ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 1350 ಮಕ್ಕಳಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಅಧಿಕೃತ ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 250 ಮಕ್ಕಳಿಗೆ ಸೋಂಕು ಸಕ್ರಿಯವಾಗಿದ್ದು, ಕೊವಿಡ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯವೆಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಕ್ಕಳನ್ನು ಕೊವಿಡ್ ಮೂರನೇ ಅಲೆಯಿಂದ ರಕ್ಷಿಸಲು ಸಕಲ ಸಿದ್ಧತೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಸೋಂಕಿತ ಮಕ್ಕಳ ಚಿಕಿತ್ಸೆಗಾಗಿ ವಿಶೇಷ ತಯಾರಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 4 ತಾಲೂಕು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಸೆಂಟರ್ ತೆರೆಯಲು ಆದೇಶಿಸಲಾಗಿದ್ದು, ಆಕಾಶ್ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 25 ಬೆಡ್ ಮೀಸಲು ಇರಿಸಲಾಗಿದೆ. ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಜತೆಗೆ ಮಕ್ಕಳಿಗಾಗಿ ಐಸಿಯು ಹಾಗೂ ಎನ್‌ಐಸಿಯು ಮಾದರಿ ಬೆಡ್‌ಗಳನ್ನು ಸಹ ಸಿದ್ದಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.
ಇದನ್ನೂ ಓದಿ: ಸೋನು ಸೂದ್ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್ ಸ್ಟಾರ್ಗಳು
ಹೊಸ ಐಟಿ ನಿಯಮಗಳ ಉಲ್ಲಂಘನೆ: ಟ್ವಿಟರ್ ವಿರುದ್ಧ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ದಾಖಲು