಲ್‌ ಬಿಹಾರ ಮೂಲದ ಕಾರ್ಮಿಕರ ಜತೆ ಹೋಳಿ ಆಚರಿಸಿದ್ದ. ಹೋಳಿ ಹಬ್ಬ ಆಚರಿಸಿ‌ ಹೊಂಡದಲ್ಲಿ ಕೈ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಿದ್ದ ರಭಸಕ್ಕೆ ಮುಖಕ್ಕೆ ತೀವ್ರವಾಗಿ ಗಾಯವಾಗಿರುವ ಗುರುತು ಇದೆ. ಕಾರ್ಮಿಕರು ಕೃಷಿ ಹೊಂಡದ ಬಳಿ ಬಂದಾಗ ಸುನೀಲ್ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಗದಗದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಯುವಕ

ಅದ್ಧೂರಿಯಾಗಿ ಹೋಳಿ ಹಬ್ಬ ಆಚರಿಸಿ ನಂತರ ಸ್ನಾನ‌ ಮಾಡಲೆಂದು ನದಿಗೆ ತೆರಳಿದ ಯುವಕ‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬ್ಯಾರೇಜ್‌ನಲ್ಲಿ ಘಟನೆ ನಡೆದಿದೆ. ಯುವರಾಜ ವಿಶ್ವನಾಥ ಕೊಂಪಿ (23) ಮೃತ ದುರ್ದೈವಿ. ವಿಜಯನಗರ ಜಿಲ್ಲೆ ಹಿರೇಹಡಗಲಿ‌ ಗ್ರಾಮದ ನಿವಾಸಿಯಾದ ಯುವರಾಜ ಹೋಳಿ ಹಬ್ಬ ಮುಗಿಸಿಕೊಂಡು ಸ್ನೇಹಿತರೊಟ್ಟಿಗೆ ಸ್ನಾನಕ್ಕೆಂದು ನದಿಗೆ ಬಂದಿದ್ದ. ಶಿಂಗಟಾಲೂರು ಏತ ‌ನೀರಾವರಿಯ ಬ್ಯಾರೇಜ್‌ನಲ್ಲಿ ಈಜಲು ತೆರಳಿದಾಗ, ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ.

ಹೊಳೆಯಲ್ಲಿ ಕಾಲು ಜಾರಿ ಬಿದ್ದು ಯುವತಿ ಸಾವು

ಶಿವಮೊಗ್ಗ: ಹೊಳೆಯಲ್ಲಿ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟು, ಮತ್ತೊಬ್ಬ ಯುವತಿಯನ್ನು ರಕ್ಷಣೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ಜಾತ್ರೆಗೆ ಉಜ್ಜನಿಪುರ ಗ್ರಾಮದ ಇಬ್ಬರು ಯುವತಿಯರು ಹೋಗಿದ್ದರು. ಹೊಳೆಯಲ್ಲಿ ಕಾಲು ತೊಳೆಯಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರ ಪೈಕಿ ಒಬ್ಬ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮತ್ತೊಬ್ಬ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

Published On - 10:36 pm, Tue, 26 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ