ನವದೆಹಲಿ, ಮಾ.15: ಕರ್ನಾಟಕದ ರಸ್ತೆ ಯೋಜನೆಗಳಿಗೆ 1385.60 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಗುರುವಾರ ತಿಳಿಸಿದ್ದಾರೆ. ಯೋಜನೆಗಳು ವಿವಿಧ ಜಿಲ್ಲೆಗಳಲ್ಲಿ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿಯಲ್ಲಿ ಒಟ್ಟು 2055.62 ಕಿ.ಮೀ. ಉದ್ದದ 295 ರಸ್ತೆ ಅಭಿವೃದ್ಧಿ ಯೋಜನೆಗಳ ವರ್ಧನೆ ಮತ್ತು ಬಲವರ್ಧನೆಯನ್ನು ಒಳಗೊಂಡಿವೆ ಎಂದು ಸಚಿವರು ಹೇಳಿದರು. ಈ ಪ್ರಯತ್ನವು ರಾಜ್ಯದಲ್ಲಿ ಮೂಲಸೌಕರ್ಯವನ್ನು ನವೀಕರಿಸುತ್ತದೆ ಮತ್ತು ಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದರು.
ಇತ್ತೀಚೆಗೆಷ್ಟೇ, ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದಿದ್ದ 22 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಿತಿನ್ ಗಡ್ಕರಿ, ಕರ್ನಾಟಕದ ರಸ್ತೆಗಳ ಚಿತ್ರಣ 2024 ರ ಮುಕ್ತಾಯದ ವೇಳೆಗೆ ಕರ್ನಾಟಕದ ರಸ್ತೆಗಳ ಚಿತ್ರಣ ಬದಲಾಗಲಿದ್ದು, ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ನಿತಿನ್ ಗಡ್ಕರಿ ಅವರು ಅನುದಾನ ಬಿಡುಗಡೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಕರ್ನಾಲ್‌ನಿಂದ ಖಟ್ಟರ್, ನಾಗ್ಪುರದಿಂದ ಗಡ್ಕರಿಗೆ ಟಿಕೆಟ್
ಮೈಸೂರು, ಹಾಸನಕ್ಕೆ ರಿಂಗ್ ರಸ್ತೆ ಮಾಡಿಸುತ್ತೇನೆ. ಕುಶಾಲನಗರ- ಮಾಣಿ ರಸ್ತೆಗೆ ಡಿಪಿಆರ್ ಮಾಡಿಸುತ್ತೇವೆ ಎಂದು ಹೇಳಿದ್ದ ನಿತಿನ್ ಗಡ್ಕರಿ, ಮೈಸೂರು- ನಂಜನಗೂಡು 6 ಪಥದ ರಸ್ತೆ ಕಾಮಗಾರಿ ಶೀರ್ಘದಲ್ಲೇ ಆರಂಭಗೊಳ್ಳಲಿದೆ. ಬೆಂಗಳೂರು-ಚೆನ್ನೈ ನಡುವೆ 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿದೆ. ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈ ತಲುಪಬಹುದು ಎಂದಿದ್ದರು.
ಬೆಂಗಳೂರಿನ ರಿಂಗ್ ರಸ್ತೆ ಮುಖ್ಯ. 280 ಕಿ.ಮೀ. ರಿಂಗ್ ರಸ್ತೆ ಡಿಸೆಂಬರ್‌ನಲ್ಲಿ ಪೂರ್ಣವಾಗಲಿದೆ. ಇದರಿಂದ ಬೆಂಗಳೂರು ಟ್ರಾಫಿಕ್ ಜಾಮ್ ಮುಕ್ತವಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ